Categories: Shivamogga

ಸಹ್ಯಾದ್ರಿ ಕಾಲೇಜಿನಲ್ಲಿ ಮತ ಎಣಿಕೆಗೆ ಸಕಲ ಸಿದ್ಧತೆ ; ಜಿಲ್ಲಾಧಿಕಾರಿ ಆರ್.ಸೆಲ್ವಮಣಿ

ಶಿವಮೊಗ್ಗ: ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಮೇ 13ರಂದು ಶನಿವಾರ ಬೆಳಿಗ್ಗೆ 8ಗಂಟೆಯಿಂದ ಪ್ರಾರಂಭವಾಗಲಿದ್ದು, ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದ್ದಾರೆ.

ಅಂಚೆ ಮತ ಎಣಿಕೆಗೆ ಸಂಬಂಧಿಸಿದಂತೆ ವಿಧಾನಸಭಾ ಕ್ಷೇತ್ರವಾರು ಹೆಚ್ಚುವರಿಯಾಗಿ 6 ಮಂದಿ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅಭ್ಯರ್ಥಿಗಳು ಹಾಗೂ ಚುನಾವಣಾ ಏಜೆಂಟರು ಶನಿವಾರ ಬೆಳಿಗ್ಗೆ 7ಗಂಟೆಗೆ ಮತ ಎಣಿಕೆ ಕೇಂದ್ರದ ಭದ್ರತಾ ಕೊಠಡಿಯ ಆವರಣಕ್ಕೆ ಆಗಮಿಸಲು ಸೂಚನೆ ನೀಡಲಾಗಿದೆ. ಬೆಳಿಗ್ಗೆ 7ಗಂಟೆಗೆ ಭದ್ರತಾ ಕೊಠಡಿಯ ಬಾಗಿಲನ್ನು ತೆರೆಯಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 14 ಮತ ಎಣಿಕೆ ಟೇಬಲ್‌ಗಳು ಮತ್ತು ಸಹಾಯಕ ಚುನಾವಣಾಧಿಕಾರಿಯ ಟ್ಯಾಬುಲೇಷನ್ ಟೇಬಲ್ ಇರುತ್ತದೆ. ಮತ ಎಣಿಕೆ ಸ್ಥಳದಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು ಮತ್ತು ಚುನಾವಣಾ ಏಜೆಂಟರಿಗೆ ಹಾಗೂ ಮತ ಎಣಿಕೆ ಏಜೆಂಟರು ಪ್ರವೇಶಿಸಲು ಅವಕಾಶವಿರುವುದು.

ಅಂಚೆ ಮತಪತ್ರಗಳ ಎಣಿಕೆ ಮತ್ತು ಕಂಟ್ರೋಲ್ ಯುನಿಟ್ ಮೂಲಕ ಮತ ಎಣಿಕೆಯನ್ನು ಬೆಳಿಗ್ಗೆ 8ಗಂಟೆಗೆ ಆರಂಭಿಸಲಾಗುವುದು. ಪ್ರತಿ ಮತ ಎಣಿಕೆ ಟೇಬಲ್‌ಗೆ ಒಬ್ಬ ಮೇಲ್ವಿಚಾರಕ, ಒಬ್ಬ ಸಹಾಯಕ ಮತ್ತು ಒಬ್ಬ ಮೈಕ್ರೋ ಅಬ್ಸರ್ವರ್ ನೇಮಕ ಮಾಡಿ ತರಬೇತಿ ನೀಡಲಾಗಿದೆ. ಇವಿಎಂ ಮತ ಎಣಿಕೆ ಪೂರ್ಣಗೊಂಡ ಬಳಿಕ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಐದು ವಿವಿಪ್ಯಾಟ್‌ಗಳನ್ನು ಆಯ್ಕೆ ಮಾಡಿ ಎಣಿಕೆ ಮಾಡಲಾಗುವುದು. ಮತ ಎಣಿಕೆ ಹಾಲ್‌ನಲ್ಲಿ ಮೊಬೈಲ್ ಮತ್ತಿತರ ಎಲೆಕ್ಟ್ರಾನಿಕ್ ವಸ್ತುಗಳನ್ನು ನಿರ್ಬಂಧಿಸಲಾಗಿದೆ. ಮತ ಎಣಿಕೆ ಆವರಣದ ಸುತ್ತ ಸೆಕ್ಷನ್ 144 ಜಾರಿಗಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಮತ ಎಣಿಕೆ ಸುತ್ತು ವಿವರ:

ಶಿವಮೊಗ್ಗ ಗ್ರಾಮೀಣ ಕ್ಷೇತ್ರದಲ್ಲಿ 247 ಮತಗಟ್ಟೆಗಳಿದ್ದು 18 ಸುತ್ತಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಇದೇ ರೀತಿ ಭದ್ರಾವತಿ 253 ಮತಗಟ್ಟೆ 19 ಸುತ್ತು, ಶಿವಮೊಗ್ಗ 284 ಮತಗಟ್ಟೆ 21 ಸುತ್ತು, ತೀರ್ಥಹಳ್ಳಿ 258 ಮತಗಟ್ಟೆ 19 ಸುತ್ತು, ಶಿಕಾರಿಪುರ 234 ಮತಗಟ್ಟೆ 17 ಸುತ್ತು, ಸೊರಬ 239 ಮತಗಟ್ಟೆ 18 ಸುತ್ತು ಹಾಗೂ ಸಾಗರದಲ್ಲಿ 267 ಮತಗಟ್ಟೆಗಳಿದ್ದು, 20 ಸುತ್ತಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

ಜಿಲ್ಲಾಧಿಕಾರಿ ಅಭಿನಂದನೆ:

ಜಿಲ್ಲೆಯಲ್ಲಿ ಮತದಾನ ಸಂಪೂರ್ಣ ಶಾಂತಿಯುತವಾಗಿ ನಡೆದಿದ್ದು ಯಾವುದೇ ಅಹಿತಕರ ಘಟನೆಗಳು ನಡೆದಿರುವುದಿಲ್ಲ. ಜಿಲ್ಲೆಯಲ್ಲಿ ಒಟ್ಟು 1782 ಮತಗಟ್ಟೆಗಳಲ್ಲಿ ಮತದಾನ ಸುಗಮವಾಗಿ ನಡೆದಿದ್ದು, 8100 ಸಿಬ್ಬಂದಿಗಳು ಚುನಾವಣಾ ಕರ್ತವ್ಯ ನಿರ್ವಹಿಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದ ಎಲ್ಲಾ ಮತದಾರರಿಗೆ ಹಾಗೂ ಸುಗಮವಾಗಿ ಮತದಾನ ಆಯೋಜಿಸಲು ಸಹಕರಿಸಿದ ಎಲ್ಲಾ ಅಧಿಕಾರಿ/ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

Malnad Times

Recent Posts

ಸೊರಬ ಮತಗಟ್ಟೆ ಸಂಖ್ಯೆ 159 ರಲ್ಲಿ ಕೈಕೊಟ್ಟ ಮತಯಂತ್ರ, ಸ್ಥಗಿತಗೊಂಡ ಮತದಾನ

ಸೊರಬ: ಪಟ್ಟಣದ ಚಿಕ್ಕಪೇಟೆಯ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ (ಪೂರ್ವ ಭಾಗ) ಮತಗಟ್ಟೆ ಸಂಖ್ಯೆ 159 ರಲ್ಲಿ ಸುಮಾರು…

1 hour ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಬೆಳಗ್ಗೆ 9 ಗಂಟೆಯವರೆಗೆ ಶೇ. 11.39 ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು ?

ಶಿವಮೊಗ್ಗ : ಉತ್ತರ ಮತ್ತು ಮಧ್ಯ ಕರ್ನಾಟಕ ಕ್ಷೇತ್ರಗಳಲ್ಲಿ ಇಂದು 2ನೇ ಹಂತದ ಮತದಾನ ನಡೆಯುತ್ತಿದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ…

2 hours ago

Rain Alert | ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…

4 hours ago

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

16 hours ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

17 hours ago

ಮತದಾನಕ್ಕೆ ಕೌಂಟ್‌ಡೌನ್ | ಮತಗಟ್ಟೆಗಳಿಗೆ ಮತಯಂತ್ರ ಇತರ ಪರಿಕರಗಳೊಂದಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…

17 hours ago