Categories: Shivamogga

ಸಿಎಂ ಸಿದ್ಧರಾಮಯ್ಯ ಸೇರಿದಂತೆ ಸಂಪುಟ ಸಚಿವರ ಉಪಸ್ಥಿತಿಯಲ್ಲಿ ಜ. 12ರಂದು ಯುವನಿಧಿ 5ನೇ ಗ್ಯಾರಂಟಿ ಯೋಜನೆ ಲೋಕಾರ್ಪಣೆ ; ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : 2024ರ ಜನವರಿ 12ರಂದು ನಗರದ ಫ್ರೀಡಂ ಪಾರ್ಕ್ ಆವರಣದಲ್ಲಿ ಯುವನಿಧಿ (Yuvanidhi) ಸರ್ಕಾರದ 5ನೇ ಮಹತ್ವಾಕಾಂಕ್ಷಿ ಯೋಜನೆಯ ಅನುಷ್ಠಾನ ಕಾರ್ಯಕ್ರಮವನ್ನು ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಅವರು ಸೇರಿದಂತೆ ಸಚಿವ ಸಂಪುಟದ ಸದಸ್ಯರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ (Madhu Bangarappa) ಅವರು ಹೇಳಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಚುನಾವಣಾ ಪೂರ್ವದಲ್ಲಿ ಕೊಟ್ಟ ಮಾತಿನಂತೆ ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ ಮತ್ತು ಗೃಹಲಕ್ಷ್ಮೀ ಯೋಜನೆಗಳು ಈಗಾಗಲೇ ಅನುಷ್ಠಾನಗೊಳಿಸಲಾಗಿದ್ದು, 5ನೇ ಗ್ಯಾರಂಟಿ ಯೋಜನೆಯನ್ನು ಜನವರಿ 12ರಂದು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದವರು ನುಡಿದರು.
ಪ್ರಗತಿ ಎಂಬುದು ಒಂದು ನಿರಂತರ ಪ್ರಕ್ರಿಯೆ. ಈ ಹಾದಿಯಲ್ಲಿ ಯಾರೂ ಅವಕಾಶ ವಂಚಿತರಾಗಬಾರದು. ಸಮಾಜದ ಪ್ರತಿಯೊಬ್ಬರಿಗೂ ಪ್ರಗತಿಯ ಫಲಗಳು ದೊರೆಯಬೇಕು ಹಾಗೂ ಅಭಿವೃದ್ಧಿಯ ಪಾಲುದಾರರಾಗಬೇಕೆಂಬ ಆಶಯ ನಮ್ಮದಾಗಿದ್ದು, ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಈ ಯೋಜನೆಗಳು ಸಫಲವಾಗಿವೆ ಎಂದರು.

ಯುವನಿಧಿ ಯೋಜನೆಯ ರಾಜ್ಯ ಮಟ್ಟದ ಅನುಷ್ಠಾನ ಕಾರ್ಯಕ್ರಮಕ್ಕೆ ಶಿವಮೊಗ್ಗ ಹಾಗೂ ನೆರೆಯ ಜಿಲ್ಲೆಗಳಿಂದ ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಜನರು ಸೇರುವ ನಿರೀಕ್ಷೆ ಇದೆ. ಇದರ ವ್ಯವಸ್ಥಿತ ಅನುಷ್ಟಾನ, ವೇದಿಕೆ ನಿರ್ಮಾಣ ಮತ್ತು ವಾಹನ ಸಂಚಾರ ದಟ್ಟಣ ನಿಯಂತ್ರಣಕ್ಕೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದರು.
ಈ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗಾಗಿ ಯಾವುದೇ ಅಡಚಣೆಗಳುಂಟಾಗದಂತೆ ಕ್ರಮ ವಹಿಸಬೇಕು. ವಾಹನ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಮತ್ತಿತರ ವಿಷಯಗಳ ಕುರಿತು ಸೂಕ್ಷ್ಮವಾಗಿ ಗಮನಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ವಿಶೇಷವಾಗಿ ಅನ್ನಭಾಗ್ಯ ಮತ್ತು ಗೃಹಲಕ್ಷ್ಮೀ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ತಾಂತ್ರಿಕ ಕಾರಣಗಳಿಂದಾಗಿ ಅಲ್ಲಲ್ಲಿ ದೂರುಗಳು ಕೇಳಿ ಬರುತ್ತಿವೆ. ಇಂತಹ ಯಾವುದೇ ದೂರುಗಳು ಬಾರದಂತೆ, ಈ ಯೋಜನೆಯಡಿ ಸೌಲಭ್ಯ ಪಡೆಯದೇ ಬಾಕಿ ಉಳಿದಿರುವ ಅರ್ಹರನ್ನು ಗುರುತಿಸಿ, ಯೋಜನೆಯ ವ್ಯಾಪ್ತಿಗೊಳಪಡಿಸುವಲ್ಲಿ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.

ಶಕ್ತಿ ಯೋಜನೆಯಡಿ ಜಿಲ್ಲೆಯ ಅನೇಕ ಕಡೆಗಳಿಂದ ಹೆಚ್ಚುವರಿ ಬಸ್‍ಗಳಿಗಾಗಿ ಬೇಡಿಕೆ ಇದ್ದು, ಸುಮಾರು 250ಕ್ಕೂ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾಗಿವೆ. ಇವುಗಳನ್ನು ಹಂತಹಂತವಾಗಿ ಒದಗಿಸುವಲ್ಲಿ ವೈಯಕ್ತಿಕವಾಗಿ ಗಮನಹರಿಸಲಾಗುವುದು ಎಂದ ಅವರು ಅಗತ್ಯವಿರುವ ಬಸ್‍ಗಳಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಾರಿಗೆ ನಿಗಮದ ಜಿಲ್ಲಾ ಅಧಿಕಾರಿಗಳಿಗೆ ಸೂಚಿಸಿದರು.

ಯುವನಿಧಿ ಯೋಜನೆಯಡಿ ಸೌಲಭ್ಯ ಪಡೆದುಕೊಳ್ಳಬಯಸುವ ನಿರುದ್ಯೋಗಿ ಯುವಕರು ತಮ್ಮ ಪ್ರಸ್ತಾವನೆಯನ್ನು ಇಂದಿನಿಂದಲೇ ಆನ್‍ಲೈನ್ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚು ಸಂಖ್ಯೆಯ ಅಭ್ಯರ್ಥಿಗಳು ಈ ಯೋಜನೆಯ ಲಾಭ ಪಡೆದುಕೊಳ್ಳುವಂತೆ ಅವರು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‍ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ ಅವರು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

3 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

3 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

3 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

3 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago