ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರಿದ್ದ ಬಸ್‌ ಪಲ್ಟಿ !

0 54

ಶಿವಮೊಗ್ಗ : ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರಿದ್ದ ಬಸ್‌ ಶಿವಮೊಗ್ಗದ ನಿದಿಗೆ ಬಳಿ ಪಲ್ಟಿ ಹೊಡೆದಿದ್ದು ಅದೃಷ್ಟವಶಾತ್‌ ಪ್ರಯಾಣಿಕರು ಪರಾಗಿದ್ದಾರೆ. ಚಾಲಕನ ಅಜಾಗರೂಕತೆಯ್ ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.

ನಿದಿಗೆ ಕೆರೆ ಬಳಿ ರಸ್ತೆ ಕಾಮಗಾರಿ ನಡೆಯುತ್ತಿದೆ. ವೇಗವಾಗಿ ಬಂದ ಖಾಸಗಿ ಬಸ್‌, ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಬೆಳಗಿನ ಜಾವ ಘಟನೆ ಸಂಭವಿಸಿದೆ. ಕೂಡಲೆ ಬಸ್ಸಿನಲ್ಲಿದ್ದ 45 ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ.

ಬೆಂಗಳೂರಿನ ಪ್ರವಾಸಿಗರು ಎರಡು ಬಸ್ಸುಗಳಲ್ಲಿ ಸಿಗಂದೂರಿಗೆ ತೆರಳುತ್ತಿದ್ದರು. ಬೆಳಗಿನ ಜಾವ ಬಸ್‌ ಪಲ್ಟಿಯಾಗಿದೆ. ತುಂಗಾನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Leave A Reply

Your email address will not be published.

error: Content is protected !!