ಭದ್ರಾವತಿ: ಸಿಡಿಲು (Thunderstorm) ಬಡಿದು ಇಬ್ಬರು ಸಹೋದರರು (Brothers) ಮೃತಪಟ್ಟಿರುವ ದಾರುಣ ಘಟನೆ ಭದ್ರಾವತಿ (Bhadravathi) ಪಟ್ಟಣದ ಹುಣಸಕಟ್ಟೆ ಜಂಕ್ಷನ್ ನಲ್ಲಿ ನಡೆದಿದೆ.
ಮೃತರನ್ನು ಬೀರು (ಎಸ್ ಬೀರೇಶ್) (33) ಮತ್ತು ಎಸ್ ಸುರೇಶ್ (30) ಎಂದು ಗುರುತಿಸಲಾಗಿದೆ. ಇಬ್ಬರೂ ತಮ್ಮ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಸಾವಿಗೀಡಾಗಿದ್ದಾರೆ.
ಕಟಾವಿಗೆ ಸಿದ್ಧವಾಗಿದ್ದ ಭತ್ತದ ಬೆಳೆಗೆ ಕಾವಲು ಕಾಯಲು ಸಹೋದರರಿಬ್ಬರು ಹೋಗಿದ್ದರು. ರಾತ್ರಿ ಗದ್ದೆಗೆ ಕಾವಲಿಗೆಂದು ಹೋಗಿದ್ದವರು ಬೆಳಗ್ಗೆ ಮನೆಗೆ ಬಾರದ ಕಾರಣ ಆತಂಕಗೊಂಡಿದ್ದ ಕುಟುಬಸ್ಥರು ಗದ್ದೆಗೆ ತೆರಳಿ ನೋಡಿದಾಗ, ಸಹೋದರರಿಬ್ಬರೂ ಅಲ್ಲೇ ಸಾವಿಗೀಡಾಗಿರುವುದು ತಿಳಿದುಬಂದಿದೆ. ಇಬ್ಬರ ಸಾವಿಗೆ ಕುಟುಂಬವರ ಆಕ್ರಂದನ ಮುಗಿಲು ಮುಟ್ಟಿದೆ.
ಮೃತದೇಹಗಳನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…