Categories: Shivamogga

ಸಿಬ್ಬಂದಿಗಳ ವೇತನ ವಿಳಂಬ ; ನರೇಗಾ‌ ನೌಕರರ ಸಂಘ ಮನವಿ

ಶಿವಮೊಗ್ಗ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸೇವೆ ಸಲ್ಲಿಸಿರುವ ಸಿಬ್ಬಂದಿಗಳ ವೇತನ ವಿಳಂಬವಾಗುತ್ತಿರುವುದನ್ನು ಖಂಡಿಸಿ ತಕ್ಷಣವೇ ವೇತನ ಪಾವತಿಸಲು ಆಗ್ರಹಿಸಿ ಮಹಾತ್ಮ ಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ವತಿಯಿಂದ ಇಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.


ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಯಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಸಂಯೋಜಕರು, ಅಕೌಂಟ್ ಮ್ಯಾನೇಜರ್, ಆಡಳಿತ ಸಹಾಯಕರು, ತಾಂತ್ರಿಕ ಸಂಯೋಜಕರು, ಡಾಟಾ ಎಂಟ್ರಿ ಆಪರೇಟರ್ ಹೀಗೆ ಹಲವು ವಿಭಾಗಗಳಲ್ಲಿ ಕೆಲಸಕ್ಕೆ ತೆಗೆದುಕೊಳ್ಳಲಾಗಿದೆ. ಆದರೆ, 2023ರ ಏಪ್ರಿಲ್ ನಿಂದ ಇಲ್ಲಿಯವರೆಗೆ ನಮಗೆ ಯಾವುದೇ ರೀತಿಯ ವೇತನ ಪಾವತಿಯಾಗಿಲ್ಲ ಎಂದು ಪ್ರತಿಭಟನಾಕಾರರು ತಿಳಿಸಿದರು.


ಪ್ರಸ್ತುತ ಹಣದುಬ್ಬರದ ಈ ಕಾಲದಲ್ಲಿ ಜೀವನ ನಿರ್ವಹಣೆ ಮಾಡಲು ನಮಗೆ ಕಷ್ಟವಾಗುತ್ತದೆ. ಅಲ್ಲದೇ, ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆಗೆ ಅವಶ್ಯಕವಾಗಿರುವ ಪ್ರಯಾಣ ಭತ್ಯೆ ಕೂಡ ಪಾವತಿಸಲಾಗಿಲ್ಲ, ವೇತನವೂ ಇಲ್ಲ. ಈ ಬಗ್ಗೆ ಹಲವು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಆದ್ದರಿಂದ ನಮಗೆ ತಕ್ಷಣವೇ ಬಾಕಿ ವೇತನ ಪಾವತಿಸಬೇಕು. ಮತ್ತು ಪ್ರತಿ ತಿಂಗಳು ವಿಳಂಬವಾಗದಂತೆ ಕ್ರಮ ತೆಗೆದುಕೊಳ್ಳಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.
ಪ್ರತಿಭಟನಾಕಾರರಿಗೆ ಭರವಸೆ ನೀಡಿದ ಮುಖ್ಯ ಕಾರ್ಯನಿರ್ವಣಾಧಿಕಾರಿಗಳು ನಿಮ್ಮ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಲಾಗುವುದು ಎಂದು ಹೇಳಿದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

1 day ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

1 day ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago