ಶಿವಮೊಗ್ಗ : ಉಡುಪಿ ಜಿಲ್ಲೆಯ ಹೆಬ್ರಿ ಸಮೀಪದ ನೆಲ್ಲಿಕಟ್ಟೆ ಕ್ರಾಸ್ನಲ್ಲಿ ಸೀತಾನದಿಯಲ್ಲಿ ಸ್ನಾನಕ್ಕೆಂದು ಇಳಿದ ವೈದ್ಯ ಸೇರಿದಂತೆ ಇಬ್ಬರು ಮುಳುಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ಸಂಭವಿಸಿದೆ.
ಶಿವಮೊಗ್ಗ ಮೂಲದ ಶೃಂಗೇರಿಯಲ್ಲಿ ವೈದ್ಯರಾಗಿರುವ ಡಾ. ದೀಪಕ್ (34) ಹಾಗೂ ಶಿವಮೊಗ್ಗದ ಉದ್ಯಮಿ ಸಿನು ಡೇನಿಯಲ್ (40) ಮೃತ ದುರ್ದೈವಿಗಳು.
ಸಿನು ಡ್ಯಾನಿಯಲ್ ಅವರು ತನ್ನ ವೈದ್ಯ ಮಿತ್ರ ಡಾ. ವಿನ್ಸೆಂಟ್ ಎಂ.ಸಿ. ಮೋಹನ್ ಜೊತೆಗೆ ಶಿವಮೊಗ್ಗದಿಂದ ಹೆಬ್ರಿಗೆ ಬಂದು ಮಣಿಪಾಲದಿಂದ ಬಂದ ವೈದ್ಯ ದೀಪಕ್ ಅವರೊಂದಿಗೆ ಹೆಬ್ರಿಯಲ್ಲಿ ಜೊತೆಯಾಗಿ ಊಟ ಮಾಡಿ ಸೋಮೇಶ್ವರ ಕಡೆ ಹೋಗುವಾಗ ಸೀತಾನದಿಯಲ್ಲಿ ಸ್ನಾನಕ್ಕಿಳಿದರು. ಸಿನು ಡ್ಯಾನಿಯಲ್ ಸ್ನಾನ ಮಾಡುತ್ತಾ ಮುಂದೆ ಹೋಗಿದ್ದು, ಈಜು ಬಾರದ ಕಾರಣ ನೀರಿನಲ್ಲಿ ಮುಳುಗಿದರು. ಇದನ್ನು ಗಮನಿಸಿದ ದೀಪಕ್ ನೀರಿಗೆ ಹಾರಿ ಅವರನ್ನು ರಕ್ಷಿಸಲು ಮುಂದಾಗಿದ್ದು ಇಬ್ಬರೂ ಮುಳುಗಿದರು.
ಡಾ. ವಿನ್ಸೆಂಟ್ ಸ್ನೇಹಿತರನ್ನು ರಕ್ಷಿಸಲು ನದಿಗೆ ಧುಮುಕಿದರೂ ಈಜು ಬಾರದ ಕಾರಣ ಅವರನ್ನು ರಕ್ಷಿಸಲು ಸಾಧ್ಯವಾಗದೆ ಮರದ ಬೇರನ್ನು ಹಿಡಿದು ಮೇಲೆ ಬಂದರು. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…
ರಿಪ್ಪನ್ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…
ಹೊಸನಗರ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಹಾಸನದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಅತ್ಯಂತ ಹೇಯವಾದದ್ದು. ಹೆಣ್ಣು ಮಕ್ಕಳ ಮಾನಹಾನಿಯಾಗುವಂತಹ…
ರಿಪ್ಪನ್ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…
ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…