Categories: BhadravathiShivamogga

ಸುಖದಾಯಕ ಬದುಕಿಗೆ ಧರ್ಮ ಪರಿಪಾಲನೆ ಅವಶ್ಯಕ : ರಂಭಾಪುರಿ ಶ್ರೀಗಳು

ಭದ್ರಾವತಿ : ಬದುಕು ಭಗವಂತನ ಕೊಡುಗೆ. ಅರಿವು ಆದರ್ಶಗಳಿಂದ ಬದುಕು ಸಮೃದ್ಧಿಗೊಳ್ಳಬೇಕು. ಸುಖ ಶಾಂತಿದಾಯಕ ಬದುಕಿಗೆ ಧರ್ಮ ಪರಿಪಾಲನೆ ಅವಶ್ಯಕತೆ ಇದೆಯೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

ಅವರು ಸೋಮವಾರ ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ಜರುಗಿದ ಅಡ್ಡಪಲ್ಲಕ್ಕಿ ಮಹೋತ್ಸವ ಅಂಗವಾಗಿ ನಡೆದ ಜನ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ, ಧರ್ಮದಲ್ಲಿರುವ ಉದಾತ್ತ ತತ್ವಗಳು ಜೀವನದ ಶ್ರೇಯಸ್ಸಿಗೆ ಕಾರಣವಾಗಿವೆ. ಅರಿತು ಬಾಳಿದರೆ ಬಾಳು ಬಂಗಾರ. ಮರೆತು ಮಲಗಿದರೆ ಬಾಳು ಬಂಧನಕಾರಿ. ಬದುಕು ಬದಲಾಗಬೇಕಾದರೆ ಬದುಕುವ ದಾರಿ ಬದಲಾಗಬೇಕು. ಬಾಳೆಗೊಂದು ಗೊನೆಯಿರುವಂತೆ ಬಾಳಿಗೊಂದು ಗುರಿಯಿರಬೇಕು. ಗುರಿಯಿಲ್ಲದ ಗುರಿ ಸಾಧಿಸದ ಜೀವನ ವ್ಯರ್ಥ. ಶ್ರೀ ಜಗದ್ಗುರು ರೇಣುಕಾಚಾರ್ಯರು ಬೋಧಿಸಿದ ಅಹಿಂಸಾದಿ ಧ್ಯಾನ ಪರ್ಯಂತರವಾದ ದಶಧರ್ಮ ಸೂತ್ರಗಳು ಸಕಲರ ಬಾಳಿಗೆ ಬೆಳಕು ತೋರಿವೆ. ವೀರಶೈವ ಧರ್ಮ ಸಕಲ ಜೀವಾತ್ಮರಿಗೆ ಸದಾ ಒಳಿತನ್ನೇ ಬಯಸುವ ಉದಾತ್ತ ಗುರಿ ಹೊಂದಿದೆ ಎಂದ ಅವರು ತತ್ವತ್ರಯಗಳನ್ನು ಮನುಷ್ಯ ಆಚರಿಸಿ ಜೀವನದಲ್ಲಿ ಉನ್ನತಿಯನ್ನು ಕಾಣಬೇಕಾಗಿದೆ. ಕೂಡ್ಲಿಗೆರೆ ಗ್ರಾಮದಲ್ಲಿ ನಿರ್ಮಿಸಿದ ನೂತನ ಶ್ರೀ ಬಸವೇಶ್ವರಸ್ವಾಮಿ ಸುಂದರ ದೇವಾಲಯ ಕಂಡು ತುಂಬಾ ಸಂತೋಷವಾಗಿದೆ ಎಂದರು.

ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ ಸಮಾರಂಭ ಉದ್ಘಾಟಿಸಿ ಮಾತನಾಡಿ, ಧರ್ಮಾಚರಣೆ ಇಲ್ಲದಿದ್ದರೆ ಜೀವನದಲ್ಲಿ ಶಾಂತಿ ಕಾಣದು. ನೆಮ್ಮದಿಯ ಆದರ್ಶ ಬದುಕಿಗೆ ಧರ್ಮವೊಂದೇ ಆಶಾಕಿರಣ ಎಂದರು.

ಎಡೆಯೂರು ರೇಣುಕ ಶಿವಾಚಾರ್ಯರು, ಮಳಲಿ ಮಠದ ಡಾ|| ನಾಗಭೂಷಣ ಶಿವಾಚಾರ್ಯರು, ಬಿಳಕಿ ರಾಚೋಟೇಶ್ವರ ಶಿವಾಚಾರ್ಯರು, ಚನ್ನಗಿರಿ ಕೇದಾರ ಶಿವಶಾಂತವೀರ ಶಿವಾಚಾರ್ಯರು, ತಾವರೆಕೆರೆ ಡಾ.ಅಭಿನವ ಸಿದ್ಧಲಿಂಗ ಶಿವಾಚಾರ್ಯರು ಪಾಲ್ಗೊಂಡು ಉಪದೇಶಾಮೃತವನ್ನಿತ್ತರು. ಶಿಲ್ಪಿಗಳಿಗೆ, ದೇವಸ್ಥಾನ ಗೋಪುರ-ಕಟ್ಟಡ ನಿರ್ಮಾಣಕಾರರಿಗೆ ಮರದ ಕೆಲಸಗಾರರಿಗೆ, ದಾನಿಗಳಿಗೆ ಗಣ್ಯರಿಗೆ ಶ್ರೀ ರಂಭಾಪುರಿ ಜಗದ್ಗುರುಗಳು ಗುರುರಕ್ಷೆಯಿತ್ತು ಆಶೀರ್ವದಿಸಿದರು.

ಚಿಕ್ಕಮಗಳೂರಿನ ಚಂದ್ರಶೇಖರ ನಾರಣಾಪುರ ಉಪನ್ಯಾಸವನ್ನಿತ್ತರು. ಗಂಜಿಗಟ್ಟಿ ಕೃಷ್ಣಮೂರ್ತಿ ಇವರಿಂದ ಭಕ್ತಿ ಗೀತೆ ಜರುಗಿತು. ಶಿವಮೊಗ್ಗದ ಶಾಂತಾ ಆನಂದ ನಿರೂಪಿಸಿದರು.

ಸಮಾರಂಭಕ್ಕೂ ಮುನ್ನ ಜರುಗಿದ ಶ್ರೀ ರಂಭಾಪುರಿ ಜಗದ್ಗುರುಗಳವರ ಅಡ್ಡಪಲ್ಲಕ್ಕಿ ಮಹೋತ್ಸವದಲ್ಲಿ ಆರತಿ ಹಿಡಿದ ಮುತ್ತೈದೆಯರು, ಕುಂಭ ಹೊತ್ತ ಮಹಿಳೆಯರು ಪಾಲ್ಗೊಂಡಿದ್ದರು.

ಸಕಲ ಬಿರುದಾವಳಿಗಳೊಂದಿಗೆ ವಿವಿಧ ವಾದ್ಯ ವೈಭವಗಳೊಂದಿಗೆ ಚನ್ನಗಿರಿ ರಸ್ತೆಯ ಶ್ರೀ ಹರಿಹರೇಶ್ವರ ಮಹಾದ್ವಾರದಿಂದ ಕೂಡ್ಲಿಗೆರೆಯ ರಾಜಬೀದಿಗಳಲ್ಲಿ ಸಂಚರಿಸಿದ ಉತ್ಸವ ಶ್ರೀ ಬಸವೇಶ್ವರ ದೇವಾಲಯವನ್ನು ತಲುಪಿತು. ಕೂಡ್ಲಿಗೆರೆ ಶ್ರೀ ಬಸವೇಶ್ವರಸ್ವಾಮಿ ದೇವಸ್ಥಾನ ಜೀರ್ಣೋದ್ಧಾರ ಸೇವಾ ಸಮಿತಿಯವರಿಂದ ಪ್ರಸಾದ ಸೇವೆ ಜರುಗಿತು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

3 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

3 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

3 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

3 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago