Categories: Shivamogga

ಸೆ.9 ರಂದು ಅನ್ವೇಷಣಾ ಇನ್ನೋವೇಶನ್ ಮತ್ತುಎಂಟ್ರೆಪ್ರೆನ್ಯೂರಿಯಲ್ ಫೋರಂ ಉದ್ಘಾಟನೆ ; ಬಿವೈಆರ್

ಶಿವಮೊಗ್ಗ: ಮಲೆನಾಡು ಪ್ರದೇಶದಲ್ಲಿ ಉದ್ಯಮಶೀಲತೆ ಹಾಗೂ ನಾವೀನ್ಯತೆಗೆ ಹೊಸ ಉತ್ತೇಜನ ನೀಡುವ ದೃಷ್ಟಿಯಿಂದ ಸಾಗರ ರಸ್ತೆಯಲ್ಲಿರುವ ಪಿಇಎಸ್ ಕ್ಯಾಂಪಸ್‌ನಲ್ಲಿ ಸೆ.9ರ ಬೆಳಿಗ್ಗೆ 10 ಗಂಟೆಗೆ ಅನ್ವೇಷಣಾ ಇನ್ನೋವೇಶನ್ ಮತ್ತು ಎಂಟ್ರೆಪ್ರೆನ್ಯೂರಿಯಲ್ ಫೋರಂ ಉದ್ಘಾಟನೆಗೊಳ್ಳಲಿದೆ ಎಂದು ಪಿಇಎಸ್ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.

ಅವರು ಇಂದು ರಾಯಲ್ ಆರ್ಕೆಡ್‌ನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿವಮೊಗ್ಗದಲ್ಲಿ ಉದ್ಯಮಶೀಲತೆಯ ದಿಗಂತದಲ್ಲಿ ಭರವಸೆಯ ಬೆಳಕು ಪ್ರಕಾಶಮಾನವಾಗಿ ಬೆಳಗುತ್ತಿರುವ ಈ ಹೊತ್ತಿನಲ್ಲಿ ಅನ್ವೇಷಣವು ಅಭಿವೃದ್ಧಿ ಹೊಂದುತ್ತಿರುವ ಸ್ಟಾರ್ಟ್ಅಪ್ ಸಂಸ್ಕೃತಿಯನ್ನು ಬೆಳೆಸುವ ಕಡೆಗೆ ತನ್ನ ಆರಂಭಿಕ ಹೆಜ್ಜೆ ಇಡುತ್ತಿದೆ. ಅನ್ವೇಷಣಾ ಫೋರಂ ಉದ್ಯಮಿಗಳ ಬೆಳವಣಿಗೆಯನ್ನು ಉತ್ತೇಜಿಸುವ ಮೂಲಕ ಅವರು ಆ ಪ್ರದೇಶದ ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡಲು ನೆರವಾಗಲು ಅಗತ್ಯ ಬೆಂಬಲ ನೀಡುತ್ತದೆ ಎಂದರು.

ಹೊಸ ಉದ್ಯೋಗ ಅವಕಾಶ ಸೃಷ್ಟಿಸುವುದು. ಸಮಸ್ಯೆಗಳಿಗೆ ನವೀನ ಪರಿಹಾರ ಒದಗಿಸುವುದು ಮತ್ತು ತಂತ್ರಜ್ಞಾನದ ಲಾಭವನ್ನು ಎಲ್ಲರೂ ಪಡೆಯುವಂತೆ ಮಾಡುವ ಗುರಿಯನ್ನು ಈ ಉಪಕ್ರಮವು ಹೊಂದಿದೆ. ಅನ್ವೇಷಣಾ ಲಾಭದ ಉದ್ದೇಶವಿಲ್ಲದ ತಂತ್ರಜ್ಞಾನ, ವ್ಯಾಪಾರದ ಇನ್ಕ್ಯುಬೇಟರ್ ಸಂಸ್ಥೆಯಾಗಿದ್ದು, ಮಲೆನಾಡು ಪ್ರದೇಶದಲ್ಲಿ ವಾಣಿಜ್ಯೋದ್ಯಮವನ್ನು ಪೋಷಿಸಲು ನೆರವಾಗಲಿದೆ. ಹೊಸದಾಗಿ ಉದ್ಯಮ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡುವವರಿಗೆ ಹೊಸ ಶಕ್ತಿ ಮತ್ತು ಭರವಸೆ ತುಂಬಲಿದೆ ಎಂದರು.

ಅನ್ವೇಷಣಾ ಇನ್ನೋವೇಶನ್ ಮತ್ತು ಎಂಟ್ರೆಪ್ರೆನ್ಯೂರಿಯಲ್ ಫೋರಂನ ಮ್ಯಾನೇಜಿಂಗ್ ಡೈರೆಕ್ಟರ್ ಸಿ.ಎಂ. ಪಾಟೀಲ್ ಮಾತನಾಡಿ, ಅನ್ವೇಷಣಾ ಸಂಸ್ಥೆಯು ಇನ್ಕ್ಯುಬೇಷನ್ ಸೆಂಟರ್ ಆಗಿದ್ದು, ಸ್ಟಾರ್ಟ್ಅಪ್‌ಗಳು ಅಭಿವೃದ್ಧಿ ಹೊಂದಲು ಸೂಕ್ತವಾದ ವಾತಾವರಣ ನೀಡುತ್ತದೆ ಹಾಗೂ ಸ್ಟಾರ್ಟ್ಅಪ್‌ಗಳಿಗೆ ಮಾರುಕಟ್ಟೆಗಳಿಗೆ ಪ್ರವೇಶ, ಹಣಕಾಸಿನ ಅವಕಾಶಗಳು ಮತ್ತು ಅತ್ಯಾಧುನಿಕ ಸೌಲಭ್ಯ ಒದಗಿಸಲಿದೆ ಎಂದ ಅವರು, ಇಂದಿನ ಆಧುನಿಕ ಯುಗದಲ್ಲಿ ಜ್ಞಾನವು ಶ್ರೇಷ್ಠ ಶಕ್ತಿಯಾಗಿದೆ ಮತ್ತು ಯಶಸ್ಸಿಗೆ ಅಗತ್ಯವಿರುವ ಕೌಶಲ್ಯ, ಜ್ಞಾನ ಮತ್ತು ಸಾಧನೆಗಳೊಂದಿಗೆ ಉದ್ಯಮಿಗಳನ್ನು ಸಬಲೀಕರಣಗೊಳಿಸಲು ಅನ್ವೇಷಣಾ ಬದ್ಧವಾಗಿದೆ ಎಂದರು.

ಅನ್ವೇಷಣವು ಹೂಡಿಕೆದಾರರು, ಉದ್ದಿಮೆ ಬಂಡವಾಳಗಾರರು ಮತ್ತು ಧನ ಸಹಾಯ ಸಂಸ್ಥೆಗಳ ವೈವಿಧ್ಯಮಯ ನೆಟ್‌ವರ್ಕ್‌ನೊಂದಿಗೆ ಸಂಪರ್ಕವನ್ನು ಸುಲಭಗೊಳಿಸುತ್ತದೆ ಮತ್ತು ಸ್ಟಾರ್ಟ್ಅಪ್‌ಗಳಿಗೆ ಅಗತ್ಯವಿರುವ ಹಣಕಾಸಿನ ಬೆಂಬಲ ಪಡೆಯಲು ಸಹಾಯ ಮಾಡುತ್ತದೆ. ಉದ್ಯಮಿಗಳು, ಹೂಡಿಕೆದಾರರು, ನಾವೀನ್ಯತೆ ಮತ್ತು ಉದ್ಯಮಶೀಲತೆಯ ಶಕ್ತಿಯಲ್ಲಿ ನಂಬಿಕೆ ಇರುವ ಎಲ್ಲರೂ ಈ ಮಿಷನ್‌ಗೆ ಸೇರಲು ಆಹ್ವಾನವಿದೆ. ಹೆಚ್ಚಿನ ಮಾಹಿತಿಗಾಗಿ www.anvesana.co.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಎಂದರು.
ಔಪಚಾರಿಕವಾಗಿ ನಡೆಯುವ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಬೆಳಗಾವಿಯ ವಿಟಿಯು ಕುಲಪತಿ ಡಾ. ವಿದ್ಯಾಶಂಕರ್, ರಾಜ್ಯ ಸರ್ಕಾರದ ಮಿಷನ್ ಗ್ರೂಪ್ ಆನ್ ಸ್ಟಾರ್ಟ್ಅಪ್‌ನ ಅಧ್ಯಕ್ಷ ಪ್ರಶಾಂತ್‌ಪ್ರಕಾಶ್, ಪಿಇಎಸ್ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ಬಿ.ವೈ. ರಾಘವೇಂದ್ರ, ಖಜಾಂಚಿ, ಬಿ.ವೈ. ವಿಜಯೇಂದ್ರ ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಫೋರಂನ ಡೈರೆಕ್ಟರ್ ಬಿ.ಆರ್. ಸುಭಾಶ್, ಪಿಇಎಸ್ ಟ್ರಸ್ಟ್‌ನ ಆಡಳಿತ ಮುಖ್ಯ ಸಂಯೋಜಕ ಡಾ.ಆರ್.ನಾಗರಾಜ್ ಉಪಸ್ಥಿತರಿದ್ದರು

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

1 day ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

1 day ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago