ಸೌರ ಆಧಾರಿತ ಹುಲ್ಲು ಕತ್ತರಿಸುವ ಯಂತ್ರ ಕಂಡುಹಿಡಿದ ಗ್ರಾಮೀಣ ವಿದ್ಯಾರ್ಥಿ ; ರಾಜ್ಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಆಯ್ಕೆ

ರಿಪ್ಪನ್‌ಪೇಟೆ : ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲೆಯ (High School) 9ನೇ ತರಗತಿಯ ವಿದ್ಯಾರ್ಥಿ (Student) ಅಭಿಷೇಕ್ ಸಿದ್ಧಪಡಿಸಿರುವ ಸೌರ (Solar) ಆಧಾರಿತ ಹುಲ್ಲು ಕತ್ತರಿಸುವ ಯಂತ್ರ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಆಯ್ಕೆಯಾಗಿದೆ.

ಶಿವಮೊಗ್ಗದಲ್ಲಿ (Shivamogga) ನಡೆದ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಅಭಿಷೇಕ್ ಸಿದ್ದಪಡಿಸಿರುವ ಸೋಲಾರ್ ಹುಲ್ಲು ಕತ್ತರಿಲುವ ಯಂತ್ರ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.

ಮನೆಯಲ್ಲಿಯೇ ಲಭ್ಯವಿದ್ದ ಸೋಲಾರ್ ಪ್ಯಾನೆಲ್, ಕಟ್ ಪೀಸ್ ಕಬ್ಬಿಣದ ಸಹಾಯದಿಂದ ಒಂದು ಸಾವಿರ ರೂ. ಖರ್ಚಿನಲ್ಲಿ ಈ ಯಂತ್ರವನ್ನು ಸಿದ್ಧಪಡಿಸಲಾಗಿದ್ದು, ವಿಜ್ಞಾನದ ಶಿಕ್ಷಕ ಮಹೇಶ್ ವಿದ್ಯಾರ್ಥಿ ಅಭಿಷೇಕ್ ಗೆ ಮಾರ್ಗದರ್ಶನ ನೀಡಿದ್ದಾರೆ. ಮನೆಯ ಸುತ್ತಮುತ್ತ ಬೆಳೆದಂತಹ ಹುಲ್ಲುಗಳನ್ನು ಕಡಿಮೆ ವೆಚ್ಚದ ಈ ಸೋಲಾರ್ ಯಂತ್ರದ ಮೂಲಕ ಹುಲ್ಲು ಕತ್ತರಿಸುವ ಕಾರ್ಯಕ್ಕೆ ಬಳಸಬಹುದಾಗಿದೆ.

ಕಾರಕ್ಕಿ ನಿವಾಸಿಗಳಾದ ಸತೀಶ್ ಹಾಗೂ ಆಶಾ ದಂಪತಿಗಳ ಪುತ್ರನಾದ ಅಭಿಷೇಕ್ 9ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದಾನೆ.

ಈ ಬಗ್ಗೆ ಮಾತನಾಡಿದ ವಿದ್ಯಾರ್ಥಿ ಅಭಿಷೇಕ್, ಇಂದಿನ ಪೀಳಿಗೆಯಲ್ಲಿ ಪ್ರಮುಖ ಸಮಸ್ಯೆಗಳೆಂದರೆ ಮಾಲಿನ್ಯ, ವಿದ್ಯುತ್ ಕಡಿತ, ದುಬಾರಿ ತೈಲ ಬೆಲೆ ಹೀಗಾಗಿ ಈ ಸಮಸ್ಯೆಗಳಿಂದ ಹೊರಬರಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ಸಾಧನದ ಬಗ್ಗೆ ಯೋಚಿಸಿದ್ದೇನೆ. ಆದ್ದರಿಂದ ನಾನು ಸೌರಚಾಲಿತ ಹುಲ್ಲು ಕಟ್ಟರ್ ಯಂತ್ರ ಅಭಿವೃದ್ಧಿ ಪಡಿಸುವ ಇಂಗಿತ ವ್ಯಕ್ತಪಡಿಸಿದಾಗ ಶಾಲೆಯ ಮುಖ್ಯೋಪಾಧ್ಯಾಯರಾದ ಶಿವಾಜಿ ಹಾಗೂ ವಿಜ್ಞಾನ ಶಿಕ್ಷಕರಾದ ಮಹೇಶ್, ಕನ್ನಡ ಶಿಕ್ಷಕರಾದ ಎನ್ ಡಿ ಹೆಗಡೆ ಉತ್ತಮ ರೀತಿಯಲ್ಲಿ ಸ್ಪಂದಿಸಿ, ಅಗತ್ಯ ಮಾರ್ಗದರ್ಶಗಳನ್ನು ನೀಡಿದ್ದರಿಂದ ಸೌರಶಕ್ತಿಯಿಂದ ಸಂಪೂರ್ಣ ಸ್ವಯಂಚಾಲಿತವಾಗಿ ಕಾರ್ಯನಿರ್ವಹಿಸುವ ಯಂತ್ರವನ್ನು ಅಭಿವೃದ್ಧಿಪಡೆಸಿದ್ದೇನೆ ಎಂದರು.

ಈ ಯಂತ್ರಕ್ಕೆ ಡಿಸಿ ಮೋಟಾರ್ ಮಾತ್ರ ನಾನು ಖರೀದಿ ಮಾಡಿದ್ದೇನೆ. ಉಳಿದಂತೆ ಸೋಲಾರ್ ಪ್ಯಾನೆಲ್, ಕಬ್ಬಿಣ, ಬ್ಯಾಟರಿ ಎಲ್ಲವೂ ಮನೆಯಲ್ಲಿ ಇರುವುದನ್ನೇ ಬಳಸಿದ್ದೇನೆ. ಹೀಗಾಗಿ ಪ್ರತಿಯೊಬ್ಬರು ಇದನ್ನು ಮನೆಯಲ್ಲಿಯೇ ಅಭಿವೃದ್ಧಿ ಪಡಿಸಿಕೊಂಡು ತಮ್ಮ ಮನೆಯ ಸುತ್ತಮುತ್ತ ಪ್ರದೇಶಗಳನ್ನು ಸ್ವಚ್ಚವಾಗಿಟ್ಟುಕೊಳ್ಳಬಹುದು. ರಾಜ್ಯ ಮಟ್ಟದ ಸ್ಪರ್ಧೆಗೆ ಇದನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿಪಡಿಸುತ್ತೇನೆ‌.
– ಅಭಿಷೇಕ್, ವಿದ್ಯಾರ್ಥಿ

ಶಾಲೆಯ ವಿಜ್ಞಾನ ವಿಭಾಗದ ಶಿಕ್ಷಕ ಮಹೇಶ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಕಲಿಕೆಯ ಬಗ್ಗೆ ಆಸಕ್ತಿ ಇದ್ದರೆ ಎಂತಹದನ್ನು ಸಾಧಿಸಿ ತೋರಿಸಬಹುದು ಎನ್ನುವುದಕ್ಕೆ ನನ್ನ ವಿದ್ಯಾರ್ಥಿ ಅಭಿಷೇಕ್ ಸಾಕ್ಷಿಯಾಗಿದ್ದಾನೆ. ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಸೋಲಾರ್ ಹುಲ್ಲು ಕತ್ತರಿಸುವ ಯಂತ್ರ ಎಲ್ಲಾ ತೀರ್ಪುಗಾರರ, ವೀಕ್ಷಕರ ಗಮನ ಸೆಳೆದು ಪ್ರಥಮ ಸ್ಥಾನ ಗಳಿಸಿದೆ. ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಈ ಯಂತ್ರವನ್ನು ಇನ್ನಷ್ಟೂ ಅಭಿವೃದ್ಧಿಪಡಿಸಲು ವಿದ್ಯಾರ್ಥಿ ಅಭಿಷೇಕ್ ಇಂಗಿತ ವ್ಯಕ್ತಪಡಿಸಿದ್ದು ಅಗತ್ಯ ಸಲಹೆ ನೀಡುತ್ತೇನೆ ಎಂದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

2 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

3 days ago