Categories: Shivamogga

ಹಣದ ಹಿಂದೆ ಹೋಗದೆಯೆ ಬದುಕಿನ ಅನುಭವಗಳಿಗಾಗಿ ಕಲಿಯಲು ಪ್ರಯತ್ನಿಸಿ

ಶಿವಮೊಗ್ಗ: ಜೀವನ ಅನೇಕ ಅನುಭವಗಳನ್ನು ನೀಡಲಿದ್ದು, ಹಣದ ಹಿಂದೆ ಹೋಗದೆಯೆ ಬದುಕಿನ ಅನುಭವಗಳಿಗಾಗಿ ಕಲಿಯಲು ಪ್ರಯತ್ನಿಸಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಹೇಳಿದರು.


ನಗರದ ರಾಷ್ಟ್ರೀಯ ಔಷಧ ಮಹಾವಿದ್ಯಾಲಯದ ವತಿಯಿಂದ ಗುರುವಾರ ಕುವೆಂಪು ರಂಗಮAದಿರದಲ್ಲಿ ಏರ್ಪಡಿಸಿದ್ದ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ‘ಕಲಾ ಸಂಭ್ರಮ – 2023’ ಉದ್ಘಾಟಿಸಿ ಮಾತನಾಡಿದರು.
ಆಧುನಿಕತೆಯ ಭರದಲ್ಲಿ ನಾವೂ ಕಳೆದುಕೊಂಡ ವಿಚಾರಗಳನ್ನು ಆತ್ಮವಿಮರ್ಶೆ ಮಾಡಿಕೊಳ್ಳಬೇಕಿದೆ. ನಮ್ಮ ಪೂರ್ವಜರು ಕೇವಲ ಕಾಗದದ ಮೂಲಕ ಅತ್ಯುತ್ತಮ ಸಂಪರ್ಕ ಸಾಧನ ಹೊಂದಿದ್ದರು. ಇಂದಿನ ದಿನಮಾನ ಆಧುನಿಕತೆಯಿಂದ ಎಲ್ಲವನ್ನೂ ಗೆಲ್ಲಲು ಸಾಧ್ಯ ಎಂಬ ಅಂಧತ್ವದಲ್ಲಿದ್ದಾರೆ. ಆಧುನಿಕತೆಯ ಒಳಗೆ ಸಿಲುಕಿ ಯಾರಿಗೂ ಸಮಯವೇ ಇಲ್ಲ. ಒತ್ತಡ ಬದುಕಿನಲ್ಲಿ ಬೆರೆತು ಹೋಗಿದ್ದು, ಸಂಬಂಧಗಳು ನಾಶವಾಗುತ್ತಿದೆ ಎಂದರು.
ಮಾನವೀಯ ಸಂಬಂಧಗಳನ್ನು ಉಳಿಸಿಕೊಳ್ಳಬೇಕಿದೆ. ಶಿಕ್ಷಣದಲ್ಲಿ ಮಾನವೀಯ ಮೌಲ್ಯಗಳಿಗೆ, ಸಂಬಂಧಗಳಿಗೆ, ಸಂಪರ್ಕಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡಬೇಕಿದೆ. ಪಠ್ಯ ಜ್ಞಾನವನ್ನು ನೀಡಿದರೆ ಪಠ್ಯೇತರ ಚಟುವಟಿಕೆ ಮೌಲ್ಯವನ್ನು ನೀಡುತ್ತದೆ ಎಂದು ಹೇಳಿದರು.


ಒಳ್ಳೆಯ ಸ್ನೇಹಿತರು ಮತ್ತು ಉತ್ತಮ ಗುರಿ ತಲುಪುವ ಕನಸು ನಿಮ್ಮದಾಗಲಿ. ನಿಜವಾದ ಸ್ನೇಹಿತರು ಕನ್ನಡಿ ಮತ್ತು ತೆರಳಿದ್ದ, ಕನ್ನಡಿ ಯಾವತ್ತು ಸುಳ್ಳು ಹೇಳುವುದಿಲ್ಲ ನೆರಳು ನಮ್ಮನ್ನು ಎಂದಿಗೂ ಬಿಡುವುದಿಲ್ಲ, ಅಂತಹ ಸ್ನೇಹ ವರ್ಗ ಸಂಪಾದಿಸಿ. ಸುಲಭವಾಗಿ ಸಿಕ್ಕಿದ್ದು ಹೆಚ್ಚು ಕಾಲ ನಮ್ಮ ಬಳಿ ಉಳಿಯುವುದಿಲ್ಲ. ಹೆಚ್ಚು ಕಾಲ ಉಳಿಯುವುದು ಸುಲಭವಾಗಿ ನಮಗೆ ಸಿಗುವುದಿಲ್ಲ ಎಂದು ಕಿವಿಮಾತು ಹೇಳಿದರು.


ಹಾಸ್ಯ ಕಲಾವಿದರಾದ ಮಿಮಿಕ್ರಿ ಗೋಪಿ ಮಾತನಾಡಿ, ಪೋಷಕರು ನಮಗಾಗಿ ಅನೇಕ ಕಷ್ಟಗಳನ್ನು ಅನುಭವಿಸಿರುತ್ತಾರೆ. ಅವರಿಗೆ ಪ್ರೀತಿ ಗೌರವ ಮತ್ತು ಉತ್ತಮ ವ್ಯಕ್ತಿತ್ವದ ಮೂಲಕ ಋಣ ತೀರಿಸಲು ಪ್ರಯತ್ನಿಸಿ ಎಂದು ಹೇಳಿದರು.
ಎನ್‌ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿದರು. ರಾಷ್ಟ್ರೀಯ ಔಷಧ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಜಿ.ನಾರಾಯಣಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೆ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

18 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

22 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

22 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago