Categories: Shivamogga

ಹಣ, ಧರ್ಮದ ಹೆಸರಿನಲ್ಲಿ ನ್ಯಾಯವನ್ನು ಸೋಲಿಸಲು ಬಿಜೆಪಿ ಹೊರಟಿದೆ ; ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ‘ರಾಜ್ಯದಲ್ಲಿ ಬಿಜೆಪಿ ಪಕ್ಷದವರು ಹಣ ಹಾಗೂ ಧರ್ಮದ ಹೆಸರಿನಲ್ಲಿ ನ್ಯಾಯವನ್ನು ಸೋಲಿಸಲು ಮುಂದಾಗುತ್ತಿದ್ದಾರೆ. ಇದಕ್ಕೆ, ಜನರು ಆಸ್ಪದ ಕೊಡಬಾರದು’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಹೇಳಿದರು.

ಸವಳಂಗ ರಸ್ತೆಯ ಕುಂಚೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ ‘ನಮ್ಮೂರ ಹುಡುಗ ಡಾ. ಶಿವರಾಜ್‌ಕುಮಾರ್ ಹಾಗೂ ಗೀತಾ ಶಿವರಾಜ್‌ಕುಮಾರ್ ಅವರು ಬಂಜಾರ ಸಮುದಾಯದೊಂದಿಗೆ ಶೀರ್ಷಿಕೆಯಡಿಯ ಯುಗಾದಿ ಹಬ್ಬ ಆಚರಣೆಯಲ್ಲಿ ಪಾಲ್ಗೊಂಡು ಮಾತ‌ನಾಡಿದರು.

ಬಿಜೆಪಿ ಪಕ್ಷದವರು ದೇವರನ್ನು ಬೀದಿಗೆ ತಂದು ಮತ ಕೇಳುತ್ತಿದ್ದಾರೆ. ಇದು ರಾಜಕೀಯದಲ್ಲಿ ಸಲ್ಲದು. ನಾವೂ ಕೂಡ ದೇವರ ಭಕ್ತರೆ. ಇಲ್ಲಿ ನ್ಯಾಯ, ನೀತಿ, ಸತ್ಯ, ಧರ್ಮ ಮಾತ್ರ ಗೆಲ್ಲಬೇಕು. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ಬಡವರ ಹಸಿವು ನೀಗಿಸಲಾಗುತ್ತಿದೆ. ಇಲ್ಲಿ ಕಷ್ಟಕ್ಕೆ ಸ್ಪಂದಿಸಿದವರಿಗೆ ಮತ ಚಲಾಯಿಸಬೇಕು ಎಂದರು.

ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರಿಗೆ ಕುಂಚೇಹಳ್ಳಿಯಲ್ಲಿ ಅಭಿಮಾನಿ ಬಳಗ ಹೆಚ್ಚು. ನನಗೆ ಹಾಗೂ ಗೀತಕ್ಕಗೆ ಈಗ ತಂದೆ ಇಲ್ಲ. ಆದ್ದರಿಂದ ನೀವೇ ನಮ್ಮ ತಂದೆ-ತಾಯಿ. ಇಂದಿನಿಂದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಅವರನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ. ಬಂಗಾರಪ್ಪ ಅವರಿಗೆ ನೀಡಿದ್ದ ಪ್ರೋತ್ಸಾಹ ಗೀತಾ ಶಿವರಾಜ್‌ಕುಮಾರ್ ಅವರಿಗೂ ನೀಡಿ ಎಂದು ಕೋರಿದರು.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಮೂಲ ಉದ್ದೇಶ ಬಡತನ ನಿರ್ಮೂಲನೆ ಹಾಗೂ ಬಡ ಕುಟುಂಬಗಳ ಹಸಿವು ನೀಗಿಸುವುದು. ಅದೇ, ಉದ್ದೇಶದಿಂದ ಲೋಕಸಭಾ ಚುನಾವಣೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಜನ ಸಾಮಾನ್ಯರಿಗೆ ಪೂರಕವಾದ ಯೋಜನೆಗಳನ್ನು ಘೋಷಿಸಲಾಗಿದೆ ಎಂದರು

ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ ಮಾತನಾಡಿ, ಕಂಚೇನಹಳ್ಳಿಗೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಹಾಗೂ ನಟ ರಾಜ್‍ಕುಮಾರ್ ಕುಟುಂಬ ಸದಸ್ಯರು ಭೇಟಿ ನೀಡಿದ್ದಾರೆ. ಇದು, ನಮ್ಮ ಸೌಭಾಗ್ಯ ಎಂದ ಅವರು,

ದೇಶದಲ್ಲಿ ಭಿಕ್ಷಾಟನೆ ನಡೆಸದೆ ಸ್ವಾಭಿಮಾನದ ಬದುಕನ್ನು ಬಂಜಾರ ಸಮುದಾಯ ಸಾಗಿಸುತ್ತಿದೆ. ಇಲ್ಲಿನ ಸಮಸ್ಯೆಗಳನ್ನು ನೀಗಿಸಲು ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು ಇಲ್ಲ ಎನ್ನುವುದನ್ನು ತೊಡೆದು ಹಾಕಿ, ಅವರ ಸ್ಥಾನವನ್ನು ಗೀತಾ ಶಿವರಾಜ್‌ಕುಮಾರ್ ಅವರು ತುಂಬಲಿದ್ದಾರೆ ಎಂದರು.

ಕಾಂಗ್ರೆಸ್ ಮುಖಂಡರಾದ ಶ್ರೀನಿವಾಸ ಕರಿಯಣ್ಣ ಮಾತನಾಡಿ, ಬಡವರಿಗೆ ನೆರವಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಆ ಎಲ್ಲಾ ಯೋಜನೆಗಳು ಜನಸಾಮಾನ್ಯರಿಗೆ ಸಮರ್ಪಕವಾಗಿ ತಲುಪಲು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಅವರಿಗೆ ಬೆಂಬಲಿಸಬೇಕಿದೆ ಎಂದರು.

ನಟ ಶಿವರಾಜ್‌ಕುಮಾರ್ ಮಾತನಾಡಿದರು. ಅದೇ ರೀತಿ, ದುರ್ಗಿಗುಡಿಯ ಗಣಪತಿ ದೇವಸ್ಥಾನ ಬಳಿಯಲ್ಲಿ ಗೀತಾ ಶಿವರಾಜ್‌ಕುಮಾರ್ ಪರ ಪ್ರಚಾರ ಸಭೆ ನಡೆಸಲಾಯಿತು.

ಕುಂಚೇಹಳ್ಳಿಯ ಸೇವಾಲಾಲ್ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಅವರು, ತೆರೆದ ವಾಹನದಲ್ಲಿ ವೇದಿಕೆ ಬಳಿಗೆ ಸಾಗಿದರು. ಬಂಜಾರ ಸಮುದಾಯದ ಮಹಿಳೆಯರು ಗೀತಾ ಶಿವರಾಜ್‌ಕುಮಾರ್ ಅವರಿಗೆ ಪ್ರೀತಿಯಿಂದ ಭರ ಮಾಡಿಕೊಂಡು ಆರತಿ ಬೆಳಗಿ ಸ್ವಾಗತಿಸಿದರು.

ಕಾಂಗ್ರೆಸ್ ಜಿಲ್ಲಾ ಘಟಕ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್, ಎಚ್.ಸಿ.ಯೋಗೀಶ್, ಅನಿತಾ ಕುಮಾರಿ, ಎಂ.ಶ್ರೀಕಾಂತ್, ಎನ್.ರಮೇಶ್, ರವಿಕುಮಾರ್, ಕಲಗೋಡು ರತ್ನಾಕರ್, ಎಸ್.ಕೆ.ಮರಿಯಣ್ಣ, ಜಗದೀಶ್ ಸೇರಿ ಬಂಜಾರದ ಸಮುದಾಯದ ಮುಖಂಡರು ಇದ್ದರು.

Malnad Times

Recent Posts

Rain Alert | ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…

6 days ago

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

7 days ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

7 days ago

ಮತದಾನಕ್ಕೆ ಕೌಂಟ್‌ಡೌನ್ | ಮತಗಟ್ಟೆಗಳಿಗೆ ಮತಯಂತ್ರ ಇತರ ಪರಿಕರಗಳೊಂದಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…

7 days ago

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 week ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

1 week ago