Categories: Shivamogga

ಹೆಣ್ಣು ಮಕ್ಕಳು ತಮ್ಮ ಮಕ್ಕಳಿಗೆ ಸಂಸ್ಕಾರ ಕಲಿಸಬೇಕು ; ನಟ ದೊಡ್ಡಣ್ಣ

ಶಿವಮೊಗ್ಗ: ನಾಟಕಕ್ಕೆ ತನ್ನದೇ ಆದ ಒಂದು ವಿಶೇಷ ಗಮ್ಮತ್ತಿದೆ ಎಂದು ಚಲನಚಿತ್ರ ನಟ ದೊಡ್ಡಣ್ಣ ಹೇಳಿದರು.

ಅವರು ಇಂದು ಕುವೆಂಪು ರಂಗಮಂದಿರದಲ್ಲಿ ದಸರಾ ಅಂಗವಾಗಿ ಆಯೋಜಿಸಿದ್ದ ರಂಗದಸರಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನಾಟಕಕ್ಕೆ ತನ್ನದೇ ಆದ ಶಕ್ತಿ ಇದೆ. ಅದು ಕಲಿತವರನ್ನು, ಕಲಿಯದವರನ್ನೂ ಕರೆಯುತ್ತದೆ. ಹೃದಯ ತಟ್ಟುತ್ತದೆ. ಅದಕ್ಕೊಂದು ಸಮ್ಮೋಹನ ಶಕ್ತಿ ಇದೆ. ಕಾವ್ಯಗಳಲ್ಲಿಯೇ ನಾಟಕ ಅತಿ ರಮ್ಯವಾದುದು. ನಾವು ನಾಟಕಗಳಿಂದಲೇ ಬೆಳೆದು ಈ ಮಟ್ಟಕ್ಕೆ ಬಂದಿದ್ದೇವೆ. ರಂಗಭೂಮಿ ಪ್ರೀತಿ, ಸಾಮರಸ್ಯ, ಸಮಾನತೆಯನ್ನು ಕಲಿಸುತ್ತದೆ ಎಂದರು.

ಬಡತನ ಕಲಿಸುವ ಪಾಠವನ್ನು ಯಾವ ವಿಶ್ವವಿದ್ಯಾನಿಲಯವೂ ಕಲಿಸುವುದಿಲ್ಲ. ಎಲ್ಲದಕ್ಕೂ ಸಂಸ್ಕಾರವೇ ತಳಹದಿಯಾಗಿರುತ್ತದೆ. ನಮ್ಮ ಹೆಣ್ಣು ಮಕ್ಕಳು ತಮ್ಮ ಮಕ್ಕಳಿಗೆ ಸಂಸ್ಕಾರ ಕಲಿಸಬೇಕು. ಏಕೆಂದರೆ ನಾನು ಈ ಮಟ್ಟಕ್ಕೆ ಬಂದಿದ್ದೇನೆ ಎಂದರೆ ನನ್ನ ತಾಯಿಯೇ ಕಾರಣ ಎಂದರು.

ಶಿವಮೊಗ್ಗದಲ್ಲಿ ನಡೆಯುವ ದಸರಾ ಅತ್ಯಂತ ಸಂಭ್ರಮದ್ದಾಗಿದೆ. ಅದರಲ್ಲೂ ರಂಗದಸರಾವನ್ನು ವಿಶೇಷವಾಗಿ ಮಾಡಿರುವುದು ಅತ್ಯಂತ ಶ್ಲಾಘನೀಯವಾದುದು. ಈ ದಸರಾ ಹೀಗೆಯೇ ಮುಂದುವರಿದು ಮೈಸೂರು ದಸರಾದಂತೆ ವಿಶ್ವ ವಿಖ್ಯಾತಿ ಪಡೆಯಲಿ ಎಂದ ಅವರು, ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆಗೆ 100 ವರ್ಷ ತುಂಬಲಿದೆ. ಮೈಸೂರು ಮಹಾರಾಜರ ಕೊಡುಗೆ ಅದು. ನಾನು ಇಲ್ಲಿ ನಾಲ್ಕನೇ ದರ್ಜೆ ಕಾರ್ಮಿಕನಾಗಿ ಕೆಲಸ ಮಾಡಿದ್ದೇನೆ ಎಂಬುದೇ ನನಗೆ ಹೆಮ್ಮೆಯಾಗಿದೆ. ಮೈಸೂರು ಮಹಾರಾಜರು ಕೇವಲ ದಸರಾವನ್ನು ನೀಡಲಿಲ್ಲ. ಸಣ್ಣಕ್ಕಿ ತಿನ್ನಲು ಅವಕಾಶ ಮಾಡಿಕೊಟ್ಟವರು ಎಂದರು.

ಇದಕ್ಕೂ ಮುನ್ನ ಮಹಾನಗರ ಪಾಲಿಕೆ ಆವರಣದಿಂದ ಶಿವಪ್ಪನಾಯಕ ವೃತ್ತ, ನೆಹರೂ ರಸ್ತೆ ಮಾರ್ಗವಾಗಿ ಕುವೆಂಪು ರಂಗಮಂದಿರದವರೆಗೆ ರಂಗಜಾಥಾ ನಡೆಯಿತು. ಮೆರವಣಿಗೆಯಲ್ಲಿ ರಂಗಕಲಾವಿದರು ವಿವಿಧ ವೇಷಭೂಷಣದೊಂದಿಗೆ ಜಾಥಾದಲ್ಲಿ ಪಾಲ್ಗೊಂಡಿದ್ದರು. ಡೊಳ್ಳು ಸೇರಿದಂತೆ ವಿವಿಧ ಕಲಾ ತಂಡಗಳು ಭಾಗವಹಿಸಿದ್ದವು.

ಕಾರ್ಯಕ್ರಮದಲ್ಲಿ ರಂಗಜಾಥಾಕ್ಕೆ ಚಾಲನೆ ನೀಡಿದ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕಾಂತೇಶ್ ಕದರಮಂಡಲಗಿ, ಶಾಸಕ ಎಸ್.ಎನ್. ಚನ್ನಬಸಪ್ಪ, ಹವ್ಯಾಸಿ ರಂಗತಂಡಗಳ ಕಲಾವಿದರ ಸಂಘದ ಅಧ್ಯಕ್ಷ ಕೊಟ್ರಪ್ಪ ಜಿ. ಹಿರೇಮಾಗಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಉಮೇಶ್ ಹಾಲಾಡಿ, ರಂಗದಸರಾ ಸಮಿತಿ ಅಧ್ಯಕ್ಷ ಎಸ್.ಜಿ. ರಾಜು ಸೇರಿದಂತೆ ಹಲವರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

3 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

3 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

3 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

3 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago