ಹೆದ್ದಾರಿಪುರದಲ್ಲಿ ವಿಕಸಿತ ಸಂಕಲ್ಪ ಯಾತ್ರೆಗೆ ಭವ್ಯ ಸ್ವಾಗತ

0 308

ರಿಪ್ಪನ್‌ಪೇಟೆ: ಮೋದಿ ನೇತೃತ್ವದ ಕೇಂದ್ರದ ಬಿಜೆಪಿ (BJP) ಸರ್ಕಾರ ಜಾರಿಗೊಳಿಸಿರುವ ಹತ್ತು ಹಲವು ಜನಹಿತ ಕಾರ್ಯಕ್ರಮಗಳು ದೇಶದ ಪ್ರತಿಯೊಬ್ಬ ನಾಗರೀಕನಿಗೆ ಸಮರ್ಪಕವಾಗಿ ತಲುಪುವಂತಾಗಬೇಕು ಎಂಬುದೇ ಈ ಸಂಕಲ್ಪ ಯಾತ್ರೆಯ ಉದ್ದೇಶವೆಂದು ಮಾಜಿ ಗೃಹ ಸಚಿವ, ಶಾಸಕ ಆರಗ ಜ್ಞಾನೇಂದ್ರ (Araga Jnanendra) ಹೇಳಿದರು.

ಹೆದ್ದಾರಿಪುರ ಗ್ರಾಮದಲ್ಲಿ ಆಯೋಜಿಸಲಾದ ವಿಕಸಿತ ಸಂಕಲ್ಪ ಯಾತ್ರೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಈ ಹಿಂದಿನ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಕ್ಷೇತ್ರ ಸೇರಿದಂತೆ ರಾಜ್ಯದಲ್ಲಿ ಅಭಿವೃದ್ಧಿಗೆ ಹಿನ್ನಡೆಯಾಗದಂತೆ ಹೆಚ್ಚಿನ ಆರ್ಥಿಕ ನೆರವು ಬರುತ್ತಿತ್ತು ಆದರೆ ಇಂದಿನ ಸರ್ಕಾರದಲ್ಲಿ ಗ್ಯಾರಂಟಿ ಯೋಜನೆಯಿಂದಾಗಿ ಅಭಿವೃದ್ದಿಗೆ ಅನುದಾನದ ಕೊರತೆಯಿಂದಾಗಿ ಕಾಮಗಾರಿಗಳು ಆರ್ಧಕ್ಕೆ ನಿಲ್ಲುವಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿ,
ಕ್ಷೇತ್ರದ ಮತದಾರರಿಗೆ ಉತ್ತರಿಸದಂತಾಗಿದೆ ಎಂದರು.

ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಈ ಹಿಂದೆ ಕೇಂದ್ರ ಸರ್ಕಾರ ಯಾವುದೇ ಯೋಜನೆ ಅನುಷ್ಠಾನಗೊಳಿಸಿದರು ಕೂಡಾ ಮತದಾರರ ಕೈ ಸೇರುವುದು ಕೇವಲ ಹಣ ಮಧ್ಯವರ್ತಿಗಳ ಪಾಲಾಗುತ್ತಿತ್ತು ಅದರೆ ಮೋದಿ ಸರ್ಕಾರದಲ್ಲಿ ಯಾವುದೇ ಮಧ್ಯವರ್ತಿಗಳಿಲ್ಲದೇ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರ ಸೇರುತ್ತಿದೆ ಎಂದು ಹೇಳಿ ಬ್ಯಾಂಕ್‌ಗಳಲ್ಲಿ ಸಹ ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಫಲಾನುಭವಿಗಳಿಗೆ ತಲುಪುವಂತೆ ಮಾಡುತ್ತಿರುವುದರ ಬ್ಯಾಂಕ್ ಅಧಿಕಾರಿಗಳ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಹೆದ್ದಾರಿಪುರ ಗ್ರಾಮ ಪಂಚಾಯ್ತಿ ಆಧ್ಯಕ್ಷೆ ವಿನಂತಿ, ಉಪಾಧ್ಯಕ್ಷೆ ವನಿತಾ ಗಂಗಾಧರ, ಜಿಲ್ಲಾ ಬಿಜೆಪಿ ಆಧ್ಯಕ್ಷ ಟಿ.ಡಿ.ಮಘೇರಾಜ್, ತಾಲ್ಲೂಕ್ ಬಿಜೆಪಿ ಅಧ್ಯಕ್ಷ ಗಣಪತಿ ಬಿಳಗೋಡು, ಗ್ರಾಮ ಪಂಚಾಯ್ತಿ ಸದಸ್ಯರಾದ ವಿಶುಕುಮಾರ್, ಸಂತೋಷ, ಲಿಂಗರಾಜ್, ಪ್ರವೀಣ್, ಮಳವಳ್ಳಿ ಚಂದ್ರಶೇಖರ್, ಸುಮಿತ್ರ, ನಾಗರತ್ನ, ಷಣ್ಮುಖ ಮತ್ತು ಸುಜಾತ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ,ಬಿ.ಮಂಜುನಾಥ, ಕಲ್ಲೂರು ನಾಗೇಂದ್ರ, ಜಂಬಳ್ಳಿ ಗಿರೀಶ್, ಬಿಜೆಪಿ ಘಟಕದ ಅಧ್ಯಕ್ಷ ರಾಮಣ್ಣ ಹೆದ್ದಾರಿಪುರ ಇನ್ನಿತರರು, ಪಕ್ಷದ ಮುಖಂಡರು ಹಾಗೂ ಹೆದ್ದಾರಿಪುರ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರು ಸಿಬ್ಬಂದಿ ವರ್ಗ ಹಾಜರಿದ್ದರು.

Leave A Reply

Your email address will not be published.

error: Content is protected !!