Categories: RipponpeteShivamogga

ಹೊಂಬುಜ ; ದಸರಾ ನವರಾತ್ರಿಗೆ ಪಾರಂಪರಿಕ ಚಾಲನೆ

ರಿಪ್ಪನ್‌ಪೇಟೆ : ಅತಿಶಯ ಶ್ರೀಕ್ಷೇತ್ರ ಹೊಂಬುಜದ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಪದ್ಮಾವತಿ ಅಮ್ಮನವರ ಸನ್ನಿಧಿಯಲ್ಲಿ ಪರಂಪರಾನುಗತವಾಗಿ ಶರನ್ನವರಾತ್ರಿ ಮಹೋತ್ಸವಕ್ಕೆ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರು ಘಟಸ್ಥಾಪನೆಯ ಮೂಲಕ ಚಾಲನೆ ನೀಡಿದರು. ಅಂದು ಊರ ಹಾಗೂ ಪರಊರಿನಿಂದ ಆಗಮಿಸಿದ್ದ ಭಕ್ತವೃಂದದವರು ಪೂಜಾ ಮಹೋತ್ಸವಗಳಲ್ಲಿ ಪಾಲ್ಗೊಂಡಿದ್ದರು.

ಪೂಜ್ಯ ಶ್ರೀಗಳವರು ಭ|| ಶ್ರೀ ಪಾರ್ಶ್ವನಾಥ ಸ್ವಾಮಿ ಮತ್ತು ಜಗನ್ಮಾತೆ ಶ್ರೀ ಪದ್ಮಾವತಿ ಅಮ್ಮನವರಲ್ಲಿ ಪ್ರಾರ್ಥನೆ ಸಲ್ಲಿಸಿ ಎಲ್ಲರ ಸನ್ಮಂಗಲಕ್ಕಾಗಿ ಆರಿಕೆ ಮಾಡಿಕೊಂಡಿರುವುದಾಗಿ ತಿಳಿಸಿದರು.
ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಮತ್ತು ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನಿಧ್ಯ ಮತ್ತು ಮಾರ್ಗದರ್ಶನದಲ್ಲಿ ಪ್ರತಿದಿನ ಧಾರ್ಮಿಕ ವಿಧಿ-ವಿಧಾನ ಪೂಜಾ ಮಹೋತ್ಸವಗಳು ನೆರವೇರಲಿವೆ.

ಅ. 20 ಶುಕ್ರವಾರ-ಸರಸ್ವತಿ ಪೂಜೆ, ಅ. 22 ಭಾನುವಾರ-ಜೀವದಯಾಷ್ಟಮಿ, ಅ. 23 ಸೋಮವಾರ-ಆಯುಧಪೂಜೆ, ಅ. 24 ಮಂಗಳವಾರ-ವಿಜಯದಶಮಿ ಉತ್ಸವ, ಶ್ರೀದೇವಿ ಪಲ್ಲಕ್ಕಿ ಉತ್ಸವ, ಪರಮಪೂಜ್ಯ ಸ್ವಸ್ತಿಶ್ರೀಗಳವರ ಸಿಂಹಾಸನಾರೋಹಣ ಹಾಗೂ ಶ್ರೀಗಳವರ ಪಾದಪೂಜೆ ಕಾರ್ಯಕ್ರಮಗಳು ನೆರವೇರಲಿದೆ. ಸರ್ವ ಭಕ್ತವೃಂದದವರು ಶರನ್ನವರಾತ್ರಿ ಪೂಜಾ ವಿಧಿಗಳಲ್ಲಿ ಪಾಲ್ಗೊಂಡು ಪುಣ್ಯಭಾಗಿಗಳಾಗುವಂತೆ ಅಪೇಕ್ಷಿಸಲಾಗಿದೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

10 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

14 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

14 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

17 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

17 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago