ಹೊಸನಗರದಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ರಾಜ್ಯ ಮಟ್ಟದ ಕೃಷಿ ಮೇಳ

ಹೊಸನಗರ : ಜೆಸಿಐ ಹೊಸನಗರ ಡೈಮಂಡ್ ಮತ್ತು ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸಹಯಯೋಗದಲ್ಲಿ ಜ.12ರ ಶುಕ್ರವಾರದಿಂದ ಜ.14ರ ಭಾನುವಾರದವರೆಗೆ ಮೂರು ದಿನಗಳ ಕಾಲ ಪಟ್ಟಣದ ನೆಹರೂ ಮೈದಾನದಲ್ಲಿ ರಾಜ್ಯ ಮಟ್ಟದ ಕೃಷಿ ಮೇಳ ನಡೆಯಲಿದ್ದು ಶುಕ್ರವಾರ ಸಂಜೆ 5:00 ಗಂಟೆಗೆ ಕೃಷಿ ಮೇಳದ ಉದ್ಘಾಟನಾ ಸಮಾರಂಭ ನಡೆಯಲಿದೆ.

ಉದ್ಘಾಟಕರಾಗಿ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು.ಎಸ್ ಬಂಗಾರಪ್ಪನವರು ನೆರವೇರಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆ‌ರ್.ಎಂ. ಮಂಜುನಾಥ್ ಗೌಡ ವಹಿಸಲಿದ್ದು ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಇವರು ಪ್ರಗತಿಪರ ಕೃಷಿಕರಿಗೆ ಸನ್ಮಾನಿಸಲಿದ್ದಾರೆ. ತೀರ್ಥಹಳ್ಳಿ ಕ್ಷೇತ್ರದ ಶಾಸಕರಾದ ಆರಗ ಜ್ಞಾನೇಂದ್ರ ನಿವೃತ್ತ ಸೈನಿಕರಿಗೆ ಸನ್ಮಾನಿಸಲಿದ್ದಾರೆ.

ಸಮಾರಂಭದ ಮುಖ್ಯ ಅತಿಥಿಗಳಾಗಿ ಡಾ. ಆರ್.ಸಿ .ಜಗದೀಶ್ ಕುಲಪತಿಗಳು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಶಿವಮೊಗ್ಗ, ಸುಧೀರ್ ಜಿ.ಎನ್. ನಿರ್ದೇಶಕರು ಡಿಸಿಸಿ ಬ್ಯಾಂಕ್, ಡಿ.ಆ‌ರ್ ವಿನಯಕುಮಾ‌ರ್ ಅಧ್ಯಕ್ಷರು ತುಂಗಾ ಅಡಿಕೆ ಮಾರಾಟ ಸೌಹಾರ್ದ ಸಹಕಾರ ನಿಯಮಿತ ಹೊಸನಗರ, ಕೆ.ವಿ. ಕೃಷ್ಣಮೂರ್ತಿ ನಿರ್ದೇಶಕರು ಮಾಮ್ಕೋಸ್ ಶಿವಮೊಗ್ಗ, ಎಂ.ಎಂ. ಪರಮೇಶ್ ನಿರ್ದೇಶಕರು ಡಿಸಿಸಿ ಬ್ಯಾಂಕ್ ಶಿವಮೊಗ್ಗ, ವಿದ್ಯಾಧರ ಹೆಚ್. ಎನ್. ನಿರ್ದೇಶಕರು ಶಿವಮೊಗ್ಗ ಜಿಲ್ಲಾ ಹಾಲು ಒಕ್ಕೂಟ. ವಾಸುದೇವ ವ್ಯವಸ್ಥಾಪಕ ನಿರ್ದೇಶಕರು, ಡಿ ಆರ್ ಸಿ ಎಸ್ ಶಿವಮೊಗ್ಗ ಸಿ. ವಿ. ಚಂದ್ರಶೇಖ‌ರ್ ಪ್ರಥಮ ದರ್ಜೆ ಗುತ್ತಿಗೆದಾರರು ನಗರ, ರಾಜೇಶ್ ಕೀಳಂಬಿ ವ್ಯವಸ್ಥಾಪಕ ನಿರ್ದೇಶಕರು ಕೀಳಂಬಿ ಮೀಡಿಯಾ ಲ್ಯಾಬ್ ಪ್ರೈವೇಟ್ ಲಿಮಿಟೆಡ್ ರವರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ನಂತರ ಗಂಗಾವತಿ ಪ್ರಾಣೇಶ್ ತಂಡದವರಿಂದ ‘ನಗೆಹಬ್ಬ’ ಆಯೋಜಿಸಲಾಗಿದೆ.

ಶನಿವಾರ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದರಲ್ಲಿ ಸಂಜೆ ಐದು ಗಂಟೆಗೆ ನೆಹರು ಮೈದಾನದಲ್ಲಿ ‘ಶಾಖಾಹಾರಿ’ ಚಲನಚಿತ್ರದ ಸಾಂಗ್ ರಿಲೀಸ್, ಟೀಮ್ ಆತ್ರೇಯ ಅವರಿಂದ ಸಂಗೀತ ಮತ್ತು ನೃತ್ಯ ಕಾರ್ಯಕ್ರಮ. ಈ ಕಾರ್ಯಕ್ರಮದ ಚಾಲನೆಯನ್ನು ಬಿ.ವೈ. ರಾಘವೇಂದ್ರ ಸನ್ಮಾನ್ಯ ಸಂಸದರು ಶಿವಮೊಗ್ಗ ನೆರೆವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ಹೆಚ್.ಹಾಲಪ್ಪ ಹರತಾಳು ಮಾಜಿ ಸಚಿವರು ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷರು ಭಾಗವಹಿಸಲಿದ್ದಾರೆ.

ಭಾನುವಾರ ಬೆಳಿಗ್ಗೆ 10:30 ಕ್ಕೆ ಕೃಷಿ ವಿಚಾರಗೋಷ್ಠಿ ನಡೆಯಲಿದ್ದು ವಿಷಯ, ಅಡಿಕೆಯಲ್ಲಿ ಅಂತರ್ ಬೆಳೆ ಮತ್ತು ಅಡಿಕೆ ಎಲೆಚುಕ್ಕಿರೋಗ ನಿರ್ವಹಣೆ ಬಗ್ಗೆ ಸಂಪನ್ಮೂಲ ವ್ಯಕ್ತಿಗಳು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ವಿಜ್ಞಾನಿಗಳು ಭಾಗವಹಿಸಿ ನೆರವೇರಿಸಲಿದ್ದಾರೆ.

ಈ ಎಲ್ಲಾ ಕಾರ್ಯಕ್ರಮಗಳಿಗೆ ಜೆಸಿ ಮಧುಸೂದನ್ ನಾವಡ ಅಧ್ಯಕ್ಷರು ಹೊಸನಗರ ಜೆಸಿಐ ಡೈಮಂಡ್, ಅರವಿಂದ್ ಎಸ್ ಕಾರ್ಯದರ್ಶಿ ಮತ್ತು ನಿಯೋಜಿತ ಅಧ್ಯಕ್ಷರು ಜೆಸಿಐ ಹೊಸನಗರ ಡೈಮಂಡ್, ಜೆಸಿ ಸಂದೀಪ್, ಎಚ್ ಕಾರ್ಯಕ್ರಮ ನಿರ್ದೇಶಕರು ಮತ್ತು ಜೆಸಿ ವಿನಾಯಕ ಕರಬ ಕಾರ್ಯಕ್ರಮ ನಿರ್ದೇಶಕರು ಮತ್ತು ಸರ್ವ ಸದಸ್ಯರು ಹೊಸನಗರ ಜೆಸಿಐ ಡೈಮೆಂಡ್ ರವರು ಸಾರ್ವಜನಿಕರನ್ನು ಆಹ್ವಾನಿಸುತ್ತಾರೆ ಮತ್ತು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಡಲು ವಿನಂತಿಸಿಕೊಂಡಿದ್ದಾರೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

13 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

17 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

17 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

20 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

20 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago