ಹೊಸನಗರದಲ್ಲಿ ಸರ್ಕಾರಿ ನೌಕರರ ಕ್ರೀಡಾಕೂಟ | ಶ್ರೀಮಂತಿಕೆ ಇದ್ದರೆ ಸಾಲದು ಆರೋಗ್ಯ ಕಾಪಾಡಿಕೊಳ್ಳಬೇಕು ; ಬಸವಣ್ಯಪ್ಪ

ಹೊಸನಗರ: ಮನುಷ್ಯರಿಗೆ ಶ್ರೀಮಂತಿಕೆ ಇದ್ದರೆ ಸಾಲದು ಆರೋಗ್ಯ ಕಾಪಾಡಿಕೊಳ್ಳಬೇಕು ಪ್ರತಿದಿನ ವ್ಯಾಯಾಮದ ಜೊತೆಗೆ ಆಟೋಟಗಳಲ್ಲಿ ಭಾಗವಹಿಸಿ ತಮ್ಮ ಜೀವವನ್ನು ದಂಡಿಸಿದರೇ ಮಾತ್ರ ಜೀವವು ಉಲ್ಲಾಸದಾಯಕವಾಗಿರುತ್ತದೆ, ಜೊತೆಗೆ ಆರೋಗ್ಯವೂ ತೃಪ್ತಿದಾಯಕವಾಗಿರುತ್ತದೆ ಎಂದು ಹೊಸನಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವಣ್ಯಪ್ಪನವರು ಹೇಳಿದರು.

ಪಟ್ಟಣದ ನೆಹರು ಮೈದಾನದಲ್ಲಿ ಹೊಸನಗರ ತಾಲ್ಲೂಕು ಸರ್ಕಾರಿ ನೌಕರರ ತಾಲ್ಲೂಕು ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರ್ಕಾರಿ ನೌಕರರು ಬೆಳಿಗ್ಗೆ ಆಯಿತ್ತೆಂದರೆ ಕೆಲಸದಲ್ಲಿ ಮಗ್ನರಾಗಿರುತ್ತಾರೆ. ಅವರಿಗೆ ಮನರಂಜನೆಯೇ ಇಲ್ಲವಾಗಿದೆ. ಇಂಥಹ ಕ್ರೀಡಾಕೂಟ ಮನರಂಜನೆ ಕಾರ್ಯಕ್ರಮ ಏರ್ಪಡಿಸುವುದರಿಂದ ಮನರಂಜನೆಯ ಜೊತೆಗೆ ತಾಲ್ಲೂಕಿನ ಎಲ್ಲ ಸರ್ಕಾರಿ ನೌಕರರು ಒಟ್ಟಾಗಿ ಕಳೆಯುವ ಭಾಗ್ಯ ಹಾಗೂ ಎಲ್ಲ ಸರ್ಕಾರಿ ನೌಕರರ ಕಷ್ಟ ಸುಖಗಳನ್ನು ವಿನಿಯೋಗಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದರು.

ಆದಷ್ಟು ಬೇಗ ಸರ್ಕಾರಿ ನೌಕರರ ಸಮವೇಶ: ಹೊಸನಗರ ತಾಲ್ಲೂಕಿನಲ್ಲಿ ಆದಷ್ಟು ಬೇಗ ರಾಜ್ಯ ನೌಕರರ ಸಮಾವೇಶವನ್ನು ಹೊಸನಗರದಲ್ಲಿ ನಡೆಸಲಾಗುವುದು. ಇದರ ಜೊತೆಗೆ ರಾಜ್ಯದ ಶಾಸಕರು, ಸಚಿವರು, ಸಂಸದರನ್ನು ಈ ಸಮ್ಮೇಳನಕ್ಕೆ ಕರೆಸಲಾಗುವುದು ತಮ್ಮ ಬೇಡಿಕೆಗಳನ್ನು ಅವರ ಮುಂದಿಡಲಾಗುವುದು. ಈ ಸಮ್ಮೇಳನ ನಡೆಸಲು ಹೊಸನಗರ ತಾಲ್ಲೂಕಿನ ಎಲ್ಲ ಸರ್ಕಾರಿ ನೌಕರರು ಕೈ ಜೋಡಿಸಬೇಕೆಂದರು.

ಉತ್ತಮ ಆರೋಗ್ಯಕ್ಕೆ ಕ್ರೀಡೆಗೆ ಸಹಕಾರಿ

ಮನುಷ್ಯರಿಗೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಸಹಕಾರಿಯಾಗಿದ್ದು ಪ್ರತಿಯೊಬ್ಬರು ಬಿಡುವಿನ ಸಮಯವನ್ನು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಹಾಗೂ ಉತ್ತಮ ಆರೋಗ್ಯವಂತ ಜೀವನ ಸಾಗಿಸಬೇಕೆಂದು ಈ ಕಾರ್ಯಕ್ರಮಕ್ಕೆ ಆಗಮಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿದ ತಾಲ್ಲೂಕು ಶಿಕ್ಷಣಾಧಿಕಾರಿ ಕೃಷ್ಣಮೂರ್ತಿಯವರು ಹೇಳಿದರು.

ನೌಕರರಿಗೆ ಆರೋಗ್ಯದ ಜೊತೆಗೆ ಶಿಸ್ತು ಸಂಯಮ ಮುಖ್ಯ

ಸರ್ಕಾರಿ ನೌಕರರು ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕಾದರೇ ಪ್ರತಿದಿನ ಬೆಳಿಗ್ಗೆ ವಾಕ್ ಹೋಗುವುದು, ಸೈಕಲ್ ಓಡಿಸುವುದು ಹಾಗೂ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೇಹವನ್ನು ದಂಡಿಸಿಕೊಳ್ಳಬೇಕು. ಇಲ್ಲವಾದರೆ ದೇಹ ಬೆಳೆಯುವ ಜೊತೆಗೆ ಆರೋಗ್ಯ ಹದಗೆಡುತ್ತದೆ ದೇಹ ದಂಡಿಸದಿದ್ದರೇ ಕಾಯಿಲೆಗಳು ಸಣ್ಣ ವಯಸ್ಸಿನಲ್ಲಿಯೇ ದೇಹವನ್ನು ಆಕ್ರಮಿಸಿಕೊಂಡು ನೂರಾರು ಕಾಯಿಲೆಗಳಿಗೆ ತುತ್ತಾಗಬೇಕಾಗುತ್ತದೆ. ಇದರಿಂದ ನಿಮ್ಮ ದೇಹ ಹಾಳಾಗುವುದರ ಜೊತೆಗೆ ನಿಮ್ಮ ಕುಟುಂಬಕ್ಕೂ ತೊಂದರೆಯಾಗುತ್ತದೆ ಆದ್ದರಿಂದ ನಿಮ್ಮ ಜೀವ-ಜೀವನ ನಿಮ್ಮ ಕೈಯಲಿದ್ದು ಅದನ್ನು ಆ ಜೀವನವನ್ನು ನೀವೇ ರೂಪಿಸಿಕೊಳ್ಳುವುದು ಮತ್ತು ಸಣ್ಣ ವಯಸ್ಸಿನಿಂದಲೇ ಜೀವನದಲ್ಲಿ ಶಿಸ್ತು ಸಂಯಮ ರೂಪಿಸಿಕೊಳ್ಳುವುದು ಬಹಳ ಮುಖ್ಯವಾಗಿದ್ದು ಆರೋಗ್ಯ ಶಿಸ್ತು-ಸಂಯಮ ಈ ಮೂರು ನಿಮ್ಮ ಜೀವನದಲ್ಲಿ ಆಳವಡಿಸಿಕೊಂಡು ಜೀವನ ಸಾಗಿಸಬೇಕೆಂದು ಹೊಸನಗರ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರು ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಎಲ್ಲಾ ಸರ್ಕಾರಿ ನೌಕರರು ಭಾಗವಹಿಸಬೇಕು
ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವುದು ಕಷ್ಟದ ಕೆಲಸವಲ್ಲ ಆದರೆ ಹೊಸನಗರ ತಾಲ್ಲೂಕಿನಲ್ಲಿ 28 ಸರ್ಕಾರಿ ಇಲಾಖೆಗಳಿವೆ ಇಲಾಖೆಯ ನೌಕರರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕು. ಅದನ್ನು ಬಿಟ್ಟು ಬೆರಳೆಣಿಕೆಯಷ್ಟು ನೌಕರರು ಭಾಗವಹಿಸಿವುದರಿಂದ ಸರ್ಕಾರಿ ನೌಕರರಿಗೂ ಹಾಗೂ ಆಯೋಜಕರಿಗೂ ಬೇಸರವಾಗುತ್ತದೆ. ಮುಂದಿನ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ತಾಲ್ಲೂಕಿನ ಎಲ್ಲ ಸರ್ಕಾರಿ ನೌಕರರು ಭಾಗವಹಿಸುವಂತೆ ಇಲಾಖೆಗಳಿಂದಲೇ ಸುತ್ತೋಲೆ ಹೊರಡಿಸಬೇಕೆಂದರು.

ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ನರೇಂದ್ರಕುಮಾರ್, ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ರೇಣುಕೇಶ್, ಶಿಕ್ಷಕರ ಸಂಘದ ಅಧ್ಯಕ್ಷ ಸುರೇಶ್ ಹೆಚ್.ಆರ್, ಗೌರವ ಅಧ್ಯಕ್ಷ ಜಗದೀಶ್ ಕಾಗಿನೆಲ್ಲಿ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಸ್ವಾಮಿ, ಖಜಾಂಚಿ ಪ್ರಭಾಕರ್ ಆರ್, ಸ್ವಾಮಿರಾವ್, ಸೋಮಶೇಖರ್, ವನಮಾಲ, ಪೃಥ್ವಿರಾಜ್ ಇನ್ನೂ ಮುಂತಾದವರು ಉಪಸ್ಥಿತರಿದ್ದು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

2 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

3 days ago