ಹೊಸನಗರ ; ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು ಮನೆ ಬೆಂಕಿಗಾಹುತಿ !

ಹೊಸನಗರ: ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು ಶಿಕ್ಷಕ ಮೊರಾರ್ಜಿ ಬಿನ್ ಬಸವನಾಯ್ಕ ಎಂಬುವವರಿಗೆ ಸೇರಿದ ಮನೆ ಬೆಂಕಿಗಾಹುತಿಯಾದ ಘಟನೆ ತಾಲೂಕಿನ ಜೇನಿ ಗ್ರಾಪಂ ವ್ಯಾಪ್ತಿಯ ಜಂಬಳ್ಳಿ ಗ್ರಾಮದ ಭೀಮನಕೆರೆಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.

ಶನಿವಾರ ಸಂಜೆ ಹೊಸನಗರದ ಬಾಲಾಜಿ ಇಂಡೇನ್ ಗ್ಯಾಸ್ ಏಜೆನ್ಸಿಯಿಂದ ಸರಬರಾಜಾದ ಸಿಲಿಂಡರ್ ಅನ್ನು ಭಾನುವಾರ ಬೆಳಗ್ಗೆ 8:30 ರ ಸುಮಾರಿಗೆ ರೆಗ್ಯುಲೇಟರ್ ಅಳವಡಿಸುವಾಗ ಅನಿಲ ಸೋರಿಕೆಯಾಗಿದ್ದು ನಂತರ ಸ್ಫೋಟಗೊಂಡಿದೆ ಎಂದು ತಿಳಿದುಬಂದಿದೆ.

ಇಂಡೇನ್ ಕಂಪನಿಗೆ ಸೇರಿದ ಸಿಲಿಂಡರ್ ಇದಾಗಿದ್ದು ವಿತರಕರು ಅವಧಿ ಮೀರಿದ ಸಿಲಿಂಡರ್ (D 23 ಎಂದು ಸಿಲಿಂಡರ್ ಮೇಲೆ ನಮೂದಾಗಿದೆ) ವಿತರಣೆ ಮಾಡಿದ್ದರಿಂದ ಈ ಘಟನೆ ನಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸ್ಪೋಟದ ತೀವ್ರತೆಗೆ ಮನೆಯ ಕಿಡಕಿ, ಬಾಗಿಲುಗಳು ಛಿದ್ರಗೊಂಡಿವೆ. ಮನೆ ಮೇಲ್ಛಾವಣಿ ಸಂಪೂರ್ಣ ಸುಟ್ಟು ಹೋಗಿದ್ದು ಮನೆಯೊಳಗೆ ಸಂಗ್ರಹಿಸಿಡಲಾದ ಅಡಿಕೆ, ಧವಸ ಧಾನ್ಯಗಳು, ಟಿವಿ, ರೆಫ್ರಿಜರೇಟರ್ ಮತ್ತು ಇನ್ನಿತರ ವಿದ್ಯುತ್ ಉಪಕರಣಗಳು ಬೆಂಕಿಗೆ ಸಂಪೂರ್ಣ ಆಹುತಿಯಾಗಿ ಸುಮಾರು 10 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ವಿಷಯ ತಿಳಿದು ಹೊಸನಗರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿದ್ದಾರೆ. ಬಾಲಾಜಿ ಇಂಡೇನ್ ಗ್ಯಾಸ್ ಏಜೆನ್ಸಿ ಜಗದೀಶ್ ಮತ್ತು ವಿತರಕನ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.

ಈ ಘಟನೆ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Malnad Times

Recent Posts

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

20 hours ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

21 hours ago

ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರಿಂದ ಭರ್ಜರಿ ರೋಡ್ ಷೋ

ರಿಪ್ಪನ್‌ಪೇಟೆ : ನಾಡಿದ್ದು ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಇಂದು ಭರ್ಜರಿ…

22 hours ago

ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ಹಸ್ತಕ್ಷೇಪವಿಲ್ಲ ; ಸುಧೀರ್‌ಕುಮಾರ್ ಮುರೊಳ್ಳಿ ಸ್ಪಷ್ಟನೆ

ಹೊಸನಗರ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಹಾಸನದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಅತ್ಯಂತ ಹೇಯವಾದದ್ದು. ಹೆಣ್ಣು ಮಕ್ಕಳ ಮಾನಹಾನಿಯಾಗುವಂತಹ…

24 hours ago

ಕಾಡಾನೆ ದಾಳಿಯಿಂದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ ಬಿವೈಆರ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…

1 day ago

Shivamogga | ನಗರದಲ್ಲಿ ಗಮನ ಸೆಳೆದ ಮತದಾನ ಜಾಗೃತಿ ‘ಮ್ಯಾರಾಥಾನ್’

ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…

1 day ago