ಹೊಸನಗರ ; ಜೂಜಾಟ ಅಡ್ಡೆ ಮೇಲೆ ಪೊಲೀಸರ ದಾಳಿ, 12,400 ರೂ.ವಶಕ್ಕೆ, ಪ್ರಕರಣ ದಾಖಲು

0 825

ಹೊಸನಗರ: ತಾಲ್ಲೂಕಿನ ಅಲಗೇರಿಮಂಡ್ರಿ ಬಳಿಯ ಮುಡುಬಾ ಗ್ರಾಮದಲ್ಲಿ ಸುಮಾರು 10 ಜನರು ಅಂದರ್ ಬಾಹರ್ ಇಸ್ಪೀಟ್ ಆಟವಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ ಆದೇಶದ ಮೇರೆಗೆ ಸಬ್ ಇನ್ಸ್‌ಪೆಕ್ಟರ್ ರಾಜುರೆಡ್ಡಿಯವರ ನೇತೃತ್ವದಲ್ಲಿ ದಾಳಿ ನಡೆಸಿ ಸುಮಾರು ಅಂದಾಜು 12,400 ರೂಪಾಯಿ ಹಾಗೂ 8 ಜನರನ್ನು ವಶಕ್ಕೆ ಪಡೆದು ಆರೋಪಿಗಳ ವಿರುದ್ಧ ಕೇಸ್ ದಾಖಲಿಸಿದ್ದಾರೆ.

ಈ ಸಂದರ್ಭದಲ್ಲಿ ಹೊಸನಗರ ಪೊಲೀಸ್ ಇಲಾಖೆಯ ಸಿಬ್ಬಂದಿಗಳಾದ ಗಂಗಪ್ಪ, ಸುನೀಲ್, ಸಂದೀಪ್, ತೀರ್ಥೇಶ, ರಂಜಿತ್‌ಕುಮಾರ್, ಅವಿನಾಶ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Leave A Reply

Your email address will not be published.

error: Content is protected !!