Categories: Shivamogga

ಹೊಸನಗರ ಮತ್ತು ಭದ್ರಾವತಿ ತಾಲೂಕಿನ ಈ ಶಾಲೆಗಳಿಗೆ ಫೆ. 25 ರಂದು ರಜೆ ; ಯಾಕೆ ಗೊತ್ತಾ ?

ಶಿವಮೊಗ್ಗ: ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾ.ಪಂ ಸದಸ್ಯರ ಸ್ಥಾನಗಳಿಗೆ ಫೆ.25 ರಂದು ಚುನಾವಣೆ ನಡೆಯಲಿದೆ.

ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಉಪ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗದ ಆದೇಶದಂತೆ ಫೆ. 25 ರಂದು ಚುನಾವಣೆ ನಡೆಸಲು ವೇಳಾಪಟ್ಟಿಯನ್ನು ಹೊರಡಿಸಿರುತ್ತಾರೆ.
ಫೆ. 24 ರಂದು ಅಪರಾಹ್ನ ಮತಗಟ್ಟೆ ಅಧಿಕಾರಿ/
ಸಿಬ್ಬಂದಿಗಳು ನಿಗದಿಪಡಿಸಿದ ಮತಗಟ್ಟೆಗಳಿಗೆ ಆಗಮಿಸಿ ಮತದಾನದ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವರು.
ಮತದಾನ ಕೇಂದ್ರವಿರುವ ಬಹುತೇಕ ಕಟ್ಟಡಗಳು ಶಾಲೆಗಳಿದ್ದು, ಮತದಾನದ ಸಮಯದಲ್ಲಿ ಶಾಲಾ ವಿದ್ಯಾರ್ಥಿಗಳು ಆಗಮಿಸುವುದರಿಂದ ಈ ವೇಳೆಯಲ್ಲಿ ಜನದಟ್ಟನೆಯಾಗಿ ಮತದಾನದ ಪ್ರಕ್ರಿಯೆ ಮೇಲೆ ವ್ಯತಿರಿಕ್ತ ಪರಿಣಾಮದ ಸಂಭವವಿರುವುದರಿಂದ ಈ ಪ್ರಯುಕ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮವಾಗಿ ನಡೆಸಲು ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಯ ಈ ಕೆಳಕಂಡ ಮತದಾನ ಕೇಂದ್ರವಿರುವ ಶಾಲೆಗಳಿಗೆ ಫೆ.25 ರ ಶನಿವಾರ ರಜೆ ಘೋಷಿಸಿ ಆದೇಶಿಸಲಾಗಿದೆ‌ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯು ಪ್ರಕಟಣೆಯಲ್ಲಿ ತಿಳಿಸಿದೆ‌.

ಮತದಾನ ಕೇಂದ್ರವಿರುವ ಶಾಲೆ ಹೆಸರು :

  • ಹೊಸನಗರ ತಾಲೂಕಿನ ಕೋಟೆಶಿರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ.
  • ಹೊಸನಗರ ತಾಲೂಕಿನ ಹೆಬ್ಬಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ.
  • ಹೊಸನಗರ ತಾಲೂಕಿನ ತಳಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ.
  • ಭದ್ರಾವತಿ ತಾಲೂಕಿನ ಚಂದನಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ.
Malnad Times

Recent Posts

ಆನೆ ದಾಳಿಯಿಂದ ಮೃತಪಟ್ಟ ರೈತನ ಕುಟುಂಬಕ್ಕೆ ತಕ್ಷಣ ₹ 15 ಲಕ್ಷ ಪರಿಹಾರ ನೀಡಿ ; ಹರತಾಳು ಹಾಲಪ್ಪ ಆಗ್ರಹ

ಹೊಸನಗರ: ಶುಕ್ರವಾರ ಬೆಳಿಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ ರೈತ ತಿಮ್ಮಪ್ಪ ಎಂಬ ವ್ಯಕ್ತಿಯ ಮೇಲೆ ಆನೆ ದಾಳಿ ಮಾಡಿದ್ದು…

31 mins ago

ಶಿವಮೊಗ್ಗ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಪರ ರೋಡ್ ಷೋ | ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ ; ಪ್ರದೀಪ್ ಈಶ್ವರ್

ಶಿವಮೊಗ್ಗ: ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ…

59 mins ago

ಬಂಗಾರಪ್ಪರ ಋಣ ತೀರಿಸಲು ಗೀತಾಗೆ ಮತ ನೀಡಿ ; ಮಧು ಬಂಗಾರಪ್ಪ

ಸೊರಬ : ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಬಡವರ ಪರವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅವರ ಋಣವನ್ನು…

4 hours ago

ನೈರುತ್ಯ ಶಿಕ್ಷಕರ, ನೈರುತ್ಯ ಪದವೀಧರರ ಕ್ಷೇತ್ರಗಳಿಗೆ ಜೂ. 03 ರಂದು ಚುನಾವಣೆ | ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಲು ಮೇ 6 ಕಡೆಯ ದಿನ

ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…

16 hours ago

ಆನೆ ದಾಳಿಯಿಂದ ಮೃತನಾದ ರೈತನ ಕುಟುಂಬಕ್ಕೆ 24 ಗಂಟೆಯೊಳಗೆ ಪರಿಹಾರ ನೀಡದಿದ್ದಲ್ಲಿ ಸರ್ಕಾರಕ್ಕೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಹಾಲಪ್ಪ

ರಿಪ್ಪನ್‌ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…

17 hours ago

Arecanut Today Price | ಮೇ 03ರ ಅಡಿಕೆ ರೇಟ್

ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

17 hours ago