ಹೊಸನಗರ : 18 ವರ್ಷದ ಯುವತಿಗೆ ಕೆಎಫ್ಡಿ (ಮಂಗನ ಕಾಯಿಲೆ) ಪಾಸಿಟಿವ್ ಬಂದಿದ್ದು ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಅರಮನೆಕೊಪ್ಪದ ಗ್ರಾಮದ ವ್ಯಾಪ್ತಿಯ ಯುವತಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು ಕೆಎಫ್ಡಿ ಟೆಸ್ಟ್ ಮಾಡಲಾಗಿತ್ತು. ಮೊದಲ ಟೆಸ್ಟ್ನಲ್ಲಿ ನೆಗೆಟಿವ್, ಎರಡನೇ ಬಾರಿ ಆರ್ಟಿಸಿಪಿಆರ್ ಟೆಸ್ಟ್ ಮಾಡಿದಾಗ ಪಾಸಿಟಿವ್ ಬಂದಿದೆ.
ಮೂರು ದಿನಗಳ ಕಾಲ ಮೆಗ್ಗಾನ್ ಆಸ್ಪತ್ರೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದ್ದು ಶುಕ್ರವಾರ ಸಂಜೆ ಉಡುಪಿಯ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೊಸನಗರ ತಾಲೂಕಿನಲ್ಲಿ ಈ ವರ್ಷದ ಮೊದಲ ಪ್ರಕರಣ ಇದಾಗಿದ್ದು, ಅರಮನೆಕೊಪ್ಪ ವ್ಯಾಪ್ತಿಯಲ್ಲಿ ಈ ಹಿಂದೆ ಕೆಎಫ್ಡಿ ಪ್ರಕರಣಗಳು ವರದಿಯಾಗಿಲ್ಲ. ಈ ಬಾರಿ ಶರಾವತಿ ಹಿನ್ನೀರು ತಗ್ಗಿದ ಹಿನ್ನೆಲೆ ಪ್ರಾಣಿಗಳ ಮೂಲಕ ವೈರಸ್ಗಳು ವರ್ಗಾವಣೆಯಾಗಿರಬಹುದು ಎನ್ನಲಾಗಿದೆ.
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…