Categories: HosanagaraShivamogga

ಹೊಸನಗರ ; ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಂದ ಪ್ರತಿಭಟನೆ


ಹೊಸನಗರ: ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಗೌರವಧನ ಹಾಗೂ ರಾಜ್ಯ ಸರ್ಕಾರದ 6ನೇ ಗ್ಯಾರಂಟಿಯನ್ನು ಸರ್ಕಾರ ತಕ್ಷಣ ಜಾರಿಗೊಳಿಸುವಂತೆ ಆಗ್ರಹಿಸಿ ಗುರುವಾರ ರಾಜ್ಯ ಸಂಚಾಲಕ ಎನ್ ರವೀಂದ್ರ ಸಾಗರ್‌ರವರ ನೇತೃತ್ವದಲ್ಲಿ ಎಐಟಿಯುಸಿ ವತಿಯಿಂದ ಹೊಸನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಸಿಡಿಪಿಓ ಕಛೇರಿಯ ಮೇಲ್ವಿಚಾರಕಿ ವನಮಾಲ ಹಾಗೂ ರಾಜುರವರಿಗೆ ಮತ್ತು ತಹಶಿಲ್ದಾರ್ ರಾಕೇಶ್ ಬ್ರಿಟ್ಟೋ ರವರಿಗೆ ಮನವಿ ಸಲ್ಲಿಸಿದರು.


ನಂತರ ಮಾತನಾಡಿದ ರಾಜ್ಯ ಸಂಚಾಲಕ ರವೀಂದ್ರ ಸಾಗರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಾಡಿ ಕಳೆದ 48 ವರ್ಷಗಳಿಂದ ಶೂನ್ಯದಿಂದ 6 ವರ್ಷ ವಯೋಮಾನದ ಮಕ್ಕಳಿಗಾಗಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಮೂಲಕ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಆರೋಗ್ಯ ಲಾಲನೆ-ಪಾಲನೆ ಪೌಷ್ಠಿಕ ಆಹಾರ ಶಾಲಾ ಪೂರ್ವ ಶಿಕ್ಷಣ ಇತ್ಯಾದಿ ಸೇವೆಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಅದರೆ, ಇದೀಗ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಎಲ್ಲಿ ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆಯೊ ಅದೇ ಪ್ರದೇಶಗಳಲ್ಲಿ ಶಿಶುಪಾಲಾನ ಕೇಂದ್ರಗಳನ್ನು ಶಾಲಾ ಪೂರ್ವ ತರಗತಿಗಳನ್ನು ಪ್ರಾರಂಭಿಸಲು ಮುಂದಾಗಿರುವುದು ದುರದೃಷ್ಟಕರ. ಅಂಗನವಾಡಿ ಕೇಂದ್ರಗಳ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಈಗಾಗಲೇ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಆಶ್ರಯದಲ್ಲಿ ಶಿಶುಪಾಲನ ಕೆಂದ್ರಗಳನ್ನು ಪ್ರಾರಂಭಿಸಲಾಗುತ್ತಿದೆ ಹಾಗೇಯೇ ಸಮಗ್ರ ಶಿಕ್ಷಣ-ಕರ್ನಾಟಕವು ಸರ್ಕಾರಿ ಶಾಲೆಗಳಲ್ಲಿ 4ರಿಂದ 5 ವರ್ಷದ ವಯೋಮಾನದ ಮಕ್ಕಳಿಗಾಗಿ ಶಾಲಾ ಪೂರ್ವ ತರಗತಿಗಳನ್ನು ಪ್ರಾರಂಭಿಸಲು ಆದೇಶ ನೀಡಲಾಗಿದ್ದು ಎಲ್‌ಕೆಜಿ ಯುಕೆಜಿ ತರಗತಿಗಳನ್ನು ಆರಂಭಿಸಲಾಗುತ್ತಿದೆ ಅದೇ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನರೇಗಾ ಯೋಜನೆಯಡಿ ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿ ಶಿಶುಪಾಲನ ಕೇಂದ್ರಗಳನ್ನು ಪ್ರಾರಂಭಿಸಲು ಸಿದ್ದತೆಗಳನ್ನು ಭರದಿಂದ ನಡೆಸಲಾಗಿದೆ ಈ ಬಗ್ಗೆ ಆಯಾ ಇಲಾಖೆಗಳು ಸುತ್ತೋಲೆಗಳನ್ನು ಹೊರಡಿಸಿರುವುದು ಅಂಗನವಾಡಿ ಕಾರ್ಯಕರ್ತೆಯರು ನಿರ್ವಹಿಸುವ ಕಾರ್ಯಗಳು ಪರ್ಯಾಯವಾಗಿ ಮಾರ್ಪಟ್ಟು ಅಂಗನವಾಡಿಗಳನ್ನು ಮುಚ್ಚುವ ಸಂಚು ನಡೆಸಲಾಗುತ್ತದೆ ಎಂದರು.


6ನೇ ಗ್ಯಾರಂಟಿ ಜಾರಿ ಮಾಡಿ:

ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರಿಗೆ 15 ಸಾವಿರ ಹಾಗೂ ಸಹಾಯಕಿಯರಿಗೆ 10 ಸಾವಿರ ಸಹಾಯಧನ ಹೆಚ್ಚಿಸುವ ಬಗ್ಗೆ ಭರವಸೆ ನೀಡಿತ್ತು. ರಾಜ್ಯ ಸರ್ಕಾರ ತಮ್ಮ 6ನೇ ಗ್ಯಾರಂಟಿಯಲ್ಲಿ ಘೋಷಿಸಿದ ಧನ ಸಹಾಯ ಜಾರಿ ಮಾಡಬೇಕು ಹಾಗೂ ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ಸಹಾಯಕಿಯರಿಗೆ ಗ್ರಾಚ್ಯುಟಿ ಪಡೆಯಲು ಅರ್ಹರಾಗಿದ್ದು ನಿವೃತ್ತಿ ವೇತನ ಜಾರಿಗೊಳಿಸಬೇಕೆಂದು ಹತ್ತು ಹಲವು ಬೇಡಿಕೆಗಳಿದ್ದು ಅವುಗಳನ್ನು ಸರ್ಕಾರ ತಕ್ಷಣ ಜಾರಿ ಮಾಡಬೇಕೆಂದರು.


ಈ ಪ್ರತಿಭಟನೆಯಲ್ಲಿ ತಾಲ್ಲೂಕು ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಶಶಿಕಲಾ, ಕಾರ್ಯದರ್ಶಿ ಗೀತಾ, ಖಜಾಂಚಿ ಉಮಾ, ಪ್ರಧಾನ ಕಾರ್ಯದರ್ಶಿ ಲೀಲಾವತಿ, ಗೀತಾ, ಜಯಮ್ಮ, ಶರ್ಮಿಳ, ನಾಗರತ್ನ, ಬಿ.ಬಿ.ತಾರಾ, ಟಿ.ಆರ್ ಸುಜಾತಾ, ಸುಮತಿ, ಇನ್ನೂ ಮುಂತಾದವರು ಭಾಗವಹಿಸಿದ್ದರು.

Malnad Times

Recent Posts

ಗೀತಕ್ಕ ಗೆಲುವು ಕ್ಷೇತ್ರದ ಸ್ವಾಭಿಮಾನದ ಪ್ರಶ್ನೆ, ಪ್ರಚಾರ ಸಭೆಯಲ್ಲಿ ನಟ ದುನಿಯಾ ವಿಜಯ್ ಹೇಳಿಕೆ

ಸಾಗರ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು…

55 mins ago

Election Boycott |  ಮೂಲಭೂತ ಸೌಲಭ್ಯದ ಕೊರತೆ, ಹೊಸನಗರ ತಾಲೂಕಿನ ಮತ್ತೊಂದು ಗ್ರಾಮದಲ್ಲಿ ಕೇಳಿಬಂದ ಚುನಾವಣೆ ಬಹಿಷ್ಕಾರದ ಕೂಗು !

ಹೊಸನಗರ : ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಈಚಲುಕೊಪ್ಪ ಗ್ರಾಮದಲ್ಲಿ ಮೂಲಭೂತ ಸೌಲಭ್ಯದ ಕೊರತೆಯಿಂದ ಚುನಾವಣೆ ಬಹಿಷ್ಕಾರದ ಕೂಗು ಕೇಳಿ ಬಂದಿದೆ.…

1 hour ago

Rain Alert | ಇಂದು ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದ ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಕೆಲವೆಡೆ ಇಂದು ಹಗುರ ಮಳೆಯಾಗುವ…

7 hours ago

ಗೀತಾ ಶಿವರಾಜ್‌ಕುಮಾರ್ ರವರಿಗೆ ಒಂದು ಅವಕಾಶ ಕೊಡಿ ; ಸಾ.ರಾ. ಗೋವಿಂದು

ಶಿವಮೊಗ್ಗ: ಗೀತಾ ಶಿವರಾಜ್‌ಕುಮಾರ್ ಅವರಿಗೆ ಒಂದು ಅವಕಾಶವನ್ನು ನೀಡಬೇಕು ಎಂದು ಡಾ. ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಹಾಗೂ ಕರ್ನಾಟಕ…

17 hours ago

ಗೀತಾ ಗ್ರಾ.ಪಂ. ಚುನಾವಣೆ ಕೂಡ ಗೆಲ್ಲಲ್ಲ ; ಕುಮಾರ್ ಬಂಗಾರಪ್ಪ

ಶಿವಮೊಗ್ಗ : ಬಿ.ವೈ.ರಾಘವೇಂದ್ರ ಅವರು ಸುಮಾರು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ…

19 hours ago

ಮೇ 07 ರಂದು ಮತ ಚಲಾಯಿಸಲು ವೇತನ ಸಹಿತ ರಜೆ

ಶಿವಮೊಗ್ಗ : ಭಾರತ ಚುನಾವಣಾ ಆಯೋಗವು ಕರ್ನಾಟಕದಲ್ಲಿ 02 ಹಂತಗಳಲ್ಲಿ ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ಶಿವಮೊಗ್ಗ ಜಿಲ್ಲಾದ್ಯಂತ ಮೇ 07…

20 hours ago