ಹೊಸನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ನಾಳೆ ಸ್ವಯಂ ಪ್ರೇರಿತ ರಕ್ತದಾನ ಮತ್ತು ರಕ್ತ ಗುಂಪುಗಳ ಪರಿಶೀಲನಾ ಶಿಬಿರ

0 268

ಹೊಸನಗರ: ಇಲ್ಲಿನ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಜ.26ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ರಾಜ್ಯ ಸರ್ಕಾರಿ ನೌಕರರ ಸಂಘ, ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್, ಜೇಸಿಐ ಹೊಸನಗರ, ಕೊಡಚಾದ್ರಿ ವರ್ತಕರ ಸಂಘ, ಸಾರ್ವಜನಿಕ ಆಸ್ಪತ್ರೆ ಹಾಗೂ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಹೊಸನಗರ ಇವರ ಸಂಯುಕ್ತಾಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಹಾಗೂ ರಕ್ತಗುಂಪುಗಳ ಪರಿಶೀಲನಾ ಶಿಬಿರವನ್ನು ಏರ್ಪಡಿಸಲಾಗಿದೆ.

ಈ ಶಿಬಿರದಲ್ಲಿ ಪುರುಷರು ಮತ್ತು ಮಹಿಳೆಯರು 18 ವರ್ಷ ಮೇಲ್ಪಟ್ಟುವರು 50 ಕೆ.ಜಿ ಗಿಂತ ಹೆಚ್ಚಿನ ತೂಕ ಹೊಂದರಿರುವವರು ಆರೋಗ್ಯವಂತ ವ್ಯಕ್ತಿ ಸುರಕ್ಷಿತವಾಗಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದಾಗಿದ್ದು ಪ್ರತಿಯೊಬ್ಬರು ರಕ್ತದಾನ ಮಾಡಿ ಇನ್ನೊಂದು ಜೀವವನ್ನು ರಕ್ಷಿಸಬೇಕೆಂದು ಬಿ.ಎಸ್. ಸುರೇಶ್‌ರವರು ಕೇಳಿಕೊಂಡಿದ್ದಾರೆ.

Leave A Reply

Your email address will not be published.

error: Content is protected !!