03 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪ್ರಾಪ್ತ ಬಾಲಕನಿಗೆ 07 ವರ್ಷ ಕಠಿಣ ಜೈಲು ಶಿಕ್ಷೆ !

0 421

ಶಿವಮೊಗ್ಗ : 03 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪ್ರಾಪ್ತ ಬಾಲಕನಿಗೆ ದಂಡದ ಜೊತೆಗೆ 07 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ.

ಘಟನಾ ವಿವರ ;
2021ನೇ ಸಾಲಿನಲ್ಲಿ ಶಿಕಾರಿಪುರ ತಾಲ್ಲೂಕಿನ 17 ವರ್ಷದ ಬಾಲಕನು 3 ವರ್ಷದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆಂದು ನೊಂದ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದಲ್ಲಿ ಆಗಿನ ತನಿಖಾಧಿಕಾರಿಗಳಾದ ಲಕ್ಷ್ಮಣ್ ಜೆ, ಪೊಲೀಸ್ ನಿರೀಕ್ಷಕರು ಶಿಕಾರಿಪುರ ಗ್ರಾಮಾಂತರ ಠಾಣೆ ರವರು ಕಾನೂನು ಸಂಘರ್ಷಕ್ಕೊಳಗಾದ ಬಾಲಕನ ವಿರುದ್ಧ ನ್ಯಾಯಾಲಯಕ್ಕೆ ಅಂತಿಮ ವರದಿಯನ್ನು ಸಲ್ಲಿಸಿದ್ದರು .

ಪ್ರಕರಣದಲ್ಲಿ ಸರ್ಕಾರದ ಪರವಾಗಿ ಹರಿಪ್ರಸಾದ್ ಮತ್ತು ಮಮತ ಸರ್ಕಾರಿ ಅಭಿಯೋಜಕರವರು ವಾದ ಮಂಡಿಸಿದ್ದು, ಶಿವಮೊಗ್ಗದ FTSC-1 ನ್ಯಾಯಲಯದಲ್ಲಿ ಪ್ರಕರಣದ ವಿಚಾರಣೆ ನಡೆದು, ಕಾನೂನು ಸಂಘರ್ಷಕ್ಕೊಳಗಾದ ಬಾಲಕನ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ,‌ ನ್ಯಾಯಾಧಿಶರಾದ ಲತಾ ರವರು ದಿನಾಂಕಃ 09-11-2023 ರಂದು ಕಾನೂನು ಸಂಘರ್ಷಕ್ಕೊಳಗಾದ ಬಾಲಕನಿಗೆ 07 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂ ದಂಡ, ದಂಡ ಕಟ್ಟಲು ವಿಫಲನಾದಲ್ಲಿ ಹೆಚ್ಚುವರಿ 1 ತಿಂಗಳು ಸಾದಾ ಜೈಲು ಶಿಕ್ಷೆ ವಿಧಿಸಿ ಆದೇಶಿದ್ದಾರೆ.

Leave A Reply

Your email address will not be published.

error: Content is protected !!