Categories: Shivamogga

10 ವರ್ಷಗಳಲ್ಲಿ ರೈಲ್ವೆ ಇಲಾಖೆ ಐತಿಹಾಸಿಕ ಅಭಿವೃಧ್ಧಿ ಕಂಡಿದೆ ; ಸಂಸದ ಬಿ.ವೈ. ರಾಘವೇಂದ್ರ

ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರವನ್ನು ವಹಿಸಕೊಂಡ ನಂತರ ದೇಶದಲ್ಲಿಯೇ ರೈಲ್ವೆ ಇಲಾಖೆ ಐಸಿಹಾಸಿಕ ಬದಲಾವಣೆ ಕಂಡು, ಸಮಗ್ರ ಅಭಿವೃದ್ದಿಯಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಶಿವಮೊಗ್ಗ ನಗರದ ರೈಲ್ವೆ ನಿಲ್ದಾಣದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುಯಲ್ ವೇದಿಕೆ ಮೂಲಕ ನೈಋತ್ಯ ರೈಲ್ವೆಯ 1192.86 ಕೋಟಿ ರೂ. ಮೌಲ್ಯದ ವಿವಿಧ ರೈಲ್ವೆ ಯೋಜನೆಗಳ ಅಮೃತ್ ಮಿಷನ್ ಯೋಜನೆ ಅಡಿ 554 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ ಮತ್ತು 1500 ರಸ್ತೆಗಳ ಮೇಲ್ಸೇತುವೆಗಳ ಅಂಡರ್ ಪಾಸ್‍ಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರೈಲ್ವೇ ಅಮೃತ ಮಹೋತ್ಸವದ ಪ್ರಯುಕ್ತ ಕೇಂದ್ರ ಸರ್ಕಾರದ ಅಮೃತ್ ಭಾರತ್ ಸ್ಟೇಷನ್ ಸ್ಟೀಮ್ -2 ರ ಅಡಿಯಲ್ಲಿ ನೈರುತ್ಯ ರೈಲ್ವೆ ಮೂಲಕ ರಾಜ್ಯದಲ್ಲಿ 28 ನಿಲ್ದಾಣಗಳನ್ನು ನವೀಕರಿಸಲು ಮತ್ತು ಆಧುನೀಕರಿಸಲು ಯೋಚಿಸಲಾಗಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಎಲ್ಲಾ ಯೋಜನೆಗಳಿಗೆ ವರ್ಚಯಲ್ ವೇದಿಕೆ ಮೂಲಕ ದೆಹಲಿಯಿಂದ ಚಾಲನೆ ನೀಡಿದ್ದಾರೆ.

ಈ ಯೋಜನೆ ಮುಖ್ಯ ಉದ್ದೇಶ ರೈಲು ನಿಲ್ದಾಣಗಳನ್ನು ಅತ್ಯಾಧುನಿಕ ತಂತ್ರಜ್ಞಾನ, ಆರೋಗ್ಯ ಕೇಂದ್ರ, ಹಿರಿಯರಿಗೆ ಅನುಕೂಲ, ವ್ಯಾಪಾರ ವಹಿವಾಟು ಸೇರಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದಾಗಿದೆ. ರೈಲು ನಿಲ್ದಾಣಗಳನ್ನು ಸುಂದರಗೊಳಿಸುವುದರ ಮೂಲಕ ದೇಶಕ್ಕೆ ಹೆಚ್ಚಿನ ಮೆರಗು ನೀಡಲಾಗುತ್ತದೆ. ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ 10 ವರ್ಷಗಳಲ್ಲಿ ಆಗಿರುವ ಅಭಿವೃದ್ಧಿ ಸ್ವತಂತ್ರ ಭಾರತದಲ್ಲಿ ಈವರೆಗೂ ಆಗಿರುವುದಿಲ್ಲ. ನಾವು ಹೊರ ದೇಶದ ಅಭಿವೃದ್ಧಿಯನ್ನು ಹೊಗಳುತ್ತಿದ್ದ ಕಾಲ ಹಿಂದೆ ಇತ್ತು. ಆದರೆ ಈಗ ಪರಿಸ್ಥತಿ ಬದಲಾಗಿದೆ. ಭಾರತದಲ್ಲಿ ಈಗಾಗಲೇ 68 ವಂದೇ ಭಾರತ್ ರೈಲುಗಳು ಆರಂಭವಾಗಿದ್ದು ಇಡೀ ಜಗತ್ತು ಭಾರತದತ್ತ ತಿರುಗಿ ನೋಡುವಂತಾಗಿದೆ. ಇದು ಸ್ವದೇಶಿ ನಿರ್ಮಿತ ಎಂಬುದು ನಮ್ಮ ದೇಶದ ಹೆಮ್ಮೆ.

ಶಿವಮೊಗ್ಗ ರೈಲ್ವೆ ನಿಲ್ದಾಣ ಕೂಡ ಈ ಯೋಜನೆಯಲ್ಲಿ ಸೇರಿಕೊಂಡಿರುವುದು ನಮ್ಮೆಲ್ಲರ ಸೌಭಾಗ್ಯವಾಗಿದೆ. ನಮ್ಮ ಶಿವಮೊಗ್ಗದ ರೈಲ್ವೆ ನಿಲ್ದಾಣದಲ್ಲಿ ಪ್ರತಿ ನಿತ್ಯ 15 ರಿಂದ 18 ಸಾವಿರ ಜನರು ಪ್ರಯಾಣವನ್ನು ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಶಿವಮೊಗ್ಗದಿಂದಲೂ ವಂದೇ ಭಾರತ್ ರೈಲು ಆರಂಭಿಸಲಾಗುವುದು. ಪಕ್ಕದ ಭದ್ರಾವತಿಯ ರೈಲ್ವೆ ನಿಲ್ದಾಣವನ್ನು ಕೂಡ ಮುಂದಿನ ಹಂತದಲ್ಲಿ ಈ ಯೋಜನೆಗೆ ಜೋಡಿಸಲಾಗುವುದು. ಪ್ರಸ್ತುತ ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ಕೇಂದ್ರ ಸರ್ಕಾರ ರೂ. 24.37 ಕೋಟಿಯನ್ನು ನೀಡಿದ್ದು ಸಾಗರ ರೈಲು ನಿಲ್ದಾಣಕ್ಕೆ ರೂ. 26.44 ಕೋಟಿ ಹಾಗೂ ತಾಳಗುಪ್ಪ ರೂ. 27.86 ಕೋಟಿ ಅನುದಾನವನ್ನು ನೀಡಲಾಗಿದೆ. ಮುಂದಿನ ದಿನಗಳಲ್ಲಿ ಗ್ರಾಮೀಣ ಪ್ರದೇಶದ ಆನಂದಪುರ,ಕುಂಸಿ ರೈಲ್ವೆ ನಿಲ್ದಾಣಗಳನ್ನು ಅಭಿವೃದ್ಧಿ ಪಡಿಸಲಾವುದು ಎಂದರು.

ಈ ಸಂದರ್ಭದಲ್ಲಿ ರೈಲ್ವೆ ಇಲಾಖೆಯ ಎಡಿಎಂ ವಿನಾಯಕ್ ನಾಯ್ಕ್, ಎಡಿಆರ್ ಎಂ ಮಹೇಶ್ ನಾಗರಾಜ್, ಇಂಜಿನಿಯರ್ ಮೊಹನ್ ರಾವ್ ಸಿ, ಮೂರ್ತಿ, ಯಶೋಧ, ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Malnad Times

Recent Posts

Rain Alert | ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…

6 days ago

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

7 days ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

7 days ago

ಮತದಾನಕ್ಕೆ ಕೌಂಟ್‌ಡೌನ್ | ಮತಗಟ್ಟೆಗಳಿಗೆ ಮತಯಂತ್ರ ಇತರ ಪರಿಕರಗಳೊಂದಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…

7 days ago

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 week ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

1 week ago