Categories: Shivamogga

11 ತಿಂಗಳ ಮಗುವಿನ ಗಂಟಲಲ್ಲಿ ಸಿಲುಕಿದ ಇಡೀ ಮೀನು ! ಪ್ರಾಣ ಉಳಿಸಿದ ಸರ್ಜಿ ಆಸ್ಪತ್ರೆಯ ವೈದ್ಯರು

ಶಿವಮೊಗ್ಗ : ಮೀನು ನುಂಗಿ ಉಸಿರಾಟದ ತೊಂದರೆ ಅನುಭವಿಸಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ 11 ತಿಂಗಳ ಮಗುವನ್ನು ಶಿವಮೊಗ್ಗ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯರು ಜೀವಾಪಾಯದಿಂದ ಪಾರು ಮಾಡಿದ್ದಾರೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕು ನ್ಯಾಮತಿ ಹತ್ತಿರದ ಗಂಜೇನಹಳ್ಳಿಯ ಯೋಗೀಶ್‌ ಮತ್ತು ರೋಜಾ ದಂಪತಿಯ 11 ತಿಂಗಳ ಮಗು ಪ್ರತೀಕ್‌ ಮನೆಯೊಳಗೆ ಆಟವಾಡುತ್ತಿದ್ದಾಗ ಮೀನನ್ನು ನುಂಗಿ ಬಿಟ್ಟಿದೆ. ಇದನ್ನು ಗಮನಿಸಿದ ಪೋಷಕರು ತಕ್ಷಣವೇ ಮೀನನ್ನು ಹೊರ ತೆಗೆಯಲು ಪ್ರಯತ್ನ ನಡೆಸಿದ್ದರಾದರೂ ಯಶಸ್ವಿ ಆಗಿರಲಿಲ್ಲ, ಅಷ್ಟೊತ್ತಿಗಾಗಲೇ ಮಗುವಿನ ಸ್ಥಿತಿಯು ಗಂಭೀರವಾಗಿತ್ತು. ಬಳಿಕ ಪೋಷಕರು ಮಗುವನ್ನು ಸರ್ಜಿ ಆಸ್ಪತ್ರೆಗೆ ಕರೆ ತಂದಿದ್ದರು. ಕೂಡಲೇ ತಪಾಸಣೆ ನಡೆಸಿದ ತಜ್ಞ ವೈದ್ಯರು ತೀವ್ರ ನಿಗಾಘಟಕದಲ್ಲಿರಿಸಿ, ಗಂಟಲಲ್ಲಿ ಸಿಕ್ಕಿಕೊಂಡಿದ್ದ 11.3 ಸೆಂ.ಮೀ. ಉದ್ದದ ಮೀನನ್ನು ಹೊರ ತೆಗೆದು ಮಗುವಿನ ಜೀವವನ್ನು ಉಳಿಸಿದ್ದಾರೆ. ಇದೊಂದು ಅಪರೂಪದ ಪ್ರಕರಣವಾಗಿದೆ. ಈ ಪ್ರಕರಣದಲ್ಲಿ ಮಗುವಿಗೆ ಮಕ್ಕಳ ತಜ್ಞ ವೈದ್ಯ ಡಾ.ಪ್ರದೀಪ್‌ ಚಿಕಿತ್ಸೆ ಅವರು ನೀಡಿದ್ದು, ಮಗು ಪ್ರಾಣಾಪಾಯದಿಂದ ಪಾರಾಗಿದೆ.

ಚಿಕ್ಕಮಕ್ಕಳು ಈ ರೀತಿ ಆಹಾರ ಪದಾರ್ಥ, ಇಲ್ಲವೇ ಚಾಕೋಲೇಟ್‌, ಕಾಡಿಗೆ ಡಬ್ಬಿ, ಅಡಿಕೆ, ಗೋಲಿ, ಗಜಗ, ಶೇಂಗಾ ಬೀಜದಂತಹ ವಸ್ತುಗಳನ್ನು ಗಂಟಲಲ್ಲಿ ಸಿಕ್ಕಿಸಿಕೊಂಡು ಪ್ರಾಣಕ್ಕೆ ಎರವಾದಂತಹ ಘಟನೆಗಳು ಈ ಹಿಂದೆ ನಡೆದಿದ್ದವು. ಪೋಷಕರು ಚಿಕ್ಕಮಕ್ಕಳ ಕೈಗೆ ಯಾವುದೇ ಘನ ವಸ್ತುಗಳನ್ನು ಸಿಗದಂತೆ ಇಡಬೇಕು ಎಂದು ತೀವ್ರ ನಿಗಾ ಘಟಕ ಹಾಗೂ ಶಸ್ತ್ರ ಚಿಕಿತ್ಸಾ ಘಟಕದ ತಜ್ಞ ವೈದ್ಯರಾದ ಡಾ.ವಿನೋದ್‌ ಸಲಹೆ ನೀಡಿದ್ದಾರೆ. ವೈದ್ಯರ ಸೇವೆಯನ್ನು ಸರ್ಜಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಧನಂಜಯ ಸರ್ಜಿ ಹಾಗೂ ಮೆಡಿಕಲ್‌ ಸೂಪರಿಂಟೆಂಡೆಂಟ್‌ ಡಾ.ಪ್ರಶಾಂತ್‌ ಅವರು ಶ್ಲಾಘಿಸಿದ್ದಾರೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago