15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ 25 ವರ್ಷದ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ !

0 1,045

ಹೊಸನಗರ : 15 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ 25 ವರ್ಷದ ಯುವಕನಿಗೆ ಶಿವಮೊಗ್ಗ ಫಾಸ್ಟ್‌ಟ್ರ್ಯಾಕ್ ಕೋರ್ಟ್ 20 ವರ್ಷ ಕಠಿಣ ಜೈಲು ಶಿಕ್ಷೆ ಜೊತೆಗೆ 50 ಸಾವಿರ ರೂ. ದಂಡ ವಿಧಿಸಿದೆ.

ಏನಿದು ಘಟನೆ ?

2022ರಲ್ಲಿ ಹೊಸನಗರ ತಾಲ್ಲೂಕಿನಲ್ಲಿ ಕೃತ್ಯ ನಡೆದಿತ್ತು. ಈ ಬಗ್ಗೆ ನೊಂದ ಬಾಲಕಿ ನೀಡಿದ್ದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಆಗಿನ ಹೊಸನಗರ ಠಾಣೆ ಸಿಪಿಐ ಬಿ.ಸಿ.ಗಿರೀಶ್‌ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿಸಲ್ಲಿಸಿದ್ದರು.

ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ವಕೀಲ ಹರಿಪ್ರಸಾದ್ ವಾದ ಮಂಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಲತಾ ಆರೋಪಿಗೆ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿ 4 ತಿಂಗಳು ಸಾದಾ ಜೈಲು ಶಿಕ್ಷೆ ವಿಧಿಸಿದ್ದಾರೆ.

Leave A Reply

Your email address will not be published.

error: Content is protected !!