ಹೊಸನಗರ : 15 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ 25 ವರ್ಷದ ಯುವಕನಿಗೆ ಶಿವಮೊಗ್ಗ ಫಾಸ್ಟ್ಟ್ರ್ಯಾಕ್ ಕೋರ್ಟ್ 20 ವರ್ಷ ಕಠಿಣ ಜೈಲು ಶಿಕ್ಷೆ ಜೊತೆಗೆ 50 ಸಾವಿರ ರೂ. ದಂಡ ವಿಧಿಸಿದೆ.
ಏನಿದು ಘಟನೆ ?
2022ರಲ್ಲಿ ಹೊಸನಗರ ತಾಲ್ಲೂಕಿನಲ್ಲಿ ಕೃತ್ಯ ನಡೆದಿತ್ತು. ಈ ಬಗ್ಗೆ ನೊಂದ ಬಾಲಕಿ ನೀಡಿದ್ದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಆಗಿನ ಹೊಸನಗರ ಠಾಣೆ ಸಿಪಿಐ ಬಿ.ಸಿ.ಗಿರೀಶ್ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿಸಲ್ಲಿಸಿದ್ದರು.
ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ವಕೀಲ ಹರಿಪ್ರಸಾದ್ ವಾದ ಮಂಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಲತಾ ಆರೋಪಿಗೆ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿ 4 ತಿಂಗಳು ಸಾದಾ ಜೈಲು ಶಿಕ್ಷೆ ವಿಧಿಸಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…