2 ಲಕ್ಷ ರೂ. ಮೌಲ್ಯದ ರೈಲ್ವೇ ಒಹೆಚ್‍ಇ ತಾಮ್ರದ ತಂತಿ ಕಳ್ಳತನ ; ಆರೋಪಿಗಳ ಬಂಧನ

ಸಾಗರ: ಆನಂದಪುರ ಬಳಿ ಸುಮಾರು 2 ಲಕ್ಷ ರೂ. ಮೌಲ್ಯದ ರೈಲ್ವೇ ಒಹೆಚ್‍ಇ ತಾಮ್ರದ ತಂತಿಯನ್ನು ಕಳವು ಮಾಡಿ ಮಾರಾಟ ಮಾಡಿದ್ದ 3 ಮಂದಿ ಆರೋಪಿಗಳು ಮತ್ತು ತಂತಿ ಖರೀದಿಸಿದ್ದ ಇಬ್ಬರು ಅಂಗಡಿ ಮಾಲೀಕರನ್ನು ಮೈಸೂರು ರೈಲ್ವೇ ರಕ್ಷಣಾ ವಿಶೇಷ ತಂಡ ಬಂಧಿಸಿದೆ.
 ಸೆ.13 ರಂದು ರಾತ್ರಿ ರೈಲ್ವೆ ರಕ್ಷಣಾ ಪಡೆಯ ವಿಶೇಷ ತಂಡ, ಮೈಸೂರು ಅಪರಾಧ ವಿಭಾಗದ ನಿರೀಕ್ಷಕ ಎಂ ನಿಶಾದ್ ನೇತೃತ್ವದಲ್ಲಿ ತಪ್ಪಿತಸ್ಥರನ್ನು ಬಂಧಿಸಲಾಗಿದೆ.

ಕಳ್ಳತನ ಮಾಡಲು ಬಳಸುತ್ತಿದ್ದ ಒಂದು ನಾಲ್ಕು ಚಕ್ರದ ವಾಹನ (ಟಾಟಾ ಏಸ್) ಮತ್ತು 1 ದ್ವಿಚಕ್ರ ವಾಹನ, ಕಟ್ಟರ್ ಮತ್ತು ಲ್ಯಾಡರ್ ಟ್ರಾಲಿ ಅಥವಾ ರೈಲ್ವೆ ವಿದ್ಯುದ್ದೀಕರಣ ಉಪಕರಣವನ್ನು ಸಹ ವಶಪಡಿಸಿಕೊಳ್ಳಲಾಗಿದೆ.
ಕುಂಸಿಗೆ ಸೇರಿದ ನೂರುಲ್ಲಾ ತಂದೆ ಬಾಬಾ ಜಾನ್, ಮಂಜು ತಂದೆ ಆನಂದಪ್ಪ ಮತ್ತು ಹರೀಶ ತಂದೆ ಮಂಜಪ್ಪ ಇವರನ್ನು ಬಂಧಿಸಲಾಗಿದೆ ಹಾಗೂ ಕಳ್ಳತನ ಮಾಡಲಾದ ತಾಮ್ರದ ತಂತಿ ಖರೀದಿಸಿದ್ದ ಶಿವಮೊಗ್ಗದ ಐಶ್ವರ್ಯ ಸ್ಟೀಲ್ಸ್ ಮಾಲೀಕ ನಾರಾಯಣ, ಸ್ವಸ್ತಿಕ್ ಸ್ಟೀಲ್ಸ್ ಮಾಲೀಕ ಜ್ಞಾನೇಶ್ವರ ಒಟ್ಟು 5 ಮಂದಿಯನ್ನು ಬಂಧಿಸಿ ಇವರಿಂದ ಸುಮಾರು 2 ಲಕ್ಷ ಮೌಲ್ಯದ 200 ಕೆ.ಜಿ ತಾಮ್ರದ ತಂತಿಗಳನ್ನು ಸೆ.14 ರಂದು ವಶಪಡಿಸಿಕೊಳ್ಳಲಾಗಿದೆ.

ಕಳ್ಳತನದ ಹಿನ್ನೆಲೆ
ಸೆ.06 ಮತ್ತು 07 ರಂದು ರಾತ್ರಿ ರೂ. 2 ಲಕ್ಷ ಮೌಲ್ಯದ ಸುಮಾರು 260 ಮೀಟರ್ ರೈಲ್ವೆ ಒಹೆಚ್‍ಇ ತಾಮ್ರದ ತಂತಿಯನ್ನು ಶಿವಮೊಗ್ಗದ ಸಾಗರ ಮತ್ತು ಆನಂದಪುರ ಮಧ್ಯದ ರೈಲು ನಿಲ್ದಾಣ ಕಿ. ಮೀ.ಸಂಖ್ಯೆ 120/800 ರ ಬಳಿ ಕಳ್ಳತನ ಮಾಡಲಾಗಿತ್ತು.
ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಶಿಲ್ಪಿ ಅಗರ್ವಾಲ್ ರವರ ಸೂಚನೆಯಂತೆ ಹುಬ್ಬಳ್ಳಿ ಮತ್ತು ಮೈಸೂರು ವಿಭಾಗೀಯ ರೈಲ್ವೆ ರಕ್ಷಣಾ ಆಯುಕ್ತರಾದ ಜೆ ಕೆ ಶರ್ಮಾ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಸ್ಥಳದಲ್ಲಿ ಲಭ್ಯವಿರುವ ಸಾಕ್ಷ್ಯಗಳನ್ನು ಪರಿಶೀಲನೆ ನಡೆಸಿದರು.
 ಸ್ಥಳೀಯ ಪೊಲೀಸ್ ಮತ್ತು ಆರ್‍ ಪಿಎಫ್‍ನ ಶ್ವಾನ ದಳವನ್ನು ಸೇವೆಗೆ ಕರೆ ತರತಂದು ಪ್ರಕರಣದ ಪತ್ತೆಗೆ ಮೈಸೂರು, ಬೆಂಗಳೂರು ಮತ್ತು ಹುಬ್ಬಳ್ಳಿಯ ಅಪರಾಧ ವಿಭಾಗದ ಸಿಬ್ಬಂದಿಗಳಾದ ಎಂ ನಿಶಾದ್, ಕ್ರೈಂ ಇನ್ಸ್‌ಪೆಕ್ಟರ್ ಮೈಸೂರು ಮತ್ತು ಶಿವಮೊಗ್ಗ ಇನ್ಸ್‌ಪೆಕ್ಟರ್ ಬಿ ಎನ್ ಕುಬೇರಪ್ಪ ಅವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಯಿತು.

ಈ ತಂಡ ದಿನಾಂಕ ಸೆ.07 ರಂದು ಶಂಕಿರನ್ನು ಗುರುತಿಸಿ, ಮೂಲ ಮಾಹಿತಿಯ ಆಧಾರದ ಮೇಲೆ ಮತ್ತು ಶಂಕಿತರ ಟವರ್ ಡಂಪ್ ಮತ್ತು ಕರೆ ದಾಖಲೆಗಳಿಗಾಗಿ ಅರ್ಜಿ ಸಲ್ಲಿಸಿ ಸೆ.12 ರಂದು, ಟವರ್ ಡಂಪ್ ಮತ್ತು ಕರೆ ದಾಖಲೆಗಳನ್ನು ಸ್ವೀಕರಿಸಿ ಶಂಕಿತರ ಗುರುತು ಪತ್ತೆ ಹಚ್ಚಿತು ಮತ್ತು ಅವರ ಚಲನ ವಲನಗಳ ಮೇಲೆ ನಿಗಾ ಇಡಲಾಯಿತು. ಸೆ. 13ರಂದು ವಿಶೇಷ ತಂಡವು ಆರೋಪಿಗಳ ವಿಳಾಸ, ಚಲನಗಳನ್ನು ಪತ್ತೆ ಮಾಡಿ, ಅವರನ್ನು ವಶಕ್ಕೆ ಪಡೆದು ಬಂಧಿಸಿತು.


ಈ ಎಲ್ಲಾ 5 ಬಂಧಿತ ಆರೋಪಿಗಳನ್ನು ಸಾಗರದ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ. ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ರೈಲ್ವೆ ಒಹೆಚ್‍ಇ ಕಳ್ಳರ ಗುಂಪನ್ನು ಸೆರೆ ಹಿಡಿದ ಆರ್. ಪಿ. ಎಫ್ ನ ವಿಶೇಷ ತಂಡದ ಕಾರ್ಯವನ್ನು ಶ್ಲಾಘಿಸಿದ್ದಾರೆ.
 ಈ ಪ್ರಕರಣವನ್ನು ಭೇದಿಸುವಲ್ಲಿ ಆರ್.ಪಿ.ಎಫ್ ನ ವಿಶೇಷ ತಂಡದಲ್ಲಿ ಎಸ್.ಐ ಗಳಾದ ಸಂತೋಷ ಗಾಂಕರ್, ಜ್ಯೋತಿ ಸ್ವರೂಪ್, ಎ.ಎಸ್.ಐ ಗಳಾದ ಎಂ.ಪಿ. ತಮ್ಮಯ್ಯ, ಅನ್ವರ್ ಸಾದಿಕ್, ಬಿ. ಆನಂದ್, ವಿ. ಸುರೇಶ,, ಶರಣಪ್ಪ, ಮತ್ತು ಮುಖ್ಯ ಪೇದೆಗಳಾದ ಎಚ್. ಆರ್. ರಮೇಶ್, ಸಿ. ಎ. ಕುಮಾರ್, ಡಿ. ಚೇತನ್, ಫಯಾಜ್ ಅಹ್ಮದ್, ವಿ. ಕುಮಾರ್ ಮತ್ತು ಪೇದೆಗಳಾದ  ಪ್ರವೀಣ್ ಕುಮಾರ್, ಪರಮೇಶ್ವರಪ್ಪ, ಏಳಂಗೋವನ್ ಈರೇಶಪ್ಪ, ಎಂ. ಪ್ರಕಾಶ್ ಮತ್ತು ರಾಘವೇಂದ್ರ ಇದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

18 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

22 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

22 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago