237 ಗ್ರಾಮ ಪಂಚಾಯಿತಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರ

0 271

ಶಿವಮೊಗ್ಗ: ರಾಜ್ಯ ಸರ್ಕಾರದಿಂದ 2022-23ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಮತ್ತು ವಿಶೇಷ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾದ ಗ್ರಾಮ ಪಂಚಾಯ್ತಿಗಳ ಪಟ್ಟಿಯನ್ನು ಪ್ರಕಟಿಸಿದೆ.

ಈ ಕುರಿತಂತೆ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯ್ತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪತ್ರ ಬರೆದು ತಿಳಿಸಿದ್ದಾರೆ.

ಅವರ ಪತ್ರದಲ್ಲಿ 2022-23ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಜಿಲ್ಲಾ ಮಟ್ಟದ ಗಾಂಧಿ ಗ್ರಾಮ ಪುರಸ್ಕಾರ ಸಮಿತಿಯಲ್ಲಿ ಆಯ್ಕೆ ಮಾಡಿ ದೃಢೀಕರಿಸಿ, ತಾವು ಸಲ್ಲಿಸಿರುವ ಆಯ್ಕೆ ಪಟ್ಟಿಯನ್ನು ದಿನಾಂಕ 25-09-2023ರಂದು ಸರ್ಕಾರದ ಪರ ಮುಖ್ಯ ಕಾರ್ಯದರ್ಶಿಗಳು, ಪಂಚಾಯತ್ ರಾಜ್ ಇಲಾಖೆ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ಪರಾಮರ್ಶೆ ಸಮಿತಿ ಸಭೆಯಲ್ಲಿ ಮಂಡಿಸಿ, ಆಯ್ಕೆಯನ್ನು ಅಂತಿಮಗೊಳಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.

ಇನ್ನೂ 2022-23ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಗೆ ಆಯ್ಕೆಯಾದ ಗ್ರಾಮ ಪಂಚಾಯ್ತಿಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ದಿನಾಂಕ 02-10-2023ರಂದು ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ದಿನಾಂಕ 02-10-2023ರಂದು ನಡೆಯುವ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯ್ತಿಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸಿ, ಪ್ರಶಸ್ತಿ ಸ್ವೀಕರಿಸಲು ಸೂಚಿಸಿದ್ದಾರೆ.

Leave A Reply

Your email address will not be published.

error: Content is protected !!