ಬೆಂಗಳೂರು : ಕರ್ನಾಟಕದಾದ್ಯಂತ ಯಶಸ್ವಿಯಾಗಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ.
ಇಂದು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಫಲಿತಾಂಶವನ್ನು ಬಿಡುಗಡೆ ಮಾಡಿದ್ದು, 7,26,195 ವಿದ್ಯಾರ್ಥಿಗಳ ಪೈಕಿ 5 ಲಕ್ಷದ 24 ಸಾವಿರ 209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ1,34,876 ಶ್ರ( ಶೇಕಡಾ 61.22ರಷ್ಟು) ವಿದ್ಯಾರ್ಥಿ ಪಾಸ್ ಆಗಿದ್ದರೆ, ವಾಣಿಜ್ಯ ವಿಭಾಗದಲ್ಲಿ 1,82,246 (ಶೇಕಡಾ 75.89ರಷ್ಟು) ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಇನ್ನು ವಿಜ್ಞಾನ ವಿಭಾಗದಲ್ಲಿ 2,07,087 (ಶೇಕಡಾ 85.71ರಷ್ಟು) ಪಾಸ್ ಆಗಿದ್ದಾರೆ. ದಕ್ಷಿಣ ಕನ್ನಡ 95.33ರಷ್ಟು ಫಲಿತಾಂಶದೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡಿದೆ.
ಯಾವ ಜಿಲ್ಲೆ ಫಸ್ಟ್? ಯಾವ ಜಿಲ್ಲೆ ಲಾಸ್ಟ್?
ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ(95.33ರಷ್ಟು ಫಲಿತಾಂಶ), ಉಡುಪಿ ಜಿಲ್ಲೆಗೆ 2ನೇ ಸ್ಥಾನ, ಕೊಡಗು ಜಿಲ್ಲೆಗೆ 3ನೇ ಸ್ಥಾನದಲ್ಲಿದ್ದರೆ, ಉತ್ತರ ಕನ್ನಡ ಜಿಲ್ಲೆ 4ನೇ, ವಿಜಯಪುರ 5ನೇ, ಚಿಕ್ಕಮಗಳೂರು 6ನೇ (83.28) ಮತ್ತು ಶಿವಮೊಗ್ಗ 8ನೇ (83.13) ಸ್ಥಾನ ಹಾಗೂ ಯಾದಗಿರಿ ಜಿಲ್ಲೆ ಕೊನೆ ಸ್ಥಾನದಲ್ಲಿದೆ.
ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಬೆಂಗಳೂರಿನ ಜಯನಗರ ಕಾಲೇಜಿನ ತಬಸ್ಸುಮ್ ಶೇಖ್ 600ಕ್ಕೆ 593 ಪ್ರಥಮ ಸ್ಥಾನ ಪಡೆದರೆ, ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ಅನನ್ಯ 600ಕ್ಕೆ 600 ಅಂಕ ಪಡೆದು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಇನ್ನೇನು ಕೆಲವೇ ಕ್ಷಣಗಳಲ್ಲಿ http://karresults.nic.in/ ವೆಬ್‌ಸೈಟ್‌ನಲ್ಲಿ ಪ್ರಕಟವಾಗಲಿದ್ದು, ಆನ್‌ಲೈನ್ ಮೂಲಕ ಚೆಕ್ ಮಾಡಬಹುದು.
ರಾಜ್ಯದಲ್ಲಿ ಮಾ.9 ರಿಂದ ಮಾ.29ರವರೆಗೆ ನಡೆದಿದ್ದ ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಒಟ್ಟು 7.26 ಲಕ್ಷ ದ್ವಿತೀಯ ಪಿಯು ವಿದ್ಯಾರ್ಥಿಗಳ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಅದರಲ್ಲಿ ಶೇ.6 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು, ಉಳಿದಂತೆ ಎಲ್ಲ ವಿದ್ಯಾರ್ಥಿಗಳು ಕೂಡ ಪರೀಕ್ಷೆಯನ್ನು ಬರೆದಿದ್ದರು.