2nd PU Result ; ಚಿಕ್ಕಮಗಳೂರು ಜಿಲ್ಲೆಗೆ 6 ಮತ್ತು ಶಿವಮೊಗ್ಗ ಜಿಲ್ಲೆಗೆ 8ನೇ ಸ್ಥಾನ

ಬೆಂಗಳೂರು : ಕರ್ನಾಟಕದಾದ್ಯಂತ ಯಶಸ್ವಿಯಾಗಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ.

ಇಂದು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಫಲಿತಾಂಶವನ್ನು ಬಿಡುಗಡೆ ಮಾಡಿದ್ದು, 7,26,195 ವಿದ್ಯಾರ್ಥಿಗಳ ಪೈಕಿ 5 ಲಕ್ಷದ 24 ಸಾವಿರ 209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ1,34,876 ಶ್ರ( ಶೇಕಡಾ 61.22ರಷ್ಟು) ವಿದ್ಯಾರ್ಥಿ ಪಾಸ್ ಆಗಿದ್ದರೆ, ವಾಣಿಜ್ಯ ವಿಭಾಗದಲ್ಲಿ 1,82,246 (ಶೇಕಡಾ 75.89ರಷ್ಟು) ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಇನ್ನು ವಿಜ್ಞಾನ ವಿಭಾಗದಲ್ಲಿ 2,07,087 (ಶೇಕಡಾ 85.71ರಷ್ಟು) ಪಾಸ್ ಆಗಿದ್ದಾರೆ. ದಕ್ಷಿಣ ಕನ್ನಡ 95.33ರಷ್ಟು ಫಲಿತಾಂಶದೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡಿದೆ.

ಯಾವ ಜಿಲ್ಲೆ ಫಸ್ಟ್? ಯಾವ ಜಿಲ್ಲೆ ಲಾಸ್ಟ್?

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ(95.33ರಷ್ಟು ಫಲಿತಾಂಶ), ಉಡುಪಿ ಜಿಲ್ಲೆಗೆ 2ನೇ ಸ್ಥಾನ, ಕೊಡಗು ಜಿಲ್ಲೆಗೆ 3ನೇ ಸ್ಥಾನದಲ್ಲಿದ್ದರೆ, ಉತ್ತರ ಕನ್ನಡ ಜಿಲ್ಲೆ 4ನೇ, ವಿಜಯಪುರ 5ನೇ, ಚಿಕ್ಕಮಗಳೂರು 6ನೇ (83.28) ಮತ್ತು ಶಿವಮೊಗ್ಗ 8ನೇ (83.13) ಸ್ಥಾನ ಹಾಗೂ ಯಾದಗಿರಿ ಜಿಲ್ಲೆ ಕೊನೆ ಸ್ಥಾನದಲ್ಲಿದೆ.

ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಬೆಂಗಳೂರಿನ ಜಯನಗರ ಕಾಲೇಜಿನ ತಬಸ್ಸುಮ್ ಶೇಖ್ 600ಕ್ಕೆ 593 ಪ್ರಥಮ ಸ್ಥಾನ ಪಡೆದರೆ, ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ಅನನ್ಯ 600ಕ್ಕೆ 600 ಅಂಕ ಪಡೆದು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಇನ್ನೇನು ಕೆಲವೇ ಕ್ಷಣಗಳಲ್ಲಿ http://karresults.nic.in/ ವೆಬ್‌ಸೈಟ್‌ನಲ್ಲಿ ಪ್ರಕಟವಾಗಲಿದ್ದು, ಆನ್‌ಲೈನ್ ಮೂಲಕ ಚೆಕ್ ಮಾಡಬಹುದು.

ರಾಜ್ಯದಲ್ಲಿ ಮಾ.9 ರಿಂದ ಮಾ.29ರವರೆಗೆ ನಡೆದಿದ್ದ ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಒಟ್ಟು 7.26 ಲಕ್ಷ ದ್ವಿತೀಯ ಪಿಯು ವಿದ್ಯಾರ್ಥಿಗಳ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಅದರಲ್ಲಿ ಶೇ.6 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು, ಉಳಿದಂತೆ ಎಲ್ಲ ವಿದ್ಯಾರ್ಥಿಗಳು ಕೂಡ ಪರೀಕ್ಷೆಯನ್ನು ಬರೆದಿದ್ದರು.

Malnad Times

Recent Posts

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

45 mins ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

9 hours ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

19 hours ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

20 hours ago

ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ, 2ನೇ ಸ್ಥಾನಕ್ಕಾಗಿ ಬಿಜೆಪಿ, ಕಾಂಗ್ರೆಸ್ ಪೈಪೋಟಿ ಅಂದ್ರು ಈಶ್ವರಪ್ಪ

ರಿಪ್ಪನ್‌ಪೇಟೆ: ನನ್ನ ಪರವಾಗಿ ಹೋದ ಕಡೆಯಲೆಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು…

20 hours ago

ಹಸೆಮಣೆ ಏರುವ‌ ಮುನ್ನ ಹಕ್ಕು ಚಲಾಯಿಸಿದ ವಧು

ಶೃಂಗೇರಿ : ಇಂದು ನಡೆದ ಮತದಾನದಲ್ಲಿ ತಾಲೂಕಿನ ಕೂತಗೋಡಿನಲ್ಲಿ ಹಸೆಮಣೆ ಏರುವ ಮುನ್ನ ಯುವತಿಯೊಬ್ಬಳು ಮತ ಚಲಾಯಿಸಲು ಅಲಂಕಾರಗೊಂಡೆ ಮತಗಟ್ಟೆಗೆ…

21 hours ago