2nd PU Result 2023 ; ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 2ನೇ ರ‍್ಯಾಂಕ್‌ ಪಡೆದ ಶಿವಮೊಗ್ಗದ ವಿದ್ಯಾರ್ಥಿನಿ !

0 0

ಶಿವಮೊಗ್ಗ : ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ಅತಿ ಹೆಚ್ಚು ಅಂಕ ಪಡೆದವರ ಸಾಲಿನಲ್ಲಿದ್ದಾರೆ.

ರಾಜ್ಯಕ್ಕೆ 2ನೇ ರ‍್ಯಾಂಕ್‌ :

ಶಿವಮೊಗ್ಗದ ವಿಕಾಸ ಪಿಯುಸಿ ಕಾಂಪೊಸಿಟ್‌ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ಅನ್ವಿತಾ.ಡಿ.ಎನ್‌ ಅವರು 600ಕ್ಕೆ 596 ಅಂಕಗಳನ್ನು ಗಳಿಸಿ, ರಾಜ್ಯಕ್ಕೆ ಎರಡನೆ ರ‍್ಯಾಂಕ್‌ ಪಡೆದಿದ್ದಾರೆ. ರಾಜ್ಯದಲ್ಲಿ 09 ವಿದ್ಯಾರ್ಥಿಗಳು 596 ಅಂಕಗಳನ್ನು ಗಳಿಸಿದ್ದಾರೆ.

ಅನ್ವಿತಾ.ಡಿ.ಎನ್‌ ಅವರು ತೀರ್ಥಹಳ್ಳಿ ತಾಲೂಕು ಮಲ್ಲೇಸರ ಗ್ರಾಮದವರು. ತಂದೆ ನಾಗರಾಜ ಅವರು ಕೃಷಿಕರು. ತಾಯಿ ಅನುಸೂಯ ರವರ ಪುತ್ರಿ.

ಮೂರನೇ ರ‍್ಯಾಂಕ್‌ :

ಶಿವಮೊಗ್ಗದ ಕುವೆಂಪು ನಗರದ ಎಸ್‌.ವಿ.ಇ.ಟಿ ಸ್ವತಂತ್ರ ಪಿಯು ಕಾಲೇಜಿನ ನೇಹಾಶ್ರೀ ಅವರು 600 ಅಂಕಗಳಿಗೆ 595 ಅಂಕ ಗಳಿಸಿದ್ದಾರೆ. ರಾಜ್ಯಕ್ಕೆ ಮೂರನೇ ರ‍್ಯಾಂಕ್‌ ಪಡೆದಿದ್ದಾರೆ. ರಾಜ್ಯದಲ್ಲಿ ಒಟ್ಟು 13 ವಿದ್ಯಾರ್ಥಿಗಳು ಈ 595 ಅಂಕ ಗಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಎಸ್‌.ವಿ.ಇ.ಟಿ ಸ್ವತಂತ್ರ ಪಿಯು ಕಾಲೇಜಿನಲ್ಲಿ ಉಪನ್ಯಾಸಕರು, ಸಿಬ್ಬಂದಿ ನೇಹಾಶ್ರೀ ಅವರಿಗೆ ಅಭಿನಂದನೆ ಸಲ್ಲಿಸಿದರು.

ನೇಹಾಶ್ರೀ ಅವರ ತಂದೆ ಜಯಂತ್‌ ಕುಮಾರ್‌ ಅವರು ಬಿ.ಆರ್‌.ಪಿಯ ರಾಷ್ಟ್ರೀಯ ಪಿಯು ಕಾಲೇಜಿನ ಎಸ್‌.ಡಿ.ಎ ಆಗಿದ್ದಾರೆ. ತಾಯಿ ಚಂದನಾ.ಎಸ್.ಬಿ.

ಶಿವಮೊಗ್ಗಕ್ಕೆ 8ನೇ ಸ್ಥಾನ :

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಶಿವಮೊಗ್ಗ ಜಿಲ್ಲೆ ರಾಜ್ಯಕ್ಕೆ 8ನೇ ಸ್ಥಾನ ಪಡೆದುಕೊಂಡಿದೆ. ಜಿಲ್ಲೆಯಲ್ಲಿ ಶೇ.83.13ರಷ್ಟು ಫಲಿಶಾಂತ ಬಂದಿದೆ. ಕಳೆದ ಬಾರಿ ಶೇ.70.14ರಷ್ಟು ಫಲಿತಾಂಶದೊಂದಿಗೆ 08 ಸ್ಥಾನದಲ್ಲಿಯೇ ಇತ್ತು.

Leave A Reply

Your email address will not be published.

error: Content is protected !!