Categories: Shivamogga

5ನೇ ಗ್ಯಾರಂಟಿಗೆ ಜ.12 ರಂದು ಶಿವಮೊಗ್ಗದಲ್ಲಿ ಅಧಿಕೃತ ಚಾಲನೆ | ನಾವು ನುಡಿದಂತೆ ನಡೆದಿದ್ದೇವೆ ; ಮಧು ಬಂಗಾರಪ್ಪ

ಶಿವಮೊಗ್ಗ : ಜ.12ರಂದು ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿಗೆ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಿಂದ ಅಧಿಕೃತ ಚಾಲನೆ ನೀಡಲಿದ್ದು, ನಾವು ನುಡಿದಂತೆ ನಡೆದಿದ್ದೇವೆ. ಯುವಕರು ಈ ಯೋಜನೆಯ ಸದುಪಯೋಗಪಡಿಸಿಕೊಳ್ಳಿ ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ.


ಅವರು ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಯುವ ನಿಧಿ ಯೋಜನೆಯ ಉದ್ಘಾಟನಾ ಸಮಾರಂಭದ ಪೂರ್ವಬಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಲಕ್ಷಾಂತರ ಜನ ಭಾಗವಹಿಸುವ ನಿರೀಕ್ಷೆ ಇದೆ. ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ್ದೇವೆ. ಕೌಶಲ್ಯಾಭಿವೃದ್ಧಿ ಇಲಾಖೆ ಈಗಾಗಲೇ ಸಿದ್ಧತೆ ನಡೆಸಿದೆ. ಕಾರ್ಯಕರ್ತರು ನಿರುದ್ಯೋಗಿ ಯುವಕರ ಗಮನಕ್ಕೆ ತನ್ನಿ, ಯುವಕರಲ್ಲಿ ನಾವು ಪದವಿ ಮುಗಿಸಿದರು ಪೋಷಕರಿಗೆ ಭಾರವಾಗಿದ್ದೇವೆ ಎಂಬ ಆತಂಕ ಬೇಡ ಎಂದರು.


ಉನ್ನತ ಶಿಕ್ಷಣ ಸಚಿವ ಸುಧಾಕರ್ ಮಾತನಾಡಿ, ಈಗಾಗಲೇ ಜನಪ್ರಿಯ 4 ಗ್ಯಾರಂಟಿಗಳನ್ನು ನೀಡಿದ್ದೇವೆ. ಜನರ ಇಟ್ಟ ವಿಶ್ವಾಸಕ್ಕೆ ನಾವು ಋಣಿಯಾಗಿದ್ದು, ಕೊಟ್ಟ ಭರವಸೆಯನ್ನು ಈಡೇರಿಸಿದ್ದೇವೆ. ಅರ್ಹ ಫಲಾನುಭವಿಗಳನ್ನು ಇಲಾಖೆ ಗುರುತಿಸಿ, ಈ ಯೋಜನೆಯಂತೆ ಯುವಕರಿಗೆ ಸಹಕಾರ ನೀಡುತ್ತೇವೆ. ನಿರುದ್ಯೋಗಿ ಯುವಕರು ತಲೆಯೆತ್ತಿ ನಿಲ್ಲುವಂತೆ ಮಾಡಿದ್ದೇವೆ ಎಂದರು.


ವೈದ್ಯಕೀಯ ಶಿಕ್ಷಣ ಸಚಿವ ಶರಣ್‌ಪ್ರಕಾಶ್ ಮಾತನಾಡಿ, ಶಿವಮಗ್ಗದಲ್ಲಿ ಜ.12ರಂದು ಯುವ ನಿಧಿ ಯೋಜನೆಯಡಿಯಲ್ಲಿ ಸೂಕ್ತ ಫಲಾನುಭವಿಗಳಿಗೆ ಪದವಿದರರಿಗೆ 3000, ಡಿಪ್ಲೋಮಾ ಪದವಿದರರಿಗೆ 1,500 ಧನಸಹಾಯ ನೀಡಲಿದ್ದು, ಮುಖ್ಯಮಂತ್ರಿಗಳು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಶಿವಮೊಗ್ಗ ಸಮಾಜವಾದಿ ಹೋರಾಟದ ತವರೂರು, ಮಧ್ಯ ಕರ್ನಾಟಕದಲ್ಲಿದೆ. ಇದು ಸರ್ಕಾರದ ಪ್ರಮುಖ ಆಶ್ವಾಸನೆಯಾಗಿದ್ದು, ಇಲ್ಲಿಂದಲೇ ನೆರವೇರಿಸುತ್ತಿದ್ದೇವೆ. ಇಲ್ಲಿ ಪ್ರಣಾಳಿಕೆ ಸಮಿತಿಯ ಉಪಾಧ್ಯಕ್ಷರು, ಕ್ರಿಯಾಶೀಲಾ ಮಂತ್ರಿಗಳಾದ ಮಧುಬಂಗಾರಪ್ಪನವರು ಈ ಯೋಜನೆಯ ಅನುಷ್ಠಾನಕ್ಕೆ ಅವಿರತವಾಗಿ ಶ್ರಮಿಸುತ್ತಿದ್ದಾರೆ. ನಿರುದ್ಯೋಗಿ ಯುವಕರು ಆತಂಕ ಬಿಟ್ಟು, ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಿ ಎಂದರು.


ಈಗಾಗಲೇ 25 ಸಾವಿರಕ್ಕೂ ಹೆಚ್ಚು ಯುವಕರು ನೋಂದಾಯಿಸಿದ್ದಾರೆ. ಇದಕ್ಕೆ ಸಮಯದ ಮಿತಿಯಿಲ್ಲ. ಯೋಜನೆ ಜಾರಿಯಾದ ನಂತರವು ಸತತವಾಗಿ ನೋಂದಣಿ ಮಾಡಿಸಿಕೊಳ್ಳಬಹುದು ಎಂದರು.


ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಭದ್ರಾವತಿ ಶಾಸಕ ಸಂಗಮೇಶ್, ಸಾಗರ ಶಾಸಕ ಬೇಳುರು ಗೋಪಾಲಕೃಷ್ಣ ಪ್ರಮುಖರಾದ ಆಯನೂರು ಮಂಜುನಾಥ್, ಆರ್.ಎಂ. ಮಂಜುನಾಥ್‌ಗೌಡ, ಎಂ.ಶ್ರೀಕಾಂತ್, ಆರ್.ಪ್ರಸನ್ನಕುಮಾರ್, ಇಸ್ಮಾಯಿಲ್ ಖಾನ್, ಬಲ್ಖೀಶ್ ಬಾನು, ಅನಿತಾಕುಮಾರಿ, ಕಲಗೋಡು ರತ್ನಾಕರ್, ಖಲೀಂ ಪಾಷಾ, ದೇವೇಂದ್ರಪ್ಪ, ಇಕ್ಕೇರಿ ರಮೇಶ್ ಮತ್ತಿತರರು ಇದ್ದರು.

ಗೊಂದಲದ ವಾತಾವರಣ
ಕಾಂಗ್ರೆಸ್ ಕಚೇರಿಯಲ್ಲಿ ಯುವನಿಧಿ ಪೂರ್ವಭಾವಿ ಸಭೆಯಲ್ಲಿ ಇಂದು ಮೂವರು ಸಚಿವರು ಭಾಗವಹಿಸಿದ್ದು, ಅವರ ಎದುರಿನಲ್ಲೇ ಕಾರ್ಯಕರ್ತರು ಎದ್ದು ನಿಂತು ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆದಿದೆ. ನೀವು ಕಾರ್ಯಕರ್ತರಿಗೆ ಯಾವಾಗ ಅಧಿಕಾರ ನೀಡುತ್ತೀರ ?, ನಿಗಮ ಮಂಡಳಿಗಳಿಗೆ ಯಾವಾಗ ಅಧ್ಯಕ್ಷರನ್ನು ನೇಮಕ ಮಾಡುತ್ತೀರ ? ಎಂದು ಕೆಲವು ಕಾರ್ಯಕರ್ತರು ಪ್ರಶ್ನಿಸಿದರು.
ಸ್ಥಳದಲ್ಲಿದ್ದ ಅನೇಕ ಕಾರ್ಯಕರ್ತರು ಅದಕ್ಕೆ ಧ್ವನಿಗೂಡಿಸಿದರು. ಈ ಸಂದರ್ಭದಲ್ಲಿ ಸಭೆಯಲ್ಲಿ ಗೊಂದಲದ ವಾತಾವರಣ ಉಂಟಾಯಿತು. ಭದ್ರಾವತಿಯ ಸಿ.ಎಂ.ಖಾದರ್ ಅವರು ಅಲ್ಪಸಂಖ್ಯಾತರನ್ನು ಕಡೆಗಣಿಸಬೇಡಿ, ನಾವು ಬೆಂಬಲ ನೀಡುತ್ತ ಬಂದಿದ್ದೇವೆ. ಕಲಡ್ಕ ಪ್ರಭಾಕರ್ ಭಟ್‌ರು ಅತ್ಯಂತ ತುಚ್ಛವಾಗಿ ಅಲ್ಪಸಂಖ್ಯಾತರನ್ನು ಅವಮಾನಿಸಿದ್ದಾರೆ. ಆದರು ಕಾಂಗ್ರೆಸ್ ನಾಯಕರು ಪ್ರತಿಕ್ರಿಯಿಸಲಿಲ್ಲ. ನಿಮಗೂ ಬಿಜೆಪಿಗೂ ಏನೂ ವ್ಯತ್ಯಾಸವಿಲ್ಲವೇ. ಎಲ್ಲವನ್ನು ಅಲ್ಪಸಂಖ್ಯಾತರು ಒಪ್ಪಿಕೊಳ್ಳಬೇಕ ಎಂದು ಏರುಧ್ವನಿಯಲ್ಲಿ ಪ್ರಶ್ನಿಸಿದರು. ಸಚಿವರು ಪ್ರತಿಕ್ರಿಯಿಸದೆ ಸಭೆಯಿಂದ ತೆರಳಿದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

7 mins ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

6 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

7 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

14 hours ago