Accident | 2 ಬೈಕ್‌ಗಳ ನಡುವೆ ಡಿಕ್ಕಿಯಾಗಿ ರಸ್ತೆಗೆ ಬಿದ್ದವರ ಮೇಲೆ ಲಾರಿ ಹರಿದು ಮೂವರು ಸ್ಥಳದಲ್ಲೇ ಸಾವು !

0 6,709

ಭದ್ರಾವತಿ : ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬಿದ್ದವರ ಮೇಲೆ ಲಾರಿ ಹರಿದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಹೊಳೆಹೊನ್ನೂರು ಸಮೀಪ ನಡೆದಿದೆ.

ಕಲ್ಲಿಹಾಳ್-ಅರಹತೊಳಲು ಗ್ರಾಮದ ಬಳಿ ಈ ಘಟನೆ ನಡೆದಿದೆ. ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಂದು ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ವಿಕಾಸ್ (18), ಯಶ್ವಂತ‌(17) ಶಶಾಂಕ (17) ಮೃತಪಟ್ಟ ದುರ್ದೈವಿಗಳು. ಮೃತರು ಹಳೆ ಜಂಬರಗಟ್ಟ ನಿವಾಸಿಗಳು ಎಂದು ತಿಳಿದುಬಂದಿದೆ.

ಎರಡು ಬೈಕ್​ಗಳ ನಡುವೆ ಡಿಕ್ಕಿಯಾಗಿದ್ದು, ಸವಾರರು ರಸ್ತೆಗೆ ಬಿದ್ದಿದ್ದಾರೆ. ಮತ್ತೊಂದೆಡೆ ವೇಗವಾಗಿ ಬರುತ್ತಿದ್ದ ಲಾರಿ ರಸ್ತೆ ಮೇಲೆ ಬಿದ್ದಿದ್ದ ಬೈಕ್​ ಸವಾರರ ಮೇಲೆ ಹರಿದಿದೆ. ಪರಿಣಾಮ ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಂದು ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.

ಮತ್ತೊಂದು ಬೈಕ್‌ ಚಲಾಯಿಸುತ್ತಿದ್ದ ಯುವಕನನ್ನು ಭದ್ರಾವತಿ ತಾಲೂಕು ಅರದೊಟ್ಟು ಗ್ರಾಮದ ಬಸವರಾಜ್ ಗಾಯಗೊಂಡಿದ್ದು ಈತನನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೈಮರ ಕಡೆಯಿಂದ ಬಸವರಾಜ್ ಕಲ್ಲಿಹಾಳ್‌ ಕಡೆಗೆ ತೆರಳುತ್ತಿದ್ದ. ಇದೇ ವೇಳೆ ಲಾರಿ ಹಾಗೂ ಬೈಕ್‌ ಎದುರಿನಿಂದ ಬರುತ್ತಿದ್ದವು. ಲಾರಿಯನ್ನು ಓವರ್‌ಟೇಕ್‌ ಮಾಡಲು ಹೋಗಿ ಮೂವರಿದ್ದ ಬೈಕ್‌ ಮತ್ತೊಂದು ಬೈಕ್‌ಗೆ ಡಿಕ್ಕಿಯಾಗಿದೆ. ಆಗ, ಎರಡೂ ಬೈಕ್‌ ಸವಾರರಿಗೆ ನಿಯಂತ್ರಣ ತಪ್ಪಿದ್ದು, ಸವಾರರು ರಸ್ತೆಗೆ ಬಿದ್ದಿದ್ದಾರೆ. ಆಗ ಮತ್ತೊಂದಡೆ ವೇಗವಾಗಿ ಚಲಿಸುತ್ತಿದ್ದ ಲಾರಿ ಮೂವರ ಮೇಲೆ ಹರಿದಿದೆ. ಇದರಿಂದ ಮೂವರು ಸ್ಥಳದಲ್ಲೇ ಮೃತಟ್ಟಿದ್ದು, ದೇಹಗಳು ಛಿದ್ರಗೊಂಡಿವೆ. ಇನ್ನು ಲಾರಿ ಚಾಲಕ ಪರಾರಿಯಾಗಿದ್ದಾನೆ. ಘಟನೆ ಕುರಿತು ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಖಲಾಗಿದೆ.

Leave A Reply

Your email address will not be published.

error: Content is protected !!