ರಿಪ್ಪನ್‌ಪೇಟೆ : ಅಮೃತ ಗ್ರಾಪಂ ವ್ಯಾಪ್ತಿಯ ಗರ್ತಿಕೆರೆಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಗಂಭೀರವಾಗಿ ಗಾಯವಾಗಿರುವ ಘಟನೆ ಇಂದು ನಡೆದಿದೆ.
ಗರ್ತಿಕೆರೆ ನಿವಾಸಿ ನದೀಮ್ (22) ತನ್ನ ಬೈಕಿನಲ್ಲಿ ಗರ್ತಿಕೆರೆ ಕಡೆಯಿಂದ ಮನೆಗೆ ತೆರಳುವಾಗ ಸರ್ಕಾರಿ ಪ್ರೌಢ ಶಾಲೆ ಬಳಿ ನಡೆದುಕೊಂಡು ಹೋಗುತ್ತಿದ್ದ ಚಿನ್ನಪ್ಪ (54) ಎಂಬುವವರಿಗೆ ಗುದ್ದಿದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪಾದಚಾರಿಗೆ ಬೈಕ್ ಡಿಕ್ಕಿಯಾದ ಬೈಕ್ ರಸ್ತೆ ಬದಿಯ ನಾಮಫಲಕಕ್ಕೆ ಗುದ್ದಿದ ಹಿನ್ನಲೆಯಲ್ಲಿ ನಾಮಫಲಕ ಪುಡಿಪುಡಿಯಾಗಿದೆ.
ಈ ಘಟನೆಯಲ್ಲಿ ಇಬ್ಬರಿಗೂ ತಲೆಗೆ ಗಂಭೀರವಾದ ಗಾಯಗಳಾಗಿದ್ದು ಇಬ್ಬರನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಗೆ ರವಾನಿಸಲಾಗಿದೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.