Accident | Shivamogga | ಭೀಕರ ರಸ್ತೆ ಅಪಘಾತ ; ಸ್ಥಳದಲ್ಲೇ ಶಾಲಾ ಬಾಲಕಿ ಸಾವು !

0 0

ಶಿವಮೊಗ್ಗ : ಭೀಕರ ರಸ್ತೆ ಅಪಘಾತದಲ್ಲಿ ಶಾಲಾ ಬಾಲಕಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಗ್ರಾಮಾಂತರ ಭಾಗದ ಪಿಳ್ಳಂಗೆರೆ ಗ್ರಾಮದಲ್ಲಿ ನಡೆದಿದೆ.

ಶಿವಮೊಗ್ಗ ನಗರ ಕಡೆಗೆ ಬೈಕಿನಲ್ಲಿ ತಂದೆ ಮತ್ತು ಮಗಳು ಬರುತ್ತಿದ್ದಾಗ ಶಿವಮೊಗ್ಗದಿಂದ ಹೊಳೆಹೊನ್ನೂರು ಕಡೆ ಹೋಗುತ್ತಿದ್ದ ಟಿಪ್ಪರ್ ಲಾರಿ ಬಾಲಕಿಯ ತಲೆ ಮೇಲೆ ಹರಿದು ಹೋಗಿದೆ. ಪರಿಣಾಮ ಐಶ್ವರ್ಯ (15) ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ತಂದೆ ಜಯದೇವ್ ಗಾಯಗೊಂಡಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave A Reply

Your email address will not be published.

error: Content is protected !!