Shivamogga | ಬಜರಂಗದಳ ಪ್ರತಿಭಟನೆಗೆ ಅವಕಾಶ ನೀಡದಂತೆ ಮನವಿ

0 381

ಶಿವಮೊಗ್ಗ: ರಾಗಿಗುಡ್ಡ ಗಲಭೆಗೆ ಸಂಬಂಧಿಸಿದಂತೆ ಬಿಜೆಪಿ, ಬಜರಂಗದಳ, ವಿಶ್ವ ಹಿಂದೂ ಪರಿಷತ್ ಸಂಘಟನೆಗಳು ರಾಜಕೀಯ ಲಾಭ ಪಡೆಯಲು ಮುಂದಾಗಿರುವುದನ್ನು ಖಂಡಿಸಿ ನಾಳೆ ಬಜರಂಗದಳದಿಂದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ನಡೆಯುವ ಪ್ರತಿಭಟನೆಗೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ಜಿಲ್ಲಾ ಜನತಾ ದಳ(ಜಾತ್ಯತೀತ) ಅಲ್ಪಸಂಖ್ಯಾತರ ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈಗಾಗಲೇ ನಗರದಲ್ಲಿ ಶಾಂತಿ ನೆಲೆಸಿದೆ. ಈದ್‌ಮಿಲಾದ್ ಮೆರವಣಿಗೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬAಧಿಸಿದAತೆ ಪೊಲೀಸ್ ಇಲಾಖೆ ಸಮರ್ಥವಾಗಿ ಕಾರ್ಯನಿರ್ವಹಿಸಿದೆ. ನಗರದಲ್ಲಿ ಶಾಂತಿ ನೆಲೆಸಿದೆ. ಜಿಲ್ಲಾಡಳಿತ ಕೂಡ ಎಚ್ಚರಿಕೆಯ ಹೆಜ್ಜೆ ಇಟ್ಟಿದೆ. ಇಂತಹ ಸಂದರ್ಭದಲ್ಲಿ ಬಜರಂಗ ದಳ ಮತ್ತು ವಿಹಿಂಪದವರು `ಈದ್ ಮಿಲಾದ್ ಮೆರವಣಿಗೆಯಲ್ಲಿ ರಾಗಿಗುಡ್ಡದಲ್ಲಿ ಜಿಹಾದಿ ಮುಸಲ್ಮಾನರಿಂದ ಹಿಂದುಗಳ ಮೇಲಾದ ದೌರ್ಜನ್ಯದ ವಿರುದ್ಧ’ ಎಂದು ಹೆಸರಿಟ್ಟುಕೊಂಡು ನಾಳೆ ಪ್ರತಿಭಟನೆ ಮಾಡಲು ಹೊರಟಿರುವುದು ಪ್ರಚೋದನಕಾರಿಯಾಗಿದೆ ಎಂದು ಮನವಿದಾರರು ತಿಳಿಸಿದ್ದಾರೆ.


ರಾಗಿಗುಡ್ಡ ಘಟನೆಗೆ ಸಂಬಂಧಿಸಿದಂತೆ ಹಿಂದೂ ಹಾಗೂ ಮುಸ್ಲಿಂರ ಮನೆಗಳ ಮೇಲೆಯೂ ಕಲ್ಲು ತೂರಾಟ ನಡೆಸಲಾಗಿದೆ. ಎರಡೂ ಧರ್ಮದವರ ಆಸ್ತಿ ಪಾಸ್ತಿ ಹಾನಿಯಾಗಿದೆ. ಆದರೆ ಇವರ ಪ್ರತಿಭಟನೆ ಕೇವಲ ಒಂದು ಧರ್ಮದ ಪರವಾಗಿ ಇದೆ. ಪ್ರತಿಭಟನೆಯ ಮೂಲಕ ಮತ್ತಷ್ಟು ಪ್ರಚೋದನಕಾರಿ ಭಾಷಣಗಳು ನಡೆದು ಸಮಾಜದಲ್ಲಿ ದ್ವೇಷ ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ನಾಳೆ ನಡೆಯಲಿರುವ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರಿಗೆ ಪ್ರತಿಭಟನೆ ಮಾಡಲು ಅವಕಾಶವನ್ನೇ ಕೊಡಬಾರದು ಎಂದು ಮನವಿಯಲ್ಲಿ ತಿಳಿಸಲಾಗಿದೆ.


ಈ ಸಂದರ್ಭದಲ್ಲಿ ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ನಜ್ರುಲ್ಲಾ ಶೇಖ್ ಮಹ್ಮದ್ ನಿಹಾಲ್, ಆಸೀಫ್ ಖಾನ್ ಮುಂತಾದವರಿದ್ದರು.

Leave A Reply

Your email address will not be published.

error: Content is protected !!