BJP ಅಂತಿಮ ಪಟ್ಟಿ ಪ್ರಕಟ ; ತೀವ್ರ ಕುತೂಹಲ ಕೆರಳಿಸಿದ್ದ ಶಿವಮೊಗ್ಗ ಬಿಜೆಪಿ ಟಿಕೆಟ್ ಯಾರ ಪಾಲಾಯ್ತು ಗೊತ್ತಾ ?
ಶಿವಮೊಗ್ಗ : ನಾಮಪತ್ರ ಸಲ್ಲಿಕೆಗೆ ಒಂದು ದಿನ ಮೊದಲು ಬಿಜೆಪಿ ಅಂತಿಮ ಪಟ್ಟಿ ಪ್ರಕಟಗೊಳಿಸಿದ್ದು ತೀವ್ರ ಕುತೂಹಲ ಕೆರಳಿಸಿದ್ದ ಶಿವಮೊಗ್ಗ ನಗರ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಿಸಿದೆ.

ಬಿಜೆಪಿಯ ಪ್ರಬಲ ನಾಯಕ ಕೆ.ಎಸ್. ಈಶ್ವರಪ್ಪ ಅವರು ಪ್ರತಿನಿಧಿಸುತ್ತಿರುವ ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್ ಘೋಷಿಸುವುದು ಬಿಜೆಪಿಗೆ ಕಗ್ಗಂಟಾಗಿತ್ತು. ಕೊನೆಗೂ ಶಿವಮೊಗ್ಗ ಪಾಲಿಕೆಯ ಆಡಳಿತ ಪಕ್ಷದ ನಾಯಕ ಎಸ್.ಎಸ್. ಚನ್ನಬಸಪ್ಪ (ಚನ್ನಿ) ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ.
ಶಿವಮೊಗ್ಗ ಕ್ಷೇತ್ರದಿಂದ ಈಶ್ವರಪ್ಪ ಪುತ್ರ ಕೆ.ಈ.ಕಾಂತೇಶ್, ಎಸ್.ಎಸ್.ಜ್ಯೋತಿ ಪ್ರಕಾಶ್, ಡಾ.ಧನಂಜಯ ಸರ್ಜಿ ಅವರು ಆಕಾಂಕ್ಷಿಗಳಾಗಿದ್ದರು. ಚನ್ನಬಸಪ್ಪ ಅವರು ಈಶ್ವರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡವರು. ಪಾಲಿಕೆಯ ಮಾಜಿ ಉಪಮೇಯರ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದರು.
ಅಳೆದು ತೂಗಿ ಚನ್ನಬಸಪ್ಪ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ.