BJP ರಾಜ್ಯಾಧ್ಯಕ್ಷರಾಗಿ ಶಾಸಕ ಬಿ.ವೈ‌. ವಿಜಯೇಂದ್ರ ನೇಮಕ

0 355

ಶಿವಮೊಗ್ಗ : ಶಿಕಾರಿಪುರ ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಶುಕ್ರವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ಬಿ.ವೈ ವಿಜಯೇಂದ್ರ ಅವರನ್ನು ಕರ್ನಾಟಕ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದಾರೆ.

ಹಲವು ತಿಂಗಳುಗಳಿಂದ ತೆರವಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಸ್ವಾನಕ್ಕೆ ಹೊಸ ಅಧ್ಯಕ್ಷರ ಆಯ್ಕೆ ಬಗ್ಗೆ ಚರ್ಚೆ ನಡೆಯುತ್ತಿತ್ತು. ವಿಜಯೇಂದ್ರ ಅವರ ಆಯ್ಕೆಯಿಂದ ಇದೀಗ ಚರ್ಚೆಗೆ ತೆರೆ ಬಿದ್ದಂತಾಗಿದೆ.

Leave A Reply

Your email address will not be published.

error: Content is protected !!