Election Code Of Conduct | Shivamogga | Karnataka Assembly Election | ಅಕ್ರಮವಾಗಿ ಸಾಗಿಸುತ್ತಿದ್ದ ದವಸ-ಧಾನ್ಯ, ನಗದು ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ವಶಕ್ಕೆ
ಶಿವಮೊಗ್ಗ : ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಪೊಲೀಸರು ಚೆಕ್ ಪೋಸ್ಟ್ ತೆರೆದು ವಾಹನಗಳನ್ನು ತಪಾಸಣೆ ನಡೆಸುತ್ತಿದ್ದು ಈ ವೇಳೆ ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ ಬೇಳೆ, ಕಾಳು, ಅಕ್ಕಿ, ರಗ್ಗು, ಜಮಖಾನ, ನಗದು ವಶಪಡಿಸಿಕೊಳ್ಳಲಾಗಿದೆ.

ದೊಡ್ಡಪೇಟೆ ಠಾಣಾ ವ್ಯಾಪ್ತಿಯಲ್ಲಿ 10 ಲಕ್ಷ ರೂ. ಮೌಲ್ಯದ ಅಕ್ಕಿ, ಬೇಳೆ, ಎಣ್ಣೆ, ಶಾವಿಗೆ, ಸಕ್ಕರೆ ಮತ್ತಿತರ ವಸ್ತುಗಳಿದ್ದ 500 ಬ್ಯಾಗ್ ವಶಕ್ಕೆ ತೆಗೆದುಕೊಳ್ಳಲಾಗಿದೆ. ಅಕ್ರಮವಾಗಿ ಸಂಗ್ರಹಿಸಿಡಲು ಸಾಗಾಟ ಮಾಡುತ್ತಿದ್ದರೆಂದು ಆರೋಪಿಸಲಾಗಿದೆ.
ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಠಾಣಾ ವ್ಯಾಪ್ತಿಯಲ್ಲಿ ಲಾರಿಯಲ್ಲಿ ಸಾಗಿಸುತ್ತಿದ್ದ 5 ಲಕ್ಷ ರೂ. ಮೌಲ್ಯದ 115 ಕ್ವಿಂಟಾಲ್ ಅಕ್ಕಿ, 4.50 ಲಕ್ಷ ರೂ. ಮೌಲ್ಯದ ರಗ್ಗು, ಜಮಖಾನೆ ವಶಪಡಿಸಿಕೊಳ್ಳಲಾಗಿದೆ. 3 ಲಗೇಜ್ ವಾಹನಗಳಲ್ಲಿ ರಗ್ಗು, ಜಮಖಾನ ಸಾಗಿಸಲಾಗುತ್ತಿತ್ತು. ಕುಂಸಿ ಠಾಣಾ ವ್ಯಾಪ್ತಿಯಲ್ಲಿ 90,000 ರೂ. ನಗದನ್ನು ಜಪ್ತಿ ಮಾಡಲಾಗಿದೆ.
