Categories: ShivamoggaSoraba

Hori Habba | ಸೊರಬದ ಯಲವಳ್ಳಿ ಗ್ರಾಮದಲ್ಲಿ ವಿಜೃಂಭಣೆಯಿಂದ ಜರುಗಿದ ಹೋರಿ ಬೆದರಿಸುವ ಹಬ್ಬ

ಸೊರಬ: ಗ್ರಾಮೀಣ ಭಾಗದ ರೈತರ ಹಬ್ಬವಾಗಿರುವ ಜನಪದ ಕ್ರೀಡೆ ಸಾಂಪ್ರದಾಯಿಕ ಹೋರಿ ಬೆದರಿಸುವ ಹಬ್ಬ (Hori Habba) ತಾಲೂಕಿನ ಯಲವಳ್ಳಿ ಗ್ರಾಮದಲ್ಲಿ ವಿಜೃಂಭಣೆಯಿಂದ ಜರುಗಿತು.

ದೀಪಾವಳಿ (Deepavali) ನಂತರದಲ್ಲಿ‌ ಹೋರಿ ಬೆದರಿಸುವ ಹಬ್ಬ ಮಹತ್ವ ಪಡೆದಿದ್ದು, ಅಖಾಡದಲ್ಲಿ ಹೋರಿಗಳು ಓದುವುದನ್ನು ನೋಡಲು ನೆರೆಯ ಗ್ರಾಮಗಳನ್ನು ಸೇರಿದಂತೆ ನೆರೆಯ ತಾಲೂಕು ಹಾಗೂ‌ ಜಿಲ್ಲೆಗಳಿಂದ ಹೋರಿ‌ ಅಭಿಮಾನಿಗಳು ಆಗಮಿಸಿದ್ದರು. ಅಖಾಡದಲ್ಲಿ ಪೈಲ್ವಾನರ ಕೈಗೆ ಸಿಗದಂತೆ ಹೋರಿಗಳು ಓಡುವ ದೃಶ್ಯ ಮೈನವಿರೇಳಿಸಿತು. ಹೋರಿಗಳ ಮಾಲೀಕರು ತಮ್ಮ ನೆಚ್ಚಿನ ಹೋರಿಗಳನ್ನು ಬಣ್ಣ ಬಣ್ಣದ ಜೂಲ, ಬಲೂನು, ಕೊಬ್ಬರಿ ಹಾರ ಕಟ್ಟಿ ಶೃಂಗರಿಸಿದ್ದರು.

ಅಖಾಡದಲ್ಲಿ ಚಿಕ್ಕನಂದಿಹಳ್ಳಿ ಚಾಮುಂಡಿ ಎಕ್ಸ್‌ಪ್ರೆಸ್‌, ಹಾರನಹಳ್ಳಿ ಸೃಷ್ಟಿಕರ್ತ ಛಾಯಾ ನಗರ, ಕಾತುವಳ್ಳಿ ಅಂಬಿಗರ ಹುಲಿ, ಹನುಮನಕೊಪ್ಪ ಡಾನ್, ಬೆಟ್ಟದಕೂರ್ಲಿ ಲಂಕಾಸುರ, ಅರಿಶಿಣಗೇರಿ ಗೂಳಿ, ಹೆಸರಿಯ ಚಿನ್ನಾಟದ ಚಿನ್ನ, ವೈಭವ ಶಿವಮೊಗ್ಗದ ಮಹಾರಾಜ, ವಿಷ್ಣುದಾದಾ, ಕೊಡಕಣಿ ಡಾನ್, ತ್ಯಾಗರ್ತಿ ದರ್ಭಾರ್, ಸೊರಬದ ಸೂಪರ್ ಸ್ಟಾರ್, ಹಂಟರ್, ನಗುಮುಖದ ಕಳಸ, ವರದಾ ಚಿನ್ನಾ, ಸೇರಿದಂತೆ ಜಮೀನ್ದಾರನ ಏಕಲವ್ಯ, ಯಜಮಾನ‌ ಪಾಳೆಗಾರ, ಕಲ್ಲೇಶ, ಜೆ.ಪಿ. ಗೌಡ್ರು ದರ್ಭಾರ್, ಅನಾಹುತ, ಹೋರಿ ಮಂಚಪ್ಪ, ಕ್ರಾಂತಿ ವೀರ, ಯಲವಳ್ಳಿ‌ ಕಿಂಗ್, ಡಿ.ಜೆ. ದರ್ಭಾರ್, ನಾಗಪ್ಪ ಸೇರಿದಂತೆ ವಿವಿಧ ಹೆಸರಿನ ಹೋರಿಗಳು ಅಖಾಡದಲ್ಲಿ‌ ಓಡಿದವು.

ಯುವಕರು ಹೋರಿಗಳನ್ನು ಹಿಡಿದು ಬಲ ಪ್ರದರ್ಶಿಸಿದರೆ, ಜನತೆ ಅದನ್ನು ನೋಡಿ ರೋಮಾಂಚನಗೊಂಡರು. ಅಖಾಡದಲ್ಲಿ ತೇರಿನಂತೆ ಕಾಣುವ ಪೀಪಿ ಹೋರಿಗಳು ಓಡಿ ಬರುತ್ತಿದ್ದಂತೆ ನೆರೆದವರಿಂದ ಕೇಕೆ, ಶಿಳ್ಳೆ, ಚಪ್ಪಾಳೆಗಳು ಜೋರಾಗಿಯೇ ಕೇಳಿಬಂದಿತು.

ಹೋರಿ ಹಬ್ಬದ ಆಯೋಜಿಸಿದ್ದ ಯಲವಳ್ಳಿ ಗ್ರಾಮಸ್ಥರು ಅಖಾಡದಲ್ಲಿ ಎರಡು ಬದಿಯಲ್ಲಿ ಸುರಕ್ಷತಾ ಕ್ರಮ ಕೈಗೊಂಡು, ಅಖಾಡದಲ್ಲಿ ಕ್ರಮವಾಗಿ ಒಂದೊಂದೆ ಹೋರಿಗಳನ್ನು ಓಡಿಸಿದರು. ಇದರಿಂದ ಯಾವುದೇ ಅಪಾಯಗಳು ಸಂಭವಿಸಲಿಲ್ಲ. ಆಯೋಜಕರು ಉತ್ತಮ ರೀತಿಯಲ್ಲಿ ಸುರಕ್ಷತೆಗೆ ಗಮನ ನೀಡಿದ್ದರು. ಇದು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಯಿತು. ಅಖಾಡದಲ್ಲಿ ಉತ್ತಮವಾಗಿ ಓಡಿದ ಹೋರಿಗಳು ಹಾಗೂ ಬಲ ಪ್ರದರ್ಶನ ತೋರಿದ ಯುವಕರನ್ನು ಗುರುತಿಸಲಾಯಿತು.

ಹಾರನಹಳ್ಳಿ ಹೋರಿ ಮಾಲಿಕರಾದ ಹನುಮಂತಪ್ಪ ಮಾತನಾಡಿ, 25 ವರ್ಷದಿಂದ ಹಬ್ಬ ಆಚರಿಸುತ್ತಿದ್ದೇವೆ. ಹೋರಿಯನ್ನು ಪ್ರೀತಿಯಿಂದ ಸಾಕುತ್ತೇವೆ. ಹಬ್ಬದಲ್ಲಿ ಹೋರಿಯೊಂದಿಗೆ ನಾವೂ ಸಹ ಸಂಭ್ರಮಿಸುತ್ತೇವೆ ಎಂದು ತಿಳಿಸಿದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

5 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

5 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

5 days ago