Hosanagara | ನೀರಾವರಿ ಘಟಕಕ್ಕೆ ರೈತರಿಂದ ಅರ್ಜಿ ಆಹ್ವಾನ

0 955

ಹೊಸನಗರ : 2023-24ನೇ ಸಾಲಿನ ಹೊಸನಗರ (Hosanagara) ತಾಲ್ಲೂಕಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಲ್ಲಿ ತುಂತುರು ನೀರಾವರಿ ಘಟಕಗಳು (30 ಪೈಪ್ ಹಾಗೂ 5 ಜೆಟ್) ಲಭ್ಯವಿದ್ದು, ಅರ್ಹ ರೈತರಿಂದ ಅರ್ಜಿ (Application) ಆಹ್ವಾನಿಸಲಾಗಿದೆ.


ರೈತರು ತರಿ ಜಮೀನಿನ ಪಹಣಿ, ಆಧಾರ್ ಕಾರ್ಡ್, 2 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್, ಕೊಳವೆ ಬಾವಿ ದೃಢೀಕರಣ ಪತ್ರ, ಕೋರ್ಟ್ ಆಫೀಡವಿಟ್ ಹಾಗೂ ಎಫ್‌ಐಡಿ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬಹುದು. ಮೊದಲು ಅರ್ಜಿ ಸಲ್ಲಿಸಿದವರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಹೊಸನಗರ ಸಹಾಯಕ ಕೃಷಿ ನಿರ್ದೇಶಕ ಸಚಿನ್ ಹೆಗಡೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.

error: Content is protected !!