Hosanagara | ಪಟ್ಟಣದ ವಿವಿಧೆಡೆ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

0 107

ಹೊಸನಗರ: ಪಟ್ಟಣದ ವಿವಿಧೆಡೆ ಇಂದು ಮಹಾತ್ಮ ಗಾಂಧಿಜೀಯವರ 154ನೇ ಜಯಂತಿ ಮತ್ತು ಲಾಲಾ ಬಹದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಆಚರಿಸಲಾಯಿತು.

ಪಟ್ಟಣ ಪಂಚಾಯತಿ ಆವರಣದಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರು ಶಾಸ್ತ್ರಿಯವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ತಹಶೀಲ್ದಾರ್ ರಾಕೇಶ್ ಪಟ್ಟಣ ಪಂಚಾಯತಿಯ ಸಿಬ್ಬಂದಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

ಪಟ್ಟಣದ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಇಂದು ಗಾಂಧಿ ಜಯಂತಿಯ ಪ್ರಯುಕ್ತ ಉಪನ್ಯಾಸಕ ವೃಂದ ಹಾಗೂ ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಒಂದು ದಿನ ಶ್ರಮದಾನ ಮಾಡುವ ಮೂಲಕ ಗಾಂಧಿ ಜಯಂತಿಯನ್ನು ಆಚರಿಸಿದರು.

ತಾಲ್ಲೂಕು ಕಛೇರಿಯ ಆವರಣದಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹುದ್ದೂರು ಶಾಸ್ತ್ರಿಯಯವರ ಜನ್ಮ ದಿನಾಚರಣೆಯನ್ನು ತಹಶೀಲ್ದಾರ್ ರಾಕೇಶ್‌ರವರು ಗಾಂಧೀಜಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪ್ರಥಮ ದರ್ಜೆ ಗುಮಾಸ್ಥರಾದ ಚಿರಾಗ್, ರೆವಿನ್ಯೂ ಇನ್ಸ್‌ಪೆಕ್ಟರ್ ರೇಣುಕಯ್ಯ, ಮುಜರಾಯಿ ಇಲಾಖೆಯ ಶಿಲ್ಪಾ, ಚುನಾವಣೆ ಇಲಾಖೆಯ ಶಿರಾಸ್ಥೆದಾರ್ ಸತೀಶ್, ಆಹಾರ ಇಲಾಖೆಯ ಅಧಿಕಾರಿ ನಾಗರಾಜ್, ಅಶೋಕ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಲ್ಲಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವುದರ ಮೂಲಕ ಗಾಂಧಿ ಜಯಂತಿ ಆಚರಿಸಲಾಯಿತು. ಕಛೇರಿ ಸಿಬ್ಬಂದಿಗಳಾದ ರೆಡ್ಡಿ, ಮಹೇಶ್, ಯಶೋಧ, ಜಯಲಕ್ಷ್ಮಿ, ಕೃಷಿ ಅಧಿಕಾರಿಗಳಾದ, ಪ್ರತಿಮಾ, ಸುಬ್ರಹ್ಮಣ್ಯ ಭಾಗವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ, ಅಭಿಷೇಕ್ ರವರಿಂದ ಗೀತ ಗಾಯನ ಕಾರ್ಯಕ್ರಮ ನಡೆಸಲಾಯಿತು.

Leave A Reply

Your email address will not be published.

error: Content is protected !!