Hosanagara | ಅಂಚೆ ಇಲಾಖೆಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಧರಣಿ


ಹೊಸನಗರ: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಅಂಚೆ ಇಲಾಖೆ 169 ವರ್ಷ ಸಂಭ್ರಮದಲ್ಲಿದ್ದು ಆದರೆ ನಮ್ಮ ಕೆಲವು ಬೇಡಿಕೆ ಈಡೇರಿಸಲಿಲ್ಲ ಎಂದು ಶಿವಮೊಗ್ಗ ಜಿಲ್ಲಾ ಎ.ಐ.ಜಿ.ಓ.ಎಸ್.ಯು ಅಧ್ಯಕ್ಷ ಹೆಚ್.ಜಿ. ವೆಂಕಟೇಶ್‌ರವರ ನೇತೃತ್ವದಲ್ಲಿ ಪಟ್ಟಣದ ಅಂಚೆ ಕಚೇರಿಯ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ವೇಂಕಟೇಶ್‌, ಕೇಂದ್ರ ಸರ್ಕಾರ ನಮ್ಮ ಹೋರಾಟಕ್ಕೆ ಮುನಿದು 2016ನೇ ವರ್ಷದಲ್ಲಿ ಕಮಲೇಶ್ ಚಂದ್ರ ಕಮಿಟಿ ಆಯೋಗ ನೇಮಕ ಮಾಡಿ ಗ್ರಾಮೀಣ ಅಂಚೆ ನೌಕರರ ಸ್ಥಿತಿ-ಗತಿ ಬಗ್ಗೆ ವರದಿ ಕೇಳಿತ್ತು. ಈ ವರದಿ ಸಲ್ಲಿಸಿ 7 ವರ್ಷಗಳ ಕಾಲ ಕಳೆದರೂ ಅದನ್ನು ಸಂಪೂರ್ಣವಾಗಿ ಜಾರಿಗೊಳಿಸದೇ ಕೇಂದ್ರ ಸರ್ಕಾರ ಮತ್ತು ಅಂಚೆ ಇಲಾಖೆ ಆಡಳಿತ ವ್ಯವಸ್ಥೆ ತಾರತಮ್ಯ ನೀತಿಯನ್ನು ಅನುಸರಿಸುತ್ತಿದೆ ನಮ್ಮ ಬೇಡಿಕೆಗಳಾದ 8 ಗಂಟೆ ಕಾಲ ಕೆಲಸ ನೀಡುವುದು ಮತ್ತು ಪಿಂಚಣಿ ಸೇರಿದಂತೆ ಎಲ್ಲಾ ಸವಲತ್ತುಗಳನ್ನು ಒದಗಿಸುವುದು, ಸೇವಾ ಹಿರಿತನದ ಆಧಾರದ ಮೇಲೆ 12-24-36 ಸೇವೆ ಸಲ್ಲಿಸಿದ ಗ್ರಾಮೀಣ ಅಂಚೆ ನೌಕರರಿಗೆ ವಿಶೇಷ ಇನ್‌ಕ್ರೀಮೆಂಟ್ ನೀಡುವುದು ಗ್ರೂಪ್ ಇನ್ಶುರೆನ್ಸ್ ರೂಪಾಯಿ 5 ಲಕ್ಷಕ್ಕೆ ಏರಿಸುವುದು. ಜಿಡಿಎಸ್ ಗ್ರಾಚ್ಯುಟಿ ಹಣ ರೂಪಾಯಿ 5 ಲಕ್ಷಕ್ಕೆ ಹೆಚ್ಚಿಸುವುದು. 180 ದಿನಗಳ ರಜೆ ಉಳಿಸಿಕೊಳ್ಳಲು ಅವಕಾಶ ಕಲ್ಪಿಸುವುದು ಜಿಡಿಎಸ್ ಮತ್ತು ಅವರ ಕುಟುಂಬದ ಸದಸ್ಯರಿಗೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವುದು ಇತ್ಯಾದಿ ಬೇಡಿಕೆಗಳಿದ್ದು ತಕ್ಷಣ ಕೇಂದ್ರ ಸರ್ಕಾರ ಸ್ಪಂದಿಸಬೇಕೆಂದರು.


ಈ ಧರಣಿಯಲ್ಲಿ ಕಾಯಾಧ್ಯಕ್ಷರಾದ ಉಮೇಶ್, ಸಚಿನ್ ಹೆಚ್.ವಿ, ಲಕ್ಷ್ಮಿನಾರಾಯಣ, ಮೇಘರಾಜ್, ರ‍್ಯಾವೆ ಈಶ್ವರ, ಸೌಜನ್ಯ, ವಿನುತಾ ಇನ್ನೂ ಮುಂತಾದವರು ಪಾಲ್ಗೊಂಡಿದ್ದರು.

Malnad Times

Recent Posts

Rain Alert | ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…

1 week ago

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

1 week ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

1 week ago

ಮತದಾನಕ್ಕೆ ಕೌಂಟ್‌ಡೌನ್ | ಮತಗಟ್ಟೆಗಳಿಗೆ ಮತಯಂತ್ರ ಇತರ ಪರಿಕರಗಳೊಂದಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…

1 week ago

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 week ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

1 week ago