Hosanagara | ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 10 ಟಿಪ್ಪರ್ ಲಾರಿಗಳು ವಶಕ್ಕೆ

0 996

ಹೊಸನಗರ: ಇಲ್ಲಿನ ಠಾಣೆಯ ಪಿಎಸ್ಐ ರಾಜುರೆಡ್ಡಿ ಹಾಗೂ ಸಿಬ್ಬಂದಿಗಳು ತಾಲ್ಲೂಕಿನಲ್ಲಿ ಕ್ಷೀಪ್ರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 10 ಟಿಪ್ಪರ್‌ ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ.

ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ ಮಾರ್ಗದರ್ಶನದಲ್ಲಿ ಶುಕ್ರವಾರ ರಾತ್ರಿ ತಾಲ್ಲೂಕಿನ ಮುಳುಗುಡ್ಡೆ, ಹರಿದ್ರಾವತಿ, ಈಚಲಕೊಪ್ಪ ಸುತ್ತಾ, ವಿಜಾಪುರ ಗ್ರಾಮಗಳಲ್ಲಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ಒಟ್ಟು 10 ಟಿಪ್ಪರ್‌ ಲಾರಿಗಳನ್ನು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ.

ಈ ದಾಳಿ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳಾದ ಗಂಗಪ್ಪ, ಸುನೀಲ್, ರಂಜಿತ್‌ಕುಮಾರ್, ಮಾಯಪ್ಪ, ಸಂದೀಪ, ವಾಹನ ಚಾಲಕರಾದ ಅವಿನಾಶ್ ಇನ್ನೂ ಮುಂತಾದವರು ಭಾಗವಹಿಸಿದ್ದರು.

ಹೊಸನಗರ ತಾಲ್ಲೂಕಿನಲ್ಲಿ ಅಕ್ರಮ ಮರಳು ದಂಧೆ ಯಾವುದೇ ಭಯವಿಲ್ಲದೆ ನಡೆಯುತ್ತಿರುವುದು ನಮ್ಮ ಇಲಾಖೆಯ ಗಮನದಲ್ಲಿದ್ದು, ನಾವು ಪ್ರತಿದಿನ ದಾಳಿ ನಡೆಸಿ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕುತ್ತೇವೆ. ತಾಲೂಕಿನ ಯಾವುದೇ ಮೂಲೆಯಲ್ಲಿಯೂ ಗಣಿಗಾರಿಕೆ ನಡೆಯುತ್ತಿದ್ದರೂ ಪತ್ತೆ ಹಚ್ಚಿ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು.
– ರಾಜುರೆಡ್ಡಿ, ಹೊಸನಗರ ಪಿಎಸ್ಐ

Leave A Reply

Your email address will not be published.

error: Content is protected !!