Hosanagara | ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ, ಐವರ ವಿರುದ್ಧ FIR ದಾಖಲು

0 1,034

ಹೊಸನಗರ : ತಾಲೂಕಿನಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಘಟನೆ ಸಂಬಂಧ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.

ಬಿಜೆಪಿ ತಾಲೂಕು ಯುವ ಮೋರ್ಚಾ ಅಧ್ಯಕ್ಷ ನಗರ ನಿತಿನ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಭಾನುವಾರ ರಾತ್ರಿ ನಿತಿನ್ ತಮ್ಮ ಸಹೋದರ ನವೀನ್ ಜೊತೆ ಕಾರಿನಲ್ಲಿ ದೇವಗಂಗೆ ಬಸವನಬ್ಯಾಣ ಗ್ರಾಮದ ತಮ್ಮ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಮಳಲಿ ಗ್ರಾಮದ ಪ್ರಕಾಶ ಮತ್ತು ಆತನ ಸಹಚರರು ಕಾರಿ ಅಡ್ಡಗಟ್ಟಿ ಥಳಿಸಿದ್ದಾರೆ.

ಕಾರಿನ ಹಿಂಬದಿಯ ಗಾಜು ಒಡೆದು ಹಾಕಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ನಗರ ಠಾಣೆ ಪೊಲೀಸರಿಗೆ ದೂರು ನೀಡಲಾಗಿದೆ.

ಪ್ರಕಾಶ್, ಸಂದೇಶ್, ನಾಗೇಶ್, ನವೀನ್, ಸಚಿನ್ ಎಂಬುವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಾಯಗೊಂಡ ನಿತಿನ್ ಮತ್ತು ನವೀನ್ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಳೆ ದ್ವೇಷದ ಹಿನ್ನೆಲೆಯಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದ್ದಾರೆ.

Leave A Reply

Your email address will not be published.

error: Content is protected !!