Hosanagara | ಬೆಳಂಬೆಳಗ್ಗೆ ಅಗ್ನಿ ಅನಾಹುತ, ಕೊಟ್ಟಿಗೆ ನಾಶ

ಹೊಸನಗರ : ಪಟ್ಟಣದ ಶಿವಮೊಗ್ಗ ರಸ್ತೆಯ ಶ್ರೀ ಗುರುಶಕ್ತಿ ಆಟೋಮೊಬೈಲ್ ಪಕ್ಕದ ಯಲ್ಲಪ್ಪ ಪೂಜಾರಿ ಎಂಬವರಿಗೆ ಸೇರಿದ ಚಂದಮ್ಮ ನಿವಾಸದ ಹಿಂಭಾಗದ ಬಚ್ಚಲಮನೆಗೆ ಬೆಳಿಗ್ಗೆ 7:30ರ ಸಮಯದಲ್ಲಿ ನೀರು ಕಾಯಿಸಲು ಬೆಂಕಿ ಹಾಕಿದ್ದು ಬೆಂಕಿಯ ಜ್ವಾಲೆ ಹೊಗೆ ಪೈಪಿನ ಒಳಗಡೆ ಆವರಿಸಿಕೊಂಡು ಬಚ್ಚಲು ಒಲೆಗೆ ಹೊಂದಿಕೊಂಡಂತಿದ್ದ ಕೊಟ್ಟಿಗೆಯಲ್ಲಿ ದಾಸ್ತಾನು ಮಾಡಿದ್ದ ಹುಲ್ಲಿನ ಪೆಂಡಿಗಳಿಗೆ ಬೆಂಕಿ ತಗುಲಿದ ಪರಿಣಾಮ ಇಡಿ ಕೊಟ್ಟಿಗೆಗೆ ಬೆಂಕಿ ಆವರಿಸಿಕೊಂಡು ಆತಂಕದ ಕ್ಷಣ ಹುಟ್ಟು ಹಾಕಿತ್ತು.

ಬೆಂಕಿ ಜ್ವಾಲೆ ಹೆಚ್ಚುತ್ತಿದ್ದಂತೆ ಅಗ್ನಿಶಾಮಕ ದಳಕ್ಕೆ ಸುದ್ದಿ ಮುಟ್ಟಿಸಿದ್ದು ಅಗ್ನಿಶಾಮಕದ ಸಿಬ್ಬಂದಿಗಳ ತತ್ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತವಾಗುವುದನ್ನು ತಪ್ಪಿಸಿದರು.

ಈ ಘಟನೆಯಿಂದ ಹೆಂಚು, ಪಕಾಶಿ, ಹುಲ್ಲು ಸೇರಿದಂತೆ ಕೆಲವು ವಸ್ತುಗಳು ಸುಟ್ಟು ಭಸ್ಮವಾಗಿದ್ದು ಮೂರು ಲಕ್ಷ ರೂ. ನಷ್ಟು ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ. ಈ ಸಂಬಂಧ ತಹಶೀಲ್ದಾರ್ ರಶ್ಮಿ ಅವರಿಗೆ ಮಾಹಿತಿ ನೀಡಿರುವ ಬಗ್ಗೆ ತಿಳಿದು ಬಂದಿದೆ‌.

Malnad Times

Recent Posts

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

45 mins ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

4 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

4 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

9 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

11 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

24 hours ago