Hosanagara | ವಿಕಲಚೇತನ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಭಾಗವಹಿಸುವ ನಿರೀಕ್ಷೆ

ಹೊಸನಗರ: ಮುಂಬರುವ ಜನವರಿ 24ರಲ್ಲಿ ಪಟ್ಟಣದ ನೆಹರು ಕ್ರೀಡಾಂಗಣದಲ್ಲಿ ತಾಲೂಕಿನ ಹಲವು ಸಮಾನಮನಸ್ಕರ ಬಳಗವು ಪಕ್ಷಾತೀತವಾಗಿ ಆಯೋಜಿಸಲು ಉದ್ದೇಶಿಸಿರುವ ‘ವಿಕಲ ಚೇತನ ಸಾಧಕರಿಗೆ ಸನ್ಮಾನ’ ಕಾರ್ಯಕ್ರಮದ ಅತಿಥಿಗಳಾಗಿ ವೇದಿಕೆ ಹಂಚಿಕೊಳ್ಳುವ ಇಂಗಿತವನ್ನು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ವ್ಯಕ್ತಪಡಿಸಿದ್ದಾರೆ ಎಂದು ಕಾರ್ಯಕ್ರಮದ ಸಂಚಾಲಕ ತ್ರಿಣಿವೆ ಜಯರಾಮ ಶೆಟ್ಟಿ ತಿಳಿಸಿದ್ದಾರೆ.


ಇದೊಂದು ಅಭೂತಪೂರ್ವ ಕಾರ್ಯಕ್ರಮವಾಗಿ ಹೊರಹೊಮ್ಮುವ ವಿಶ್ವಾಸ ವ್ಯಕ್ತಪಡಿಸಿದ ಅವರು, ತಾಲೂಕಿನ ಒಟ್ಟು 30 ಗ್ರಾಮ ಪಂಚಾಯತಿಗಳ ಪೈಕಿ, ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಿಂದ ಫಲಾಪೇಕ್ಷೆ ರಹಿತ ಸಮಾಜಮುಖಿ ಕಾರ್ಯನಿರ್ವಹಿಸುತ್ತಿರುವ ಓರ್ವ ವಿಕಲಚೇತನ ಸಾಧಕನನ್ನು ಗುರುತಿಸಿ ಸನ್ಮಾನಿಸುವ ಮೂಲಕ ಅವರ ಸಾಧನೆಗೆ ಮತ್ತಷ್ಟು ಸ್ಪೂರ್ತಿ ತುಂಬುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು.


ಈ ಸಂಬಂಧ ಅವರು ಈಗಾಗಲೇ ಮಾಜಿ ಪ್ರಧಾನಿ ದೇವೇಗೌಡ, ಶಾಸಕ ಗೋಪಾಲಕೃಷ್ಣ ಬೇಳೂರು, ಆರಗ ಜ್ಞಾನೇಂದ್ರ, ಸಹಕಾರಿ ಧುರೀಣ ಆರ್.ಎಂ. ಮಂಜುನಾಥ ಗೌಡ ಸೇರಿದಂತೆ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಹಲವು ಗಣ್ಯರ ಸಂಪರ್ಕ ಸಾಧಿಸಿದ್ದು, ಅವರಿಂದಲೂ ಸಹ ಕಾರ್ಯಕ್ರಮ ಆಯೋಜನೆಗೆ ಸಾಕಷ್ಟು ಬೆಂಬಲ ವ್ಯಕ್ತವಾಗಿದೆ. ಇದಕ್ಕಾಗಿ ಪಕ್ಷಾತೀತ ಸಮಿತಿಯೊಂದು ಶೀಘ್ರವೇ ರಚನೆಗೊಳ್ಳಲಿದ್ದು, ಸಾಧಕರ ಸನ್ಮಾನದ ಬಳಿಕ ಹಲವಾರು ಮನೋರಂಜನೆ ಕಾರ್ಯಕ್ರಮ ನಡೆಸುವ ಇರಾದೆ ತಮಗಿದೆ ಎಂದಿದ್ದಾರೆ.


ಶೀಘ್ರದಲ್ಲೇ ಕಾರ್ಯಕ್ರಮದ ದಿನಾಂಕ ನಿಗದಿಗೊಳ್ಳಲಿದ್ದು, ಆ ಬಳಿಕವಷ್ಟೇ ಕಾರ್ಯಕ್ರಮ ಆಯೋಜನೆಗೆ ಚಾಲನೆ ದೊರೆಯಲಿದೆ ಎಂಬುದಾಗಿ ತ್ರಿಣಿವೆ ಜಯರಾಮ ಶೆಟ್ಟಿ ತಿಳಿಸಿದ್ದಾರೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago