JNNCE : ರಾಜ್ಯಕ್ಕೆ‌ ಮೊದಲ ರ‌್ಯಾಂಕ್ ಪಡೆದ‌ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿದ್ಯಾರ್ಥಿನಿ

0 6

ಶಿವಮೊಗ್ಗ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ 2020-23 ನೇ ಸಾಲಿನ ವಿವಿಧ ಇಂಜಿನಿಯರಿಂಗ್ ವಿಭಾಗಗಳ ಪರೀಕ್ಷೆಗಳಲ್ಲಿ ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಪಾರ್ವತಿ ಸಲೇರಾ ರಾಜ್ಯಕ್ಕೆ ಪ್ರಥಮ ರ‌್ಯಾಂಕ್ ಪಡೆದಿದ್ದಾರೆ.

ಇದೇ ವೇಳೆ ಎಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಸ್ಮೃತಿ.ಕೆ.ವಂತಕರ್ ರಾಜ್ಯಕ್ಕೆ 9ನೇ ರ‌್ಯಾಂಕ್ ಪಡೆದಿದ್ದಾರೆ.


ವಿದ್ಯಾರ್ಥಿಗಳ ಈ ಅಮೋಘ ಸಾಧನೆಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ಆಡಳಿತ ಮಂಡಳಿ ಸದಸ್ಯರು ಹಾಗೂ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

Leave A Reply

Your email address will not be published.

error: Content is protected !!