Leopard cat | ಅಸ್ವಸ್ಥ ಸ್ಥಿತಿಯಲ್ಲಿ ಅಪರೂಪದ ಚಿರತೆ ಬೆಕ್ಕು ಪತ್ತೆ ; ಅರಣ್ಯಾಧಿಕಾರಿಗಳಿಂದ ರಕ್ಷಣೆ

ಹೊಸನಗರ : ತೀವ್ರ ಅಸ್ವಸ್ಥ ಸ್ಥಿತಿಯಲ್ಲಿ ಅಪರೂಪದ ಚಿರತೆ ಬೆಕ್ಕು (Leopard cat) ಪತ್ತೆಯಾಗಿದ್ದು ಅರಣ್ಯಾಧಿಕಾರಿಗಳು ರಕ್ಷಿಸಿರುವ ಘಟನೆ ತಾಲೂಕಿನ ಪುರಪ್ಪೆಮನೆ ಬಳಿ ನಡೆದಿದೆ.

ಚಿರತೆ ಬೆಕ್ಕು ಪಶ್ಚಿಮ ಘಟ್ಟಗಳಲ್ಲಿ ಕಂಡುಬರುವ ಅಪರೂಪದ ಜಾತಿಗಳಲ್ಲಿ ಒಂದಾಗಿದೆ. ಪುರಪ್ಪೆಮನೆ – ಗಡಿಕಟ್ಟೆ ಮಾರ್ಗ ಮಧ್ಯದಲ್ಲಿ ಜೀವನ್ಮರಣ ಹೋರಾಟದಲ್ಲಿದ್ದ ಚಿರತೆ ಬೆಕ್ಕು ರಸ್ತೆ ಬದಿಯ ಚರಂಡಿಯಲ್ಲಿ ಬಿದ್ದಿತ್ತು. ಚಿರತೆಯಂತೆ ಕಾಣಿಸುವ ಬೆಕ್ಕನ್ನು ಕಂಡ ಸ್ಥಳೀಯರು ಭಯಭೀತರಾಗಿ ಅರಣ್ಯಾಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದಾರೆ.

ತಕ್ಷಣ ಸ್ಥಳಕ್ಕೆ ತೆರಳಿದ ಹೊಸನಗರ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಎಂ ಹಾಗೂ ಸಿಬ್ಬಂದಿಗಳ ತಂಡ ಚಿರತೆ ಬೆಕ್ಕನ್ನು ಶಿವಮೊಗ್ಗ ತ್ಯಾವರೆಕೊಪ್ಪದ ಹುಲಿ ಸಿಂಹಧಾಮದಲ್ಲಿರುವ ವನ್ಯಜೀವಿಗಳ ಆರೈಕೆ ಕೇಂದ್ರಕ್ಕೆ ಕರೆದೊಯ್ದು ಸೂಕ್ತ ಚಿಕಿತ್ಸೆ ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ವಲಯ ಅರಣ್ಯಾಧಿಕಾರಿ ಎಂ ರಾಘವೇಂದ್ರ, ಚಿರತೆ ಬೆಕ್ಕು ಪಶ್ಚಿಮ ಘಟ್ಟಗಳಲ್ಲಿ ಮಾತ್ರ ಕಂಡುಬರುತ್ತದೆ ಮತ್ತು ಇದರ ಜೀವಿತಾವಧಿ 7-8 ವರ್ಷಗಳು. ಚಿರತೆ ಬೆಕ್ಕು ಕಾಡಿನ ಕೋಳಿ, ಮೊಲ, ಅಳಿಲುಗಳು ಮತ್ತು ಕೆಲವು ಪಕ್ಷಿಗಳನ್ನು ಬೇಟೆಯಾಡುತ್ತದೆ. ಇದು ಮರಗಳ ಮೇಲೆ ವಾಸಿಸುತ್ತದೆ. ವಿನಾಶದ ಅಂಚಿನಲ್ಲಿರುವ ಪ್ರಾಣಿಗಳ ಪಟ್ಟಿಯಲ್ಲಿ ಚಿರತೆ ಬೆಕ್ಕು ಸೇರಿದೆ ಎಂದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

5 days ago